ಕಲಬುರಗಿ: ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ್ ಕೋವಿಡ್‌ಗೆ ಬಲಿ

Suvarna News   | Asianet News
Published : May 13, 2021, 02:02 PM IST
ಕಲಬುರಗಿ: ಹಿರಿಯ ಪತ್ರಕರ್ತ ಜಯತೀರ್ಥ ಕಾಗಲಕರ್ ಕೋವಿಡ್‌ಗೆ ಬಲಿ

ಸಾರಾಂಶ

* ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ ಜಯತೀರ್ಥ ಕಾಗಲಕರ್  * ಮೂರು ದಶಕಗಳಿಂದ ಜನಪರ ವರದಿಗಳ ಮೂಲಕ ಸರ್ಕಾರದ ಗಮನ ಸೆಳೆದಿದ್ದ ಕಾಗಲಕರ್  * ಕಾಗಲಕರ್ ಅಗಲಿಕೆಗೆ ಕಂಬನಿ ಮಿಡಿದ ಸಂಸದರು, ಶಾಸಕರು ಹಾಗೂ ಪತ್ರಕರ್ತರು  

ಕಲಬುರಗಿ(ಮೇ.13):  ಹಿರಿಯ ಪತ್ರಕರ್ತ, ಸಂಯುಕ್ತ ಕರ್ನಾಟಕ ಕಲಬುರಗಿ ಆವೃತ್ತಿಯ ಸ್ಥಾನಿಕ ಸಂಪಾದಕ ಜಯತೀರ್ಥ ಕಾಗಲಕರ್ (53) ಮಹಾಮಾರಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 

ವಾರದ ಹಿಂದೆ ಕೊರೋನಾ ಸೋಂಕಿಗೆ ಒಳಗಾಗಿದ್ದ ಅವರನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಜಯತೀರ್ಥ ಕಾಗಲಕರ್ ಇಂದು(ಗುರುವಾರ) ಕೊನೆಯುಸಿರೆಳೆದರು.

"

ವಿಜಯಪುರ: ಬಿಎಲ್‌ಡಿಇ ವಿವಿ ಉಪಕುಲಪತಿ ಡಾ. ಬಿರಾದಾರ ಇನ್ನಿಲ್ಲ

ಜಯತೀರ್ಥ ಕಾಗಲಕರ್ ಅವರು ಕಳೆದ ಮೂರು ದಶಕದಿಂದ ಸಂಯುಕ್ತ ಕರ್ನಾಟಕದ ವರದಿಗಾರರಾಗಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಾ  ಇತ್ತೀಚಿಗಷ್ಟೇ ಸ್ಥಾನಿಕ ಸಂಪಾದಕರಾಗಿ ಬಡ್ತಿ ಹೊಂದಿದ್ದರು.

ಮೂರು ದಶಕಗಳಿಂದ ಹಲವು ಜನಪರ ವರದಿಗಳ ಮೂಲಕ ಸರ್ಕಾರದ ಗಮನ ಸೆಳೆಯುತ್ತಿದ್ದ ಕಾಗಲಕರ್ ಅವರ ಅಗಲುವಿಕೆಗೆ ಸಂಸದರು, ಶಾಸಕರು ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ತಮ್ಮ ಶೋಕ ವ್ಯಕ್ತಪಡಿಸಿದ್ದಾರೆ.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ನ್ಯೂಸ್‌ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

PREV
click me!

Recommended Stories

ರೈತರ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸಲು 'ಅಂತಾರಾಷ್ಟ್ರೀಯ ಸ್ಯಾಂಡ್‌ವಿಚ್ ಸ್ನಾತಕೋತ್ತರ ಕೋರ್ಸ್': ಸಿಎಂ ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಿಮ್ಹಾನ್ಸ್ ಮಾದರಿಯ ಮತ್ತಷ್ಟು ಸಂಸ್ಥೆಗಳು ಅಗತ್ಯ: ಸಚಿವ ಶರಣ ಪ್ರಕಾಶ್ ಪಾಟೀಲ್