ಬೆಂಗ್ಳೂರಿಂದ ಮುಂಬೈ, ಹೈದರಾಬಾದ್‌ಗೆ ವಂದೇ ಭಾರತ್‌ ರೈಲು

Published : Mar 30, 2023, 11:55 AM ISTUpdated : Mar 30, 2023, 12:18 PM IST
ಬೆಂಗ್ಳೂರಿಂದ ಮುಂಬೈ, ಹೈದರಾಬಾದ್‌ಗೆ ವಂದೇ ಭಾರತ್‌ ರೈಲು

ಸಾರಾಂಶ

ಮೈಸೂರು-ಬೆಂಗಳೂರು-ಚೆನ್ನೈ ನಡುವೆ ವಂದೇ ಭಾರತ್‌ ರೈಲು ಸಂಚಾರ ಈಗಾಗಲೇ ಪ್ರಾರಂಭವಾಗಿದೆ. ಇದೇ ರೀತಿ ಬೆಂಗಳೂರಿನಿಂದ ಮುಂಬೈಗೆ ಮತ್ತು ಹೈದರಾಬಾದ್‌ ನಡುವೆ ವಂದೇ ಭಾರತ್‌ ರೈಲು ಸಂಚಾರ ಪ್ರಾರಂಭವಾಗಲಿದೆ: ಮೂಲಸೌಕರ್ಯ ಸಚಿವ ವಿ.ಸೋಮಣ್ಣ 

ಬೆಂಗಳೂರು(ಮಾ.30):  ಬೆಂಗಳೂರು-ಹೈದರಾಬಾದ್‌ ಮತ್ತು ಬೆಂಗಳೂರು-ಮುಂಬೈ ನಡುವೆ ವಂದೇ ಭಾರತ್‌ ರೈಲು ಶೀಘ್ರದಲ್ಲಿಯೇ ಸಂಚಾರ ಪ್ರಾರಂಭಿಸಲಿದೆ ಎಂದು ಮೂಲಸೌಕರ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. 

ಬುಧವಾರ ಬೆಳಗ್ಗೆ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೈಸೂರು-ಬೆಂಗಳೂರು-ಚೆನ್ನೈ ನಡುವೆ ವಂದೇ ಭಾರತ್‌ ರೈಲು ಸಂಚಾರ ಈಗಾಗಲೇ ಪ್ರಾರಂಭವಾಗಿದೆ. ಇದೇ ರೀತಿ ಬೆಂಗಳೂರಿನಿಂದ ಮುಂಬೈಗೆ ಮತ್ತು ಹೈದರಾಬಾದ್‌ ನಡುವೆ ವಂದೇ ಭಾರತ್‌ ರೈಲು ಸಂಚಾರ ಪ್ರಾರಂಭವಾಗಲಿದೆ ಎಂದರು.

ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ವಂದೇ ಮಾತರಂ ಹಾಡಿದ ಬೆಂಗಳೂರು ವಿದ್ಯಾರ್ಥಿಗಳು!

ಮುಂಬೈ ಮತ್ತು ಹೈದರಾಬಾದ್‌ ನಡುವೆ ವಂದೇ ಭಾರತ್‌ ರೈಲು ಸಂಚಾರ ಸಂಬಂಧ ಕೇಂದ್ರ ರೈಲ್ವೆ ಸಚಿವರು ಮತ್ತು ರೈಲ್ವೆ ಕಾರ್ಯದರ್ಶಿಗೆ ರಾಜ್ಯ ಸರ್ಕಾರವು ಪತ್ರ ಬರೆದಿದೆ. ಇದಕ್ಕೆ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ರೈಲು ಸಂಚಾರದಿಂದ ಜನತೆಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ತಿಳಿಸಿದರು.

PREV
Read more Articles on
click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