ಪಂಚಮಸಾಲಿ 2 ಎ ಮೀಸಲಾತಿಗಾಗಿ ಹೋರಾಟ ವಿಚಾರದಲ್ಲಿ ಸ್ಪಷ್ಟವಾದ ನಿರ್ಧಾರ ಕೈಗೊಳ್ಳುವಂತೆ ಸಿಎಂ ಜೊತೆ ಚರ್ಚೆ ಮಾಡಲಾಗಿದೆ. ಸಿಎಂ ಕೂಡ ಈ ವಿಚಾರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು.
ಹುಬ್ಬಳ್ಳಿ (ಮಾ.6) : ಪಂಚಮಸಾಲಿ 2 ಎ ಮೀಸಲಾತಿಗಾಗಿ ಹೋರಾಟ ವಿಚಾರದಲ್ಲಿ ಸ್ಪಷ್ಟವಾದ ನಿರ್ಧಾರ ಕೈಗೊಳ್ಳುವಂತೆ ಸಿಎಂ ಜೊತೆ ಚರ್ಚೆ ಮಾಡಲಾಗಿದೆ. ಸಿಎಂ ಕೂಡ ಈ ವಿಚಾರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಹೇಳಿದರು.
ಇಂದು ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು, ನಾನು ಸಿಎಂರನ್ನು ಭೇಟಿಯಾಗುವುದು ಹೊಸದೇನೂ ಅಲ್ಲ. ನಿರಂತರವಾಗಿ ಸಿಎಂ ಅವರನ್ನ ಭೇಟಿಯಾಗುತ್ತಿರುತ್ತೇನೆ. ಶಿಗ್ಗಾವಿಯಲ್ಲಿ ಇದೇ ಮಾರ್ಚ್ 19 ರಂದು ಕಲ್ಯಾಣಮಂಟಪ ಉದ್ಘಾಟನಾ ಕಾರ್ಯಕ್ರಮ ಇರುವುದರಿಂದ ಆ ಬಗ್ಗೆ ಚರ್ಚೆ ಮಾಡುವುದಕ್ಕೆ ಬಂದಿದ್ದೆ ಎಂದರು.
ಆಪಾದನೆ ಮಾಡುವ ಮೊದಲು ಶುದ್ಧಹಸ್ತರಿರಬೇಕು; ಕಾಂಗ್ರೆಸ್ ಪಕ್ಷವೇ ಭ್ರಷ್ಟಾಚಾರದ ಕೂಪ: ಸಿಎಂ
ಪಂಚಮಸಾಲಿ ಮೀಸಲಾತಿ ವಿಚಾರ ಪ್ರಸ್ತಾಪಿಸಿದ ಸ್ವಾಮಿಗಳು, ಪಂಚಮಸಾಲಿ 2 ಎ ಮೀಸಲಾತಿಗಾಗಿ ಹೋರಾಟ ವಿಚಾರದಲ್ಲಿ ಸ್ಪಷ್ಟವಾದ ನಿರ್ಧಾರ ಕೈಗೊಳ್ಳುವಂತೆ ಸಿಎಂ ಜೊತೆ ಚರ್ಚೆ ಮಾಡಿದ್ದೇನೆ. ಸಿಎಂ ಕೂಡ ಈ ವಿಚಾರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಮಾಜಕ್ಕೆ ಒಳ್ಳೆಯ ದಿನಗಳು ಬರಲಿವೆ ಎಂದು ಮೀಸಲಾತಿ ಸಿಗುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದರು.
ಸ್ವಾಮೀಜಿಗಳಲ್ಲಿ ಭಿನ್ನಾಭಿಪ್ರಾಯದಲ್ಲಿ ಯಾವುದೇ ಹಿನ್ನಡೆ ಇಲ್ಲ. ಅದು ಅವರವರ ಕಲ್ಪನೆ ಅಷ್ಟೇ. ಅದರ ಬಗ್ಗೆ ಹೆಚ್ಚಿಗೆ ಮಾತನಾಡಲು ಇಷ್ಟಪಡುವುದಿಲ್ಲ. ನಮಗೆ ಸಾಮಾಜಿಕ ನ್ಯಾಯ ಸಿಗಬೇಕು ಅನ್ನುವುದೇ ನಮ್ಮ ಉದ್ದೇಶ. ನಮ್ನ ನಂಬಿಕೆ ಕಾನೂನಾತ್ಮಕ ಹಾಗೂ ಭಾವನಾತ್ಮಕವಾಗಿದೆ. ಸಂವಿಧಾನಾತ್ಮಕ ಹಾಗೂ ಕಾನೂನಾತ್ಮಕ ತೊಡಕುಗಳನ್ನ ಬಗೆಹರಿಸುವ ನಿಟ್ಟಿನಲ್ಲಿ ಚರ್ಚೆ ನಡೆದಿದೆ.ಸರ್ಕಾರ ಈ ವಿಚಾರದಲ್ಲಿ ತೆಗೆದುಕೊಳ್ಳುವ ನಿರ್ಧಾರದ ಬಗ್ಗೆ ನಾವು ಕಾಯುತ್ತಿದ್ದೇವೆ .
ಪಂಚಮಸಾಲಿ 2ಎ ಮೀಸಲಿಗೆ ಶಾಸಕ ಪಾಟೀಲ ಬೆಂಬಲ
ಮಠಾಧೀಶರನ್ನು ಚುನಾವಣಾ ಅಖಾಡಕ್ಕಿಳಿಸುವ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಆಗ ಬಗ್ಗೆ ನೋ ಕಮೆಂಟ್ಸ್ ಎಂದಷ್ಟೇ ಹೇಳಿದ ವಚನಾನಂದ ಸ್ವಾಮೀಜಿ.