ವಾಲ್ಮೀಕಿ ಜಗತ್ತಿನ ಪ್ರಪ್ರಥಮ ದಾರ್ಶನಿಕ

By Kannadaprabha News  |  First Published Oct 10, 2022, 4:34 AM IST

ಶ್ರೀ ಮಹರ್ಷಿ ವಾಲ್ಮೀಕಿಯು ರಾಮಾಯಣ ಗ್ರಂಥದ ಮೂಲಕ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪ್ರಥಮವಾಗಿ ಪರಿಚಯಿಸಿದ ದಾರ್ಶನಿಕರು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್‌ ಅಭಿಪ್ರಾಯಪಟ್ಟರು.


 ತುಮಕೂರು (ಅ.10) : ಶ್ರೀ ಮಹರ್ಷಿ ವಾಲ್ಮೀಕಿಯು ರಾಮಾಯಣ ಗ್ರಂಥದ ಮೂಲಕ ಮಾನವೀಯ ಮೌಲ್ಯಗಳನ್ನು ಜಗತ್ತಿಗೆ ಪ್ರಥಮವಾಗಿ ಪರಿಚಯಿಸಿದ ದಾರ್ಶನಿಕರು ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್‌ ಅಭಿಪ್ರಾಯಪಟ್ಟರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಪರಿಶಿಷ್ಟವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾನಗರಪಾಲಿಕೆ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಭಾನುವಾರ ನಗರದ ಡಾ. ಗುಬ್ಬಿವೀರಣ್ಣ ರಂಗ ಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Tap to resize

Latest Videos

ಪ್ರಪಂಚದ ಮೊದಲ ಮಹಾಕಾವ್ಯದ ಕತೃ ಮಹರ್ಷಿ ವಾಲ್ಮೀಕಿಯವರ ಜಯಂತಿ ಆಚರಣೆಯ ಶುಭಾಶಯ ಕೋರಿದ ಅವರು, ಸಾಧಿಸುವ ಮನಸ್ಸಿದ್ದಲ್ಲಿ, ನಾವು ಏನನ್ನಾದರೂ ಸಾಧಿಸಬಹುದು, ಸಾಮಾನ್ಯ ವ್ಯಕ್ತಿಯೊಬ್ಬ ಮಹಾಕಾವ್ಯ ರಚಿಸುವಷ್ಟರ ಮಟ್ಟಿಗೆ ಜ್ಞಾನ ಸಂಪಾದನೆ ಮಾಡಿ, ಅಜ್ಞಾನದಿಂದ ಸುಜ್ಞಾನದೆಡೆಗೆ ಸಾಗುವ ದಾರಿಯನ್ನು ತೋರಿಸಿಕೊಟ್ಟಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಾಣ ಗ್ರಂಥದ ನೈತಿಕ ಮೌಲ್ಯಗಳು, ಪ್ರತಿ ವ್ಯಕ್ತಿಯ ಜೀವನದ ನಡೆಯುವ ಹಲವು ಘಟನೆಗಳಿಗೆ ಆದರ್ಶಪ್ರಾಯವಾಗಿವೆ. ಪ್ರತಿಯೊಬ್ಬರೂ ಮಹರ್ಷಿ ವಾಲ್ಮೀಕಿ ಅವರ ವಿಚಾರಧಾರೆಗಳು, ತತ್ವಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಅವರು ಹಾಕಿಕೊಟ್ಟಮಾರ್ಗದಲ್ಲಿ ನಾವಿಂದು ಸಾಗಬೇಕಿದೆ, ರಾಜ್ಯ ಸರ್ಕಾರವು ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಚ್‌.ಎನ್‌. ನಾಗಮೋಹನ್‌ ದಾಸ್‌ ಆಯೋಗ ನೀಡಿರುವ ವರದಿಯನ್ನು ಯಥಾವತ್ತಾಗಿ ಸದ್ಯದಲ್ಲೇ ಜಾರಿಗೆ ತರಲಿದೆ. ಎಸ್‌ಸಿ ಮೀಸಲಾತಿಯನ್ನು ಶೇಕಡ 15ರಿಂದ ಶೇ 17ಕ್ಕೆ ಮತ್ತು ಎಸ್‌ಟಿ ಮೀಸಲಾತಿಯನ್ನು ಶೇ 3ರಿಂದ 7ಕ್ಕೆ ಹೆಚ್ಚಿಸಲಾಗುತ್ತದೆ. ಇಂತಹ ದಿಟ್ಟನಿರ್ಧಾರ ತೆಗೆದುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಭಿನಂದನಾರ್ಹರು, ದೀನದಲಿತರ ಅಭಿವೃದ್ಧಿಗೆ ಸರ್ಕಾರ ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಿದೆ. ಎಲ್ಲಾ ಸಮುದಾಯದ ಶೋಷಿತ ಮತ್ತು ದುರ್ಬಲವರ್ಗದ ವ್ಯಕ್ತಿಗಳು ವಿದ್ಯಾವಂತರಾಗಬೇಕು. ಸಮುದಾಯಗಳು ಅಭಿವೃದ್ಧಿಗೊಂಡರೆ ದೇಶ ಅಭಿವೃದ್ಧಿಗೊಳ್ಳುತ್ತದೆ ಎಂದು ತಿಳಿಸಿದರು.

