ಮಂಗಳೂರು: ರಾಜಕೀಯ ನಿವೃತ್ತಿ ಘೋಷಿಸಿದ ಅಭಯಚಂದ್ರ ಜೈನ್‌

Kannadaprabha News   | Asianet News
Published : Jul 03, 2021, 09:36 AM ISTUpdated : Jul 03, 2021, 09:59 AM IST
ಮಂಗಳೂರು: ರಾಜಕೀಯ ನಿವೃತ್ತಿ ಘೋಷಿಸಿದ ಅಭಯಚಂದ್ರ ಜೈನ್‌

ಸಾರಾಂಶ

* ಮಾಜಿ ಸಚಿವ ಅಭಯಚಂದ್ರ ಜೈನ್‌ ಚುನಾವಣಾ ನಿವೃತ್ತಿ * ದೇಶ ಉಳಿಯಬೇಕಾದರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು * ಕಾಂಗ್ರೆಸ್‌ ಉಳಿಯಬೇಕಾದರೆ ಯುವಕರಿಗೆ ಹೆಚ್ಚು ಅವಕಾಶ ನೀಡಬೇಕು

ಮಂಗಳೂರು(ಜು.03): ಇನ್ನು ಮುಂದೆ ಚುನಾವಣೆಗಳಲ್ಲಿ ನಾನು ಸ್ಪರ್ಧಿಸುವುದಿಲ್ಲ. ಆ ಸ್ಥಾನವನ್ನು ಯುವಕರಿಗೆ ಬಿಟ್ಟುಕೊಡುತ್ತೇನೆ ಎಂದು ಮಾಜಿ ಸಚಿವ ಅಭಯಚಂದ್ರ ಜೈನ್‌ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದೇಶ ಉಳಿಯಬೇಕಾದರೆ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್‌ ಉಳಿಯಬೇಕಾದರೆ ಯುವಕರಿಗೆ ಹೆಚ್ಚು ಅವಕಾಶ ನೀಡಬೇಕು. ಆಗ ಮತದಾರರಿಗೂ ಸ್ಫೂರ್ತಿ ಬರುತ್ತದೆ. ರಾಜಕಾರಣದಲ್ಲಿ ಈ ಬದಲಾವಣೆಯ ಅಗತ್ಯವಿದೆ. ಎಲ್ಲ ಹಿರಿಯರಿಗೆ ಇದೇ ಕಿವಿಮಾತು ಹೇಳುತ್ತಿದ್ದೇನೆ ಎಂದರು.

ಮಂಗಳೂರು: ಅಂಗಾಂಗ ದಾನ​ ಘೋಷಿಸಿದ ಅಭ​ಯ​ಚಂದ್ರ ಜೈನ್‌​

ಕಳೆದ ಚುನಾವಣೆಗೂ ಮೊದಲೇ ಆಗಿನ ಯುವ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದ ಮಿಥುನ್‌ ರೈ ಅವರಿಗೆ ಅವಕಾಶ ಕೊಡಿ ಎಂದು ವರಿಷ್ಠರಿಗೆ ಹೇಳಿದ್ದೆ. ಆದರೂ ಚುನಾವಣೆಯಲ್ಲಿ ಸೋತೆ. ಪ್ರಾಮಾಣಿಕತೆ ನನ್ನನ್ನು ಗೆಲ್ಲಿಸಲಿಲ್ಲ. ಇನ್ಮುಂದೆ ಯುವಕರನ್ನು ನಿಲ್ಲಿಸಿ ಗೆಲ್ಲಿಸಲು ಪಣ ತೊಡುತ್ತೇನೆ ಎಂದರು ಜೈನ್‌.
 

PREV
click me!

Recommended Stories

ಅಣ್ಣಾ, ಇನ್ನು ಎಷ್ಟೊತ್ತು ಎಂದ ಗ್ರಾಹಕನಿಗೆ ಇದು ಪ್ಲೇನ್ ಅಲ್ಲ ಅಂದ ಬೆಂಗ್ಳೂರು ಕ್ಯಾಬ್ ಡ್ರೈವರ್!
ಡಿಕೆಸು ಹೆಸರಿನಲ್ಲಿ ಕೋಟ್ಯಂತರ ವಂಚನೆ ಪ್ರಕರಣ.. 'ಬಂಗಾರಿ' ಕೇಸ್‌ನಲ್ಲಿ ನಟ ಧರ್ಮಗೆ ಧ್ವನಿ ಪರೀಕ್ಷೆ?