ಮತ್ತೊಮ್ಮೆ ಕರ್ನಾಟಕ ಬಂದ್ : ಎಚ್ಚರಿಕೆ ನೀಡಿದ ವಾಟಾಳ್ ನಾಗರಾಜ್

By Suvarna News  |  First Published Mar 5, 2020, 3:39 PM IST

ಸಾಮಾಜಿಕ ಹೋರಾಟಗಾರ ಹಾಗೂ ವಾಟಾಳ್ ಪಕ್ಷದ ನಾಯಕ ವಾಟಾಳ್ ನಾಗರಾಜ್ ಇದೀಗ ಮತ್ತೊಮ್ಮೆ ಕರ್ನಾಟಕ ಬಂದ್ ಎಚ್ಚರಿಕೆ ನೀಡಿದ್ದಾರೆ. 


ಬೆಂಗಳೂರು [ಮಾ.05] : ರಾಜ್ಯದಲ್ಲಿ ಕಾಂಗ್ರೆಸ್ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಂಯ್ಯ, ಜೆಡಿಎಸ್ ಮುಖಂಡ ಕುಮಾರಸ್ವಾಮಿ, ಸಿಎಂ ಯಡಿಯೂರಪ್ಪ ಯಾರೂ ಕನ್ನಡಿಗರಿಗೆ ಅನುಕೂಲವಾಗುವ ಯಾವುದೇ ಕೆಲಸ ಮಾಡಿಲ್ಲ ಎಂದು ವಾಟಾಳ್ ನಾಗರಾಜ್ ಹೇಳಿದರು. 

ಬೆಂಗಳೂರಿನಲ್ಲಿ ಮಾತನಾಡಿದ ಸಾಮಾಜಿಕ ಹೋರಾಟಗಾರ ವಾಟಾಳ್ ನಾಗರಾಜ್, ರಾಜ್ಯದಲ್ಲಿ ಸರೋಜಿ ಮಹಿಷಿ ವರದಿ, ಔರಾದ್ಕರ್ ವರದಿ ಜಾರಿ ಆಗಬೇಕು. ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ಸಿಗಬೇಕು ಎಂದರು. 

Tap to resize

Latest Videos

ಒಂದು ವೇಳೆ ಈ ವರದಿಗಳು ಜಾರಿಯಾಗದೇ ಇದ್ದಲ್ಲಿ ಮತ್ತೊಮ್ಮೆ ಕರ್ನಾಟಕ ಬಂದ್ ಮಾಡಲಾಗುವುದು ಎಂದು ರಾಜ್ಯ ಸರ್ಕಾರಕ್ಕೆ ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. 

ಸಂಪೂರ್ಣ ಬಜೆಟ್ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

ರಾಜ್ಯದ ಎಲ್ಲಾ ಕಡೆಯೂ ತಮಿಳರು, ಮಲೆಯಾಳಿಗಳು, ಮಾರ್ವಾಡಿ, ತೆಲುಗು ಮಂದಿ ಹಾವಳಿ ಹೆಚ್ಚಾಗಿದೆ. ಐಟಿ, ಬಿಟಿ ಕಾರ್ಖಾನೆಗಳಲ್ಲಿ ಕನ್ನಡಿಗರಿಗೆ ಉದ್ಯೊಗ ಇಲ್ಲದಂತಾಗಿದೆ. 

ಪ್ರೇಮಿಗಳ ದಿನ: ಕುದುರೆಗಳಿಗೆ ಮದುವೆ ಮಾಡಿಸಿದ ವಾಟಾಳ್‌..

ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು. ಈ ನಿಟ್ಟಿನಲ್ಲಿ ತಾವು ಜೈಲಿಗೆ ಹೋದರೂ ಚಿಂತೆ ಇಲ್ಲ. ಕನ್ನಡಿಗರಿಗೆ ಉದ್ಯೋಗ ಮೀಸಲಾತಿಗಾಗಿ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ವಾಟಾಳ್ ನಾಗರಾಜ್ ಹೇಳಿದರು. 

ಮಾರ್ಚ್ 4ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

click me!