ಮಹಿಳಾಮಣಿಯರ ಕೈಯಲ್ಲಿ ವಿಜಯನಗರದ ಆಡಳಿತ ಚುಕ್ಕಾಣಿ: ಡಿಸಿ, ಎಸ್‌ಪಿ, ಸಿಇಒ, ತಹಸೀಲ್ದಾರ್ ಎಲ್ಲರೂ ಮಹಿಳೆಯರು!

Published : Sep 17, 2026, 10:16 AM IST
Vijayanagara Kalyana Karnataka Day

ಸಾರಾಂಶ

ಹೊಸಪೇಟೆಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ವಿಜಯನಗರ ಜಿಲ್ಲೆಯ ಪ್ರಮುಖ ಆಯಕಟ್ಟಿನ ಹುದ್ದೆಗಳಲ್ಲಿರುವ ಮಹಿಳಾ ಅಧಿಕಾರಿಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡರು. ಜಿಲ್ಲಾಧಿಕಾರಿ, ಎಸ್ಪಿ, ಸಿಇಒ ಸೇರಿದಂತೆ ಐವರು ಮಹಿಳಾ ಅಧಿಕಾರಿಗಳು ಸಚಿವರಿಗೆ ಸಾಥ್ ನೀಡುವ ಮೂಲಕ ಮಹಿಳಾ ಸಬಲೀಕರಣಕ್ಕೆ ಕನ್ನಡಿಯಾದರು. ಜಿಲ್ಲೆಯ ಆಡಳಿತದಲ್ಲಿ ಮಹಿಳೆಯರೇ ಮುಂಚೂಣಿಯಲ್ಲಿರುವುದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ.

ವಿಜಯನಗರ (ಸೆ.17): ರಾಜ್ಯದ ಹಿಂದುಳಿದ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ಒಂದಾದ ವಿಜಯನಗರದ ಆಡಳಿತ ಚುಕ್ಕಾಣಿ ಸಂಪೂರ್ಣವಾಗಿ ಸಮರ್ಥ ಮಹಿಳಾ ಅಧಿಕಾರಿಗಳ ಕೈಯಲ್ಲಿದೆ ಎನ್ನುವುದಕ್ಕೆ ಹೊಸಪೇಟೆಯಲ್ಲಿ ನಡೆದ ಕಲ್ಯಾಣ ಕರ್ನಾಟಕ ಉತ್ಸವದ ವೇದಿಕೆಯು ಸಾಕ್ಷಿಯಾಯಿತು. ಜಿಲ್ಲೆಯ ಪ್ರಮುಖ ಆಯಕಟ್ಟಿನ ಹುದ್ದೆಗಳನ್ನು ಅಲಂಕರಿಸಿರುವ ಮಹಿಳಾ ಅಧಿಕಾರಿಗಳು ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ವಿಶೇಷ ಗಮನ ಸೆಳೆದರು.

ಹೊಸಪೇಟೆಯ ಡಾ. ಪುನೀತ್ ರಾಜ್‌ಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್. ಬಸವಂತಪ್ಪ (ಬಸವಂತಪ್ಪ) ಅವರು ಧ್ವಜಾರೋಹಣ ನೆರವೇರಿಸಿ, ಅಕರ್ಷಕ ಪಥಸಂಚಲನದ ಗೌರವ ವಂದನೆ ಸ್ವೀಕರಿಸಿದರು.

ಒಂದೇ ವೇದಿಕೆಯಲ್ಲಿ ಪ್ರಮುಖ ಮಹಿಳಾ ಅಧಿಕಾರಿಗಳು:

ಈ ಕಾರ್ಯಕ್ರಮದಲ್ಲಿ ಸಚಿವರಿಗೆ ಜಿಲ್ಲೆಯ ಉನ್ನತ ಮಹಿಳಾ ಅಧಿಕಾರಿಗಳು ಸಾಥ್ ನೀಡಿದರು. ವಿಜಯನಗರ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಹ್ನವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಗರಿಮಾ ಪನ್ವಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ (ಡಿಸಿಎಫ್) ಅನುಪಮಾ ಹಾಗೂ ತಹಶೀಲ್ದಾರ್ ಶೃತಿ ಅವರು ಒಂದೇ ವೇದಿಕೆಯಲ್ಲಿ ಉಪಸ್ಥಿತರಿದ್ದು, ಮಹಿಳಾ ಸಬಲೀಕರಣಕ್ಕೆ ಹಿಡಿದ ಕನ್ನಡಿಯಂತೆ ಗೋಚರಿಸಿದರು.

ಜಿಲ್ಲೆಯ ಕಾನೂನು ಸುವ್ಯವಸ್ಥೆ, ಅಭಿವೃದ್ಧಿ ಹಾಗೂ ಆಡಳಿತಾತ್ಮಕ ನಿರ್ಣಾಯಕ ಹುದ್ದೆಗಳಲ್ಲಿ ಮಹಿಳೆಯರೇ ಮುಂಚೂಣಿಯಲ್ಲಿರುವುದು ವಿಜಯನಗರ ಜಿಲ್ಲೆಗೆ ಹೆಮ್ಮೆಯ ವಿಷಯವಾಗಿದ್ದು, ಸಾರ್ವಜನಿಕ ವಲಯದಲ್ಲಿಯೂ ಈ ಬಗ್ಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.

ಅದ್ದೂರಿ ಪಥಸಂಚಲನ:

ಕಲ್ಯಾಣ- ಕರ್ನಾಟಕ ಉತ್ಸವದ ಅಂಗವಾಗಿ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಪೊಲೀಸ್ ಹಾಗೂ ವಿವಿಧ ಇಲಾಖೆಗಳ ವತಿಯಿಂದ ಆಕರ್ಷಕ ಪಥಸಂಚಲನ ನಡೆಯಿತು. ಸಚಿವ ಬಸವಂತಪ್ಪ ಅವರು ಪಥಸಂಚಲನದ ಗೌರವ ವಂದನೆಯನ್ನು ಸ್ವೀಕರಿಸಿದರು. ಜಿಲ್ಲೆಯ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಹಾಗೂ ನೂರಾರು ಸಾರ್ವಜನಿಕರು ಉತ್ಸಾಹದಿಂದ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

PREV
Read more Articles on
click me!

Recommended Stories

ಕೆಡಿಪಿ ಸಭೆಗೆ ಹೆಲಿಕಾಪ್ಟರ್‌ನಲ್ಲಿ ಬಂದ ಮಿನಿಸ್ಟರ್; ಎದ್ನೋ, ಬಿದ್ನೋ ಅಂತಾ ಬಂದು ಸ್ವಾಗತಿಸಿದ ಕಲೆಕ್ಟರ್!
ಬಾಲ್ಯದಲ್ಲಿ ಆರೈಕೆ ಮಾಡಿದ್ದ ದಾದಿಗಾಗಿ 29 ವರ್ಷಗಳ ಹುಡುಕಾಟ; ಕೊನೆಗೂ ಬಂತು ಆ ಅಮೂಲ್ಯ ಕ್ಷಣ!