ಕೊರೋನಾ ಭೀತಿಗೆ ಕೇರಳ-ದಕ್ಷಿಣ ಕನ್ನಡ ವಾಹನ ಸಂಚಾರ ಬಂದ್‌

By Kannadaprabha News  |  First Published Mar 21, 2020, 7:12 AM IST

ಕೊರೋನಾ ವೈರಸ್‌ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ನಡುವೆ ಸರ್ವ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.


ಮಂಗಳೂರು(ಮಾ.21): ಕೊರೋನಾ ವೈರಸ್‌ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ದಕ್ಷಿಣಕನ್ನಡ ಜಿಲ್ಲಾಡಳಿತ ತುರ್ತು ಕ್ರಮ ಕೈಗೊಂಡಿದ್ದು, ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ನಡುವೆ ಸರ್ವ ವಾಹನ ಸಂಚಾರವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.

ಮಾ.21ರ ಮಧ್ಯಾಹ್ನ ಎರಡು ಗಂಟೆಯಿಂದ ಮಾಚ್‌ರ್‍ 31ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ. ಕಾಸರಗೋಡಿನಲ್ಲಿ ಈಗಾಗಲೇ 6 ಕೊರೋನಾ ಪಾಸಿಟಿವ್‌ ಪ್ರಕರಣಗಳು ದಾಖಲಾಗಿರುವುದರಿಂದ ಈ ಕ್ರಮವನ್ನು ಕೈಗೊಳ್ಳಲಾಗಿದೆ.

Latest Videos

undefined

ಕಾಸರಗೋಡು ಪ್ರಯಾಣಿಕರ ಗಡಿ ದಾಟಿಸಲು ವಿಶೇಷ ಬಸ್‌

ಇದುವರೆಗೆ ದಕ್ಷಿಣ ಕನ್ನಡ ಮತ್ತು ಕೇರಳ ಗಡಿಭಾಗದಲ್ಲಿ ಪ್ರತಿಯೊಬ್ಬ ನಾಗರಿಕನನ್ನು ಥರ್ಮಲ್‌ ಪರೀಕ್ಷೆಗೆ ಒಳಪಡಿಸಿ ಬಿಡಲಾಗುತ್ತಿತ್ತು. ಈಗ ಎಲ್ಲ ಬಗೆಯ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
 

click me!