ಸಿದ್ದರಾಮಯ್ಯ ಬಜೆಟ್‌ನಲ್ಲಿ ವಿಜಯಪುರ ಜಿಲ್ಲೆಗೆ ಸಿಕ್ಕೀತೇ ನಿರೀಕ್ಷಿತ ಅನುದಾನ?

By Kannadaprabha News  |  First Published Jul 6, 2023, 11:00 PM IST

ವಿಜಯಪುರ ಜಿಲ್ಲೆಯಲ್ಲಿ ಅದರಲ್ಲೂ ಜಿಲ್ಲಾ ಕೇಂದ್ರ ವಿಜಯಪುರದಲ್ಲಿ ವಿಶ್ವ ವಿಖ್ಯಾತ ಗೋಳಗುಮ್ಮಟ ಐತಿಹಾಸಿಕ ಸ್ಮಾರಕ ಇದೆ. ಈ ಸ್ಮಾರಕ ವಿಶ್ವ ಪರಂಪರೆ ಪಟ್ಟಿಗೆ ಸೇರುತ್ತಿಲ್ಲ. ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಐತಿಹಾಸಿಕ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕವಾದ ವಾತಾವರಣ ನಿರ್ಮಿಸಲು ಅನುದಾನದ ಅಗತ್ಯವಿದೆ. 


ರುದ್ರಪ್ಪ ಆಸಂಗಿ

ವಿಜಯಪುರ(ಜು.06):  ನಾಳೆ(ಜುಲೈ 7)ರಂದು ನೂತನ ಕಾಂಗ್ರೆಸ್‌ ಸರ್ಕಾರ ರಾಜ್ಯ ವಿಧಾನಸಭೆಯಲ್ಲಿ ಬಜೆಟ್‌ ಮಂಡಿಸಲಿದ್ದು, ಜಿಲ್ಲೆಯ ಜನರ ಹಲವಾರು ನಿರೀಕ್ಷೆಗಳಿಗೆ ಗರಿ ಮೂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ನೂತನ ಕಾಂಗ್ರೆಸ್‌ ಸರ್ಕಾರದಲ್ಲಿ ಜಿಲ್ಲೆಗೆ ಏನಾದರೂ ಹೊಸ ಕೊಡುಗೆಗಳು ಸಿಗಲಿವೆಯೇ? ಎಂದು ಜಿಲ್ಲೆಯ ಜನರು ಕಾತುರರಾಗಿದ್ದಾರೆ.

Tap to resize

Latest Videos

ಜಿಲ್ಲೆಯ ಆಲಮಟ್ಟಿ ಅಣೆಕಟ್ಟೆ ಎತ್ತರ 519.60 ಮೀಟರ್‌ನಿಂದ 524.256 ಮೀಟರ್‌ವರೆಗೆ ಎತ್ತರ ಹೆಚ್ಚಳ ಮಾಡುವುದು ಬಹಳ ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಪ್ರಸಕ್ತ ಬಜೆಟ್‌ನಲ್ಲಿ ಕಾಂಗ್ರೆಸ್‌ ಸರ್ಕಾರ ಹೆಚ್ಚಿನ ಅನುದಾನ ಒದಗಿಸುವ ಮೂಲಕ ತನ್ನ ಇಚ್ಚಾಶಕ್ತಿ ಪ್ರದರ್ಶಿಸಬೇಕಿದೆ. ಮೂರನೇ ಹಂತದ ಯೋಜನೆಗಳ ಅನುಷ್ಠಾನಕ್ಕೆ ಅಣೆಕಟ್ಟೆ ಎತ್ತರ ಹೆಚ್ಚಳ ತೀರಾ ಅನಿವಾರ್ಯವೂ ಆಗಿದೆ. ಮೂರನೇ ಹಂತದ ನೀರಾವರಿ ಯೋಜನೆಗಳು ಸಾಕಾರಗೊಂಡರೆ ಮಾತ್ರ ಜಿಲ್ಲೆ ಸಂಪೂರ್ಣ ನೀರಾವರಿ ಆಗಲಿದೆ. ಹಾಗಾಗಿ, ಜಿಲ್ಲೆಯ ಜನರು ಈ ಬಜೆಟ್‌ನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಗೆ ಕಾಂಗ್ರೆಸ್‌ ಸರ್ಕಾರ ಹೆಚ್ಚಿನ ಅನುದಾನ ಒದಗಿಸುವುದೇ? ಎಂಬ ನಿರೀಕ್ಷೆಯಲ್ಲಿ ಇದ್ದಾರೆ.

ಇಂದಿರಾ ಕ್ಯಾಂಟೀನ್‌ಗೆ ಹೆಚ್ಚಿದ ಬೇಡಿಕೆ..!

