ಮಹದಾಯಿಗಾಗಿ ಪ್ರಾಣ ಕಳೆದುಕೊಂಡ ಅನ್ನದಾತ: ಸರ್ಕಾರಕ್ಕೆ ಎಚ್ಚರಿಕೆ ಹೋರಾಟಗಾರರು

By Suvarna NewsFirst Published Dec 9, 2019, 8:46 AM IST
Highlights

ಪ್ರಾಣ ಕಳೆದುಕೊಂಡ ಮಹದಾಯಿ ಹೋರಾಟಗಾರರಿಗೆ ಪರಿಹಾರ ನೀಡದಿದ್ದರೆ ಕೋರ್ಟ್‌ ಮೊರೆ| 1606ನೇ ದಿನದ ಮಹದಾಯಿ, ಕಳಸಾ ಬಂಡೂರಿ ನಾಲಾ ಯೋಜನೆ ಹೋರಾಟ| ಮೃತ 11 ಹೋರಾಟಗಾರರಲ್ಲಿ ಕೇವಲ 3 ರೈತ ಹೋರಾಟಗಾರರಿಗೆ ಮಾತ್ರ ಸರ್ಕಾರದಿಂದ ಪರಿಹಾರ ನೀಡಿದೆ| ಉಳಿದ ರೈತ ಹೋರಾಟಗಾರರಿಗೆ ಬೇಗ ಸರ್ಕಾರ ಪರಿಹಾರ ನೀಡಬೇಕೆಂದು ಮನವಿ ಮಾಡಿಕೊಂಡರೂ ಸಹ ಯಾವುದೇ ರೀತಿ ಪ್ರಯೋಜನವಾಗಿಲ್ಲ| 

ನರಗುಂದ(ಡಿ.09): ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಹೋರಾಟದಲ್ಲಿ ಪ್ರಾಣ ಕಳೆದುಕೊಂಡ ಹೋರಾಟಗಾರರಿಗೆ ಸರ್ಕಾರ ಪರಿಹಾರ ನೀಡದಿದ್ದರೆ ಕೋರ್ಟ್‌ಗೆ ಹೋಗುತ್ತೇವೆ ಎಂದು ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರಮಠ ಶ್ರೀಗಳು ಹೇಳಿದ್ದಾರೆ. 

1606ನೇ ದಿನದ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಹೋರಾಟ ವೇದಿಕೆಯಲ್ಲಿ ಮಾತನಾಡಿದ ಅವರು, ರಾಜ್ಯದ ಉತ್ತರ ಕರ್ನಾಟಕ ಭಾಗದ ಮಲಪ್ರಭೆ ಅಚ್ಚುಕಟ್ಟು ಪ್ರದೇಶದ ಬಂಡಾಯ ನೆಲದಲ್ಲಿ ಈ ಭಾಗದ ರೈತರು ನಮ್ಮ ನೆಲದಲ್ಲಿ ಹರಿಯುವ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಹಳ್ಳಗಳಲ್ಲಿ ಹರಿಯುವ ನಮ್ಮ ಪಾಲಿನ ನೀರನ್ನು ತಂದು ಮಲಪ್ರಭೆ ಜಲಾಶಯಕ್ಕೆ ಜೋಡಣೆ ಮಾಡಬೇಕೆಂದು ಸರ್ಕಾರ ವಿರುದ್ಧ ಹೋರಾಟ ಮಾಡುವ ಸಮಯದಲ್ಲಿ ಒಟ್ಟ11 ಮಹದಾಯ ಹೋರಾಟಗಾರರು ಪ್ರಾಣ ಕಳೆದುಕೊಂಡಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಈ ಎಲ್ಲ ಹೋರಾಟಗಾರರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕೆಂದು ಮನವಿ ನೀಡಲಾಗಿತ್ತು. ಆದರೆ ಸರ್ಕಾರ ಈ 11 ಹೋರಾಟಗಾರರಲ್ಲಿ ಕೇವಲ 3 ರೈತ ಹೋರಾಟಗಾರರಿಗೆ ಮಾತ್ರ ಸರ್ಕಾರದಿಂದ ಪರಿಹಾರ ನೀಡಿದೆ. ಉಳಿದ ರೈತ ಹೋರಾಟಗಾರರಿಗೆ ಬೇಗ ಸರ್ಕಾರ ಪರಿಹಾರ ನೀಡಬೇಕೆಂದು ಮನವಿ ಮಾಡಿಕೊಂಡರೂ ಸಹ ಯಾವುದೇ ರೀತಿ ಪ್ರಯೋಜನವಾಗಿಲ್ಲ. ಆದ್ದರಿಂದ ಸರ್ಕಾರ ಬೇಗ ಎಚ್ಚೆತ್ತುಕೊಂಡು ಪರಿಹಾರ ನೀಡದಿದ್ದರೆ ಮುಂದಿನ ದಿನಗಳಲ್ಲಿ ನಾವು ಸರ್ಕಾರದ ವಿರುದ್ಧ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿ ಕಾನೂನು ಹೋರಾಟ ಮಾಡುತ್ತವೆಂದು ಎಚ್ಚರಿಕೆ ನೀಡಿದರು.

ವೀರಬಸಪ್ಪ ಹೂಗಾರ, ಎಸ್‌.ಬಿ. ಜೋಗಣ್ಣವರ, ಹನಮಂತ ಸರನಾಯ್ಕರ, ವೆಂಕಪ್ಪ ಹುಜರತ್ತಿ, ಸಂಗಪ್ಪ ಶಾನವಾಡ, ಎಲ್‌.ಬಿ. ಮನನೇಕೊಪ್ಪ, ಯಲ್ಲಪ್ಪ ಚಲವಣ್ಣವರ, ಅರ್ಜುನ ಮಾನೆ, ಚನ್ನಬಸಪ್ಪ ಆಯಿಟ್ಟಿ, ಯಲ್ಲಪ್ಪ ಚಲವಣ್ಣವರ, ಚನ್ನಪ್ಪಗೌಡ ಪಾಟೀಲ, ಯಲ್ಲಪ್ಪ ಗುಡದೇರಿ, ಮಲ್ಲೇಶಪ್ಪ ಅಣ್ಣಗೇರಿ, ನಾಗರತ್ನ ಸವಳಭಾವಿ, ಅನಸವ್ವ ಶಿಂದೆ, ಶಾಂತವ್ವ ಭೂಸರಡ್ಡಿ, ಜಗನ್ನಾಥ ಮುಧೋಳೆ, ಚನ್ನಬಸವ್ವ ಆಯಿಟ್ಟಿ, ರಾಮಚಂದ್ರ ಸಾಬಳೆ, ಎಲ್‌.ಬಿ. ಮನನೆಕೊಪ್ಪ, ಮಲ್ಲಪ್ಪ ಐನಾಪುರ, ಕೆ.ಎಚ್‌. ಮೊರಬದ, ವಾಸು ಚವಾಣ, ಈರಣ್ಣ ಗಡಗಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
 

click me!