ಕಳೆದೆರಡು ದಿನಗಳ ಹಿಂದಷ್ಟೇ ಚಾರ್ಮಾಡಿ ಘಾಟ್‌ನಲ್ಲಿ ಸಂಚಾರಕ್ಕೆ ಅವಕಾಶ ನೀಡಿದ್ದ ಚಿಕ್ಕಮಗಳೂರು ಜಿಲ್ಲಾಧಿಕಾರಿ ಇದೀಗ ಮತ್ತೊಮ್ಮೆ ಸಂಚಾರಕ್ಕೆ ನಿರ್ಬಂಧಿಸಿದ್ದಾರೆ.
ಚಿಕ್ಕಮಗಳೂರು (ಮಾ.19): ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳು ಸೇರಿದಂತೆ ಲಘು ಹಾಗೂ ಕೆಲವು ಘನ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಿ ಮಾ.16ರಂದು ಹೊರಡಿಸಿದ್ದ ಆದೇಶವನ್ನು ಜಿಲ್ಲಾಧಿಕಾರಿ ಅವರು ಹಿಂಪಡೆದು ಗುರುವಾರ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.
ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನಗಳು ಚಲಿಸಬಹುದು ಎಂದು ರಾಷ್ಟ್ರೀಯ ಹೆದ್ದಾರಿ ಹಾಸನ ವಿಭಾಗ ಕಚೇರಿ ವರದಿ ನೀಡಿದ ಹಿನ್ನಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್, ಆರು ಚಕ್ರದ ಲಾರಿ, ನಾಲ್ಕು ಚಕ್ರದ ವಾಹನಗಳು, ಟೆಂಪೊ ಟ್ರಾವೇಲರ್, ಅಂಬುಲೆನ್ಸ್, ಕಾರು, ಜೀಪು, ವ್ಯಾನ್, ಎಲ್.ಸಿ.ವಿ (ಮಿನಿ ವ್ಯಾನ್) ಹಾಗೂ ದ್ವಿಚಕ್ರ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಿ ಹೊರಡಿಸಿದ್ದ ಆದೇಶವನ್ನು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಅವರು ಹಿಂಪಡೆದಿದ್ದಾರೆ.
ಗಂಟೆಗೆ 25 ಸಾರಿ ಸಂಭೋಗ ಮಾಡುವ ಹುಲಿರಾಯ.. 'ಆ' ಶಕ್ತಿಗಾಗಿ ಇದನ್ನೆಲ್ಲ ಬಳಸ್ತಾರಾ? ...
ಚಾರ್ಮಾಡಿ ಘಾಟಿಯ ದಕ್ಷಿಣ ಕನ್ನಡ ಜಿಲ್ಲೆಯ ಸರಹದ್ದಿನಲ್ಲಿ ರಸ್ತೆ ಕಾಮಗಾರಿ ಮುಂದುವರೆದಿದೆ. ಇಂತಹ ಸಂದರ್ಭದಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ನೀಡಿದ್ದರಿಂದ ಕಾಮಗಾರಿ ವಿಳಂಬವಾಗುವ ಸಾಧ್ಯತೆ ಇದೆ ಎಂಬ ವರದಿಯ ಆಧಾರದ ಮೇಲೆ ಪರಿಷ್ಕೃತ ಆದೇಶ ಹೊರಡಿಸಲಾಗಿದೆ.