ಗೋಳಗುಮ್ಮಟ ವಿಶ್ವ ಪರಂಪರೆ ಪಟ್ಟಿಗೆ ಸೇರುವುದು ಯಾವಾಗ?

ವಿಜಯಪುರ ಜಿಲ್ಲೆಯಲ್ಲಿ ಅದರಲ್ಲೂ ಜಿಲ್ಲಾ ಕೇಂದ್ರ ವಿಜಯಪುರದಲ್ಲಿ ವಿಶ್ವ ವಿಖ್ಯಾತ ಗೋಳಗುಮ್ಮಟ ಐತಿಹಾಸಿಕ ಸ್ಮಾರಕ ಇದೆ. ಈ ಸ್ಮಾರಕ ವಿಶ್ವ ಪರಂಪರೆ ಪಟ್ಟಿಗೆ ಸೇರುತ್ತಿಲ್ಲ. ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಐತಿಹಾಸಿಕ ವಿಜಯಪುರ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಬೆಳವಣಿಗೆಗೆ ಪೂರಕವಾದ ವಾತಾವರಣ ನಿರ್ಮಿಸಲು ಅನುದಾನದ ಅಗತ್ಯವಿದೆ. ಈ ಬಜೆಟ್‌ನಲ್ಲಿ ಹೆಚ್ಚಿನ ಅನುದಾನ ಒದಗಿಸಬೇಕು ಎಂಬುವುದು ಎಲ್ಲರ ಅಂಬೋಣ. ವಿಜಯಪುರ ಜಿಲ್ಲೆಯ ಜನರ ವಿಮಾನ ನಿಲ್ದಾಣ ಕನಸು ನನಸಾಗುವುದೇ? ಎಂದು ಜನರಲ್ಲಿ ಕುತೂಹಲ ಮೂಡಿಸಿದೆ. ಕಳೆದ ಬಿಜೆಪಿ ಸರ್ಕಾರದಲ್ಲಿ ಇನ್ನೇನು ವಿಮಾನ ನಿಲ್ದಾಣ ಕಾಮಗಾರಿ ಪೂರ್ಣಗೊಂಡು ಉಕ್ಕಿನ ಹಕ್ಕಿ ಹಾರುತ್ತದೆ ಎನ್ನುವಷ್ಟರಲ್ಲಿಯೇ ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಅಡ್ಡ ಬಂದು ವಿಮಾನ ನಿಲ್ದಾಣ ಕಾಮಗಾರಿ ನನೆಗುದಿಗೆ ಬಿದ್ದಿದೆ. ನೂತನ ಸರ್ಕಾÃದÜ ಬಜೆಟ್‌ನಲ್ಲಿ ವಿಜಯಪುರ ವಿಮಾನ ನಿಲ್ದಾಣಕ್ಕೆ ಅಗತ್ಯದ ಅನುದಾನ ಒದಗಿಸಿ ಉಕ್ಕಿನ ಹಕ್ಕಿ ಹಾರುವ ಕನಸು ನನಸು ಆಗುವುದೇ ಎಂದು ಕಾದು ನೋಡಬೇಕಿದೆ.

ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆಗೆ ಅನುದಾನ ಸಿಗುವುದೇ?

ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಅನುಷ್ಠಾನವಾಗಬೇಕಿದೆ. .2700 ಕೋಟಿ ವೆಚ್ಚದ ಈ ಯೋಜನೆಯನ್ನು ಹಿಂದಿನ ಬಿಜೆಪಿ ಸರ್ಕಾರ ವಿಧಾನಸಭೆ ಚುನಾವಣೆ ನಿಮಿತ್ತ ತರಾತುರಿಯಲ್ಲಿ ಚಾಲನೆ ನೀಡಿದೆ. ಆದರೆ, ಈ ಯೋಜನೆಯ ಕಾಮಗಾರಿ ಅನುಷ್ಠಾನ ಆಗಬೇಕಿದೆ. ಇದಕ್ಕೆ ಕೋಟ್ಯಂತರ ಹಣದ ಅವಶ್ಯಕತೆ ಇದೆ. ಪ್ರಸಕ್ತ ಬಜೆಟ್‌ನಲ್ಲಿ ಸರ್ಕಾರ ಈ ಯೋಜನೆಗೆ ಹೆಚ್ಚಿನ ಅನುದಾನ ನೀಡುವ ಆಶಾಭಾವವನ್ನು ಜಿಲ್ಲೆಯ ಜನರು ಹೊಂದಿದ್ದಾರೆ.

ಇಂಡಿ ತಾಲೂಕಿನ ಲಕ್ಷಾಂತರ ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸುವ ಈ ಮಹತ್ವಕಾಂಕ್ಷಿ ಯೋಜನೆಗೆ ಬಜೆಟ್‌ನಲ್ಲಿ ನಿರೀಕ್ಷಿತ ಅನುದಾನ ದೊರೆತು ರೈತರ ಬದುಕು ಹಸನಾಗಬೇಕಿದೆ. ಈ ನಿಟ್ಟಿನಲ್ಲಿ ಕಾಂಗ್ರೆಸ್‌ ಸರ್ಕಾರ ದಿಟ್ಟಹೆಜ್ಜೆ ಇಡಬೇಕಿದೆ.