ಜಿಲ್ಲಾ ನಾಯಕ ಮಹಿಳಾ ಸಮಾಜದ ಅಧ್ಯಕ್ಷೆ ಎಸ್‌.ಆರ್‌. ಶಾಂತಲಾ ರಾಜಣ್ಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದೇ ಸಂದರ್ಭದಲ್ಲಿ ಎಸ್‌ಎಸ್‌ಎಲ…ಸಿ ಪರೀಕ್ಷೇಯಲ್ಲಿ ಜಿಲ್ಲೆಗೆ ಅತೀ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟವರ್ಗದ ವಿದ್ಯಾರ್ಥಿನಿ ಲೇಖನ ಎನ್‌.ಗೆ ಒಂದು ಲಕ್ಷ ರು.ಬಹುಮಾನ ಮಂಜೂರಾತಿ ಪತ್ರ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಜನಪದ, ದಾಸ ಸಾಹಿತ್ಯದ ಗೀತೆಗಳ ಗಾಯನ ಸಭಿಕರ ಗಮನ ಸೆಳೆಯಿತು.

ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಡಿಡಿಪಿಐ ಸಿ.ನಂಜಯ್ಯ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೇಮ, ಜಿಲ್ಲಾ ನಾಯಕ ಮಹಿಳಾ ಸಮಾಜದ ಅದ್ಯಕ್ಷರಾದ ಎಸ್‌.ಆರ್‌. ಶಾಂತಲಾ ರಾಜಣ್ಣ, ಜಿಲ್ಲಾ ಪರಿಶಿಷ್ಟವರ್ಗಗಳ ಕಲ್ಯಾಣಾಧಿಕಾರಿ ಡಾ. ಶ್ರೀಧರ್‌, ಜಿಲ್ಲಾ ಪರಿಶಿಷ್ಟಪಂಗಡಗಳ ವ್ಯವಸ್ಥಾಪಕ ಶ್ರೀನಿವಾಸ್‌ ಎಚ್‌, ತಹಸೀಲ್ದಾರ್‌ ಮೋಹನ್‌ ಕುಮಾರ್‌, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಅಖಿಲ ಕರ್ನಾಟಕ ವಾಲ್ಮೀಕಿ ಸೇನೆ ರಾಜ್ಯ ಅಧ್ಯಕ್ಷರಾದ ಪ್ರತಾಪ್‌ ಮದಕರಿ, ವಾಲ್ಮೀಕಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಎಚ್‌.ಜಿ.ಪುರುಷೋತ್ತಮ, ಸಮುದಾಯದ ಮುಖಂಡರು ಹಾಗೂ ಇತರೆ ಗಣ್ಯರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿವಿಧ ಸಂಘಟನೆಯ ಪದಾಧಿಕಾರಿಗಳು ಹಾಗೂ ಮಹರ್ಷಿ ವಾಲ್ಮೀಕಿಯು ಅಭಿಮಾನಿಗಳು ಇನ್ನಿತರರು ಕಾರ‍್ಯಕ್ರಮದಲ್ಲಿ ಹಾಜರಿದ್ದರು.

ರಾಮಾಯಣ ಮಹಾಕಾವ್ಯವು ಎಲ್ಲ ಕಾಲಘಟ್ಟ, ಪೀಳಿಗೆಗೆ ಅನ್ವಯವಾಗುತ್ತದೆ. ವಾಲ್ಮೀಕಿ ಮಹರ್ಷಿಯವರ ಹೆಸರೇ ಎಲ್ಲರಿಗೂ ಪ್ರೇರಣದಾಯಕ. ಪವಿತ್ರ ಪುಸ್ತಕ ರಾಮಾಯಣದಲ್ಲಿ ಪ್ರೀತಿ, ತ್ಯಾಗ, ದೃಢತೆ ಮತ್ತು ಖ್ಯಾತಿಯ ಭಾವನೆಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ. ಬೇಡನೊಬ್ಬ ಮಹಾನ್‌ ಕವಿಯಾಗಿ, ಪ್ರಜಾಪ್ರಭುತ್ವದ ಸಮಗ್ರ ಪರಿಕಲ್ಪನೆಯನ್ನು ರಾಮಾಯಣದ ಮೂಲಕ ಇಡೀ ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ.

ಕೆ.ವಿದ್ಯಾಕುಮಾರಿ ಜಿಲ್ಲಾ ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ

click me!