ಹಿರಿಯ ರಂಗಭೂಮಿ ನಟಿ ಸುಭದ್ರಮ್ಮ ಮನ್ಸೂರು ನಿಧನ| ಬಳ್ಳಾರಿಯ ತಮ್ಮ ನಿವಾಸದಲ್ಲಿ ಕೊನೆಯುಸಿರು| ಸುಭದ್ರಮ್ಮ ಮನ್ಸೂರು ಅವರ ಸಾಧನೆ ಗುರುತಿಸಿ ನಾಡೋಜ ಪ್ರಶಸ್ತಿಯನ್ನ ನೀಡಿ ಗೌರವಿಸಿದ್ದ ಹಂಪಿ ಕನ್ನಡ ವಿಶ್ವವಿದ್ಯಾಲಯ| ಸುಭದ್ರಮ್ಮ ಮನ್ಸೂರು ಅವರ ಅಗಲಿಕೆಗೆ ಸಂತಾಪ ಸೂಚಿಸಿದ ಸಿಎಂ ಯಡಿಯೂರಪ್ಪ|
ಬಳ್ಳಾರಿ(ಜು.16): ಹಿರಿಯ ರಂಗಭೂಮಿ ನಟಿ, ನಾಡೋಜ ಸುಭದ್ರಮ್ಮ ಮನ್ಸೂರು(82) ನಿನ್ನೆ(ಬುಧವಾರ) ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆಯಿಂದ ನಗರದ ತಮ್ಮ ನಿವಾಸದಲ್ಲಿ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆ.
8ನೇ ವಯಸ್ಸಿಗೆ ಸುಭದ್ರಮ್ಮ ಮನ್ಸೂರು ಅವರು ರಂಗಭೂಮಿ ಪ್ರವೇಶಿಸಿದ್ದರು. ರಂಗಭೂಮಿಯಲ್ಲಿ ಸುಮಾರು ಐದು ದಶಕಗಳ ಕಾಲ ಸೇವೆ ಸಲ್ಲಿಸಿದ ಸುಭದ್ರಮ್ಮ ಮನ್ಸೂರು ಅವರಿಗೆ ಹಲವಾರು ಪ್ರಶಸ್ತಿಗಳು ಅರಸಿ ಬಂದಿದ್ದವು. ರಂಗಭೂಮಿಯಲ್ಲಿ ಕಲಾವಿದರಾಗಿ ಮತ್ತು ಸಂಗೀತಗಾರರಾಗಿ ಮಾಡಿರುವ ಸಾಧನೆಯನ್ನ ಗುರುತಿಸಿ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯ ಪ್ರತಿಷ್ಠಿತ ನಾಡೋಜ ಪ್ರಶಸ್ತಿಯನ್ನ ನೀಡಿ ಗೌರವಿಸಿತ್ತು.
ಪಿಯುಸಿಯಲ್ಲಿ ಫೇಲ್: ಮನನೊಂದು ಇಬ್ಬರು ವಿದ್ಯಾರ್ಥಿನಿಯರು ಆತ್ಮಹತ್ಯೆಗೆ ಯತ್ನ
ಹಿರಿಯ ರಂಗಭೂಮಿ ಕಲಾವಿದೆ ಶ್ರೀಮತಿ ಸುಭದ್ರಮ್ಮ ಮನ್ಸೂರ್ ನಿಧನರಾದ ಸುದ್ದಿ ಅತೀವ ದುಃಖ ತಂದಿದೆ. ಸುಮಾರು 5 ದಶಕಗಳ ಕಾಲ ರಂಗಭೂಮಿಯಲ್ಲಿ ಕಲಾವಿದರಾಗಿ ಮತ್ತು ಸಂಗೀತಗಾರರಾಗಿ ಅವರ ಸಾಧನೆ ಅನುಪಮವಾದದ್ದು. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ, ಕುಟುಂಬದವರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ.
— B.S. Yediyurappa (@BSYBJP)ಸುಭದ್ರಮ್ಮ ಮನ್ಸೂರು ಅವರ ಅಗಲಿಕೆಗೆ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಸಂತಾಪ ಸೂಚಿಸಿದ್ದಾರೆ. ಹಿರಿಯ ರಂಗಭೂಮಿ ಕಲಾವಿದೆ ಶ್ರೀಮತಿ ಸುಭದ್ರಮ್ಮ ಮನ್ಸೂರ್ ನಿಧನರಾದ ಸುದ್ದಿ ಅತೀವ ದುಃಖ ತಂದಿದೆ. ಸುಮಾರು 5 ದಶಕಗಳ ಕಾಲ ರಂಗಭೂಮಿಯಲ್ಲಿ ಕಲಾವಿದರಾಗಿ ಮತ್ತು ಸಂಗೀತಗಾರರಾಗಿ ಅವರ ಸಾಧನೆ ಅನುಪಮವಾದದ್ದು. ಅವರ ಆತ್ಮಕ್ಕೆ ಸದ್ಗತಿಯನ್ನು ಪ್ರಾರ್ಥಿಸುತ್ತೇನೆ, ಕುಟುಂಬದವರು ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳನ್ನು ವ್ಯಕ್ತಪಡಿಸುತ್ತೇನೆ ಎಂದು ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ.