ವಿಜಯನಗರ ಜಿಲ್ಲೆಯ ರೌಡಿ ಶೀಟರ್‌ಗಳ ಬೆವರಿಳಿಸಿದ ಖಡಕ್ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ !

Published : Mar 18, 2026, 05:42 PM IST
Vijayanagara SP Jahnavi

ಸಾರಾಂಶ

ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಅವರು, 220 ರೌಡಿಶೀಟರ್‌ಗಳಿಗೆ ಪರೇಡ್ ನಡೆಸಿ, ಅಪರಾಧ ಚಟುವಟಿಕೆಗಳನ್ನು ನಿಲ್ಲಿಸುವಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಸುಧಾರಣೆಗೆ ಅವಕಾಶವಿದ್ದು, ಸಮಾಜದಲ್ಲಿ ಗೌರವಯುತ ಜೀವನ ನಡೆಸುವಂತೆ ಸಲಹೆ ನೀಡಿದ ಅವರು, ನಿಯಮ ಮೀರಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ವಿಜಯನಗರ: ಜಿಲ್ಲೆಯಲ್ಲಿನ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ವಿಜಯನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ ಅವರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ. ಜಿಲ್ಲೆಯ ರೌಡಿಶೀಟರ್‌ಗಳಿಗೆ ಎಚ್ಚರಿಕೆ ನೀಡುವ ಸಲುವಾಗಿ ಭಾರೀ ಪ್ರಮಾಣದಲ್ಲಿ ರೌಡಿ ಪರೇಡ್ ಆಯೋಜಿಸಿ, ಅಪರಾಧಿಗಳಿಗೆ ಬೆವರಿಳಿಸಿದ್ದಾರೆ.

220 ರೌಡಿಶೀಟರ್‌ಗಳು ಈ ಪರೇಡ್‌ನಲ್ಲಿದ್ದರು

ವಿಜಯನಗರ ಜಿಲ್ಲೆಯ ವಿವಿಧ ಭಾಗಗಳಿಂದ ಒಟ್ಟು 21 ಪೊಲೀಸ್ ಠಾಣೆಗಳ ವ್ಯಾಪ್ತಿಗೆ ಸೇರಿದ ಸುಮಾರು 220 ರೌಡಿಶೀಟರ್‌ಗಳು ಈ ಪರೇಡ್‌ನಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಎಸ್ಪಿ ಎಸ್. ಜಾಹ್ನವಿ ಅವರು ಎಲ್ಲರಿಗೂ ಸ್ಪಷ್ಟ ಎಚ್ಚರಿಕೆ ನೀಡಿದ್ದು, ಇನ್ನುಮುಂದೆ ಯಾವುದೇ ರೀತಿಯ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಾರದು ಎಂದು ಎಚ್ಚರಿಕೆ ನೀಡಿದರು.

ಅಪರಾಧ ಚಟುವಟಿಕೆಗಳಿಂದ ದೂರವಿದ್ದು, ಸತ್ಯನಿಷ್ಠ ಜೀವನ ನಡೆಸುವಂತೆ ಅವರು ಸಲಹೆ ನೀಡಿದರು. ಪ್ರತಿಯೊಬ್ಬರಿಗೂ ಸುಧಾರಣೆಗೆ ಅವಕಾಶ ಪ್ರತಿದಿನವೂ ಇರುತ್ತದೆ. ಆ ಅವಕಾಶವನ್ನು ಬಳಸಿಕೊಂಡು ಒಳ್ಳೆಯ ಮಾರ್ಗದಲ್ಲಿ ನಡೆದು, ಸಮಾಜದಲ್ಲಿ ಗೌರವಪೂರ್ಣ ಜೀವನ ಕಟ್ಟಿಕೊಳ್ಳಿ ಎಂದು  ಹೇಳಿದರು.

ಹಳೆಯ ಚಟುವಟಿಕೆಗಳನ್ನು ಮುಂದುವರಿಸಿದರೆ ಕಠಿಣ ಕ್ರಮದ ಎಚ್ಚರಿಕೆ

ಇನ್ನೂ, ಯಾರಾದರೂ ತಮ್ಮ ಹಳೆಯ ಚಟುವಟಿಕೆಗಳನ್ನು ಮುಂದುವರಿಸಿದರೆ, ಇದಕ್ಕಿಂತಲೂ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದರು. ಪೊಲೀಸರ ನಿಗಾವನ್ನು ಮತ್ತಷ್ಟು ಬಲಪಡಿಸಲಾಗುತ್ತಿದ್ದು, ಅಪರಾಧಿಗಳಿಗೆ ಯಾವುದೇ ಸಡಿಲಿಕೆ ಇರುವುದಿಲ್ಲ ಎಂದು ತಿಳಿಸಿದರು.

ಈ ರೌಡಿ ಪರೇಡ್ ಮೂಲಕ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಪೊಲೀಸರು ತೀವ್ರ ಕ್ರಮ ಕೈಗೊಂಡಿರುವುದು ಸ್ಪಷ್ಟವಾಗಿದ್ದು, ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತಿದೆ.

PREV
Read more Articles on
click me!

Recommended Stories

ಭೀಕರ ಅಪಘಾತದಲ್ಲಿ ಮೃತಪಟ್ಟ ಮೂವರು ಯುವ ಇನ್ಸ್‌ಪೆಕ್ಟರ್‌ಗಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ; ಸಿಎಂ ಘೋಷಣೆ
ನದಿ ಜೋಡಣೆ ಎಲ್ಲೂ ಸಂಪೂರ್ಣ ಯಶಸ್ವಿಯಾಗಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್