ಮಳೆಗಾಗಿ ತಾಮ್ರದ ಬಿಂದಿಗೆ ಬಳಿ ಭವಿಷ್ಯ ಕೇಳಿದ ವಿಜಯಪುರ ಜನ! ಬಿಂದಿಗೆ ನುಡಿದ ಭವಿಷ್ಯ ನಿಜವಾಗುತ್ತಾ?

ವೆಲೋಡ್ರಮ್‌ ಹೆಚ್ಚುವರಿ ಅನುದಾನ ದೊರೆಯುವುದೇ?

ವಿಜಯಪುರ ನಗರ ಹೊರ ವಲಯದ ಭೂತನಾಳ ಕೆರೆ ಬಳಿ 8 ಎಕರೆ 10 ಗುಂಟೆ ಜಮೀನಿನಲ್ಲಿ 7.34 ಕೋಟಿ ವೆಚ್ಚದ ಸೈಕ್ಲಿಂಗ್‌ ವೆಲೋಡ್ರಮ್‌ ನಿರ್ಮಾಣ ಹಂತದಲ್ಲಿದೆ. ಅದು ಕಳೆದ ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದೆ. ಶೇ 90ರಷ್ಟುಕಾಮಗಾರಿ ಮುಗಿದಿದ್ದು, ಶೇ. 10ರಷ್ಟುಕಾಮಗಾರಿಗೆ ಅಗತ್ಯದ ಹಣ ಒದಗಿಸಬೇಕಿದೆ. ಪ್ರೇಕ್ಷಕರ ಗ್ಯಾಲರಿ, ಕಚೇರಿ ಕಟ್ಟಡ ಹಾಗೂ ನಿರ್ವಹಣೆ ವೆಚ್ಚ ಸೇರಿ ಅಂದಾಜು 6 ಕೋಟಿ ಅನುದಾನದ ಅಗತ್ಯವಿದೆ. ಈ ಹಣ ಬಜೆಟ್‌ನಲ್ಲಿ ದೊರೆತರೆ ಸೈಕ್ಲಿಂಗ್‌ ವೆಲೋಡ್ರಮ್‌ ಲೋಕಾಪÜರ್‍ಣೆಗೆ ಸಿದ್ದವಾಗಲಿದೆ.

ಕೆರೆಗೆ ನೀರು ತುಂಬುವ ಯೋಜನೆಗೆ ಅನುದಾನ ಸಿಗುವುದೇ?

ವಿಜಯಪುರ ಜಿಲ್ಲೆಯಲ್ಲಿ ಈ ಹಿಂದೆ ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಅಂದಿನ ವಿಜಯಪುರದ ಎಂ.ಬಿ.ಪಾಟೀಲ ಅವರು ಜಲ ಸಂಪನ್ಮೂಲ ಸಚಿವರಾಗಿದ್ದರು. ಆ ವೇಳೆಯಲ್ಲಿ ಕೆರೆಗೆ ನೀರು ತುಂಬುವ ಯೋಜನಗೆ ಜೀವ ಬಂತು. ಅದು ನಂತರ ಬಿಜೆಪಿ ಸರ್ಕಾರದಲ್ಲಿ ಅರ್ಧಕ್ಕೆ ಸ್ಥಗಿತಗೊಂಡಿತು. ಈಗ ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದಿದೆ. ಎಂ.ಬಿ.ಪಾಟೀಲ ಅವರು ಜಲ ಸಂಪನ್ಮೂಲ ಸಚಿವರಾಗದಿದ್ದರೂ ಬೃಹತ್‌ ಹಾಗೂ ಮಧ್ಯಮ ಕೈಗಾರಿಕೆ ಮತ್ತು ಮೂಲ ಸೌಲಭ್ಯಗಳ ಖಾತೆ ಸಚಿವರಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 6 ಮಂದಿ ಕಾಂಗ್ರೆಸ್‌ ಶಾಸಕರು ಚುನಾಯಿತರಾಗಿದ್ದಾರೆ. ಈ ಕಾರಣಕ್ಕಾಗಿ ಜಿಲ್ಲೆಗೆ ಕೆರೆಗೆ ನೀರು ತುಂಬುವ ಯೋಜನೆಗೆ ಅನುದಾನ ಹರಿದು ಬರುವುದೆ? ಎಂದು ಜಿಲ್ಲೆಯ ಜನರು ಕುತೂಹಲದಿಂದ ಕಾದು ನೋಡುತ್ತಿದ್ದಾರೆ.

click me!