ಕೇಂದ್ರದಿಂದ ಪರಿಹಾರ ಬಂದಿಲ್ಲ: ಸ್ವಪಕ್ಷೀಯ ಸಂಸದನ ವಿರುದ್ಧ ಯತ್ನಾಳ್ ಹಿಗ್ಗಾಮುಗ್ಗಾ ವಾಗ್ದಾಳಿ

By Web Desk  |  First Published Sep 28, 2019, 7:35 PM IST

ನೆರೆ ಸಂತ್ರಸ್ತರ ಪರಿಹಾರ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ನೀಡಿರುವ ಬೇಜವಾಬ್ದಾರಿಯುತ ಹೇಳಿಕೆಗೆ ವ್ಯಾಪಕ ಟೀಕೆಗಳು ವ್ಯಕ್ತವಾಗುತ್ತಿವೆ. ಇದೀಗ ಸಂಸದ ಸೂರ್ಯಗೆ ಸ್ವಪಕ್ಷೀಯ ಹಿರಿಯ ಶಾಸಕ ವಾರ್ನಿಂಗ್ ಕೊಟ್ಟಿದ್ದಾರೆ.


ವಿಜಯಪುರ, [ಸೆ.28]: ಬಿಜೆಪಿ ಯುವ ಸಂಸದ ತೇಜಸ್ವಿ ಸೂರ್ಯ ವಿರುದ್ಧ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗರಂ ಆಗಿದ್ದಾರೆ.

ವಿಜಯಪುರದಲ್ಲಿ ಇಂದು [ಶನಿವಾರ] ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಕರ್ನಾಟಕದಲ್ಲಿ ಹಣವಿದೆ ಎಂದು ಬೇಜವಾಬ್ದಾರಿ ಹೇಳಿಕೆ ನೀಡಿದ್ರೆ ನಾನು ಸುಮ್ಮನೆ ಕೂಡುವುದಿಲ್ಲ. ಬೇಜವಾಬ್ದಾರಿಯುತ ಹೇಳಿಕೆಗೆ ಉತ್ತರ ಕರ್ನಾಟಕ ಕಣ್ಣು ಮುಚ್ಚಿ ಕೂಡುವುದಿಲ್ಲ. ಸಂಸದ ಸೂರ್ಯ ನೀಡಿರುವ ಹೇಳಿಕೆ ವಾಪಸ್ಸು ಪಡೆಯಬೇಕು ಎಂದು  ಆಗ್ರಹಿಸಿದರು.

Tap to resize

Latest Videos

undefined

ಉತ್ತರ ಕರ್ನಾಟಕಕ್ಕೆ ಬಿಎಸ್‌ವೈ ಉತ್ತಮ ನೆರವು: ತೇಜಸ್ವಿ

ನಾವೇನು ಕೇಂದ್ರದಿಂದ ಭೀಕ್ಷೆ ಕೇಳುತ್ತಿಲ್ಲ. ಸಂತ್ರಸ್ತರು ಕಣ್ಣೀರು ಹಾಕುತ್ತಿದ್ದಾರೆ. ಬೇಜವಾಬ್ದಾರಿಯುತ ಹೇಳಿಕೆ ನೀಡುವವರು ಸ್ಥಳಕ್ಕೆ ಬಂದು ನೋಡಬೇಕು ಎಂದು ಸ್ವಪಕ್ಷೀಯ ಸಂಸದನ ವಿರುದ್ಧವೇ ಕಿಡಿಕಾರಿದರು.

ಉತ್ತರ ಕರ್ನಾಟಕಕ್ಕೆ ಅನ್ಯಾಯವಾದಾಗ ಧ್ವನಿ ಎತ್ತುತ್ತೇನೆ. ನೆರೆ ಸಂತ್ರಸ್ತರಿಗೆ ಕೇಂದ್ರದಿಂದ ಪರಿಹಾರ ಬಂದಿಲ್ಲ. ಉತ್ತರ ಕರ್ನಾಟಕದ ಜನಜೀವನ ಅಸ್ತವ್ಯಸ್ತವಾಗಿದೆ. ತಕ್ಷಣ 5 ಸಾವಿರ ಕೋಟಿ ಹಣ ಬಿಡುಗಡೆ ಮಾಡಬೇಕು.  ಇದಕ್ಕಾಗಿ ಎಲ್ಲ ಸಂಸದರು ಹಾಗೂ ಸಚಿವರು ಪ್ರಧಾನಿ ಮೋದಿ ಬಳಿ ನಿಯೋಗ ತೆಗೆದುಕೊಂಡು ಹೋಗಬೇಕು. ಇದರಲ್ಲಿ ಯಾರೂ ರಾಜಕೀಯ ಮಾಡಬಾರದು. ಕೇಂದ್ರ ಸರ್ಕಾರ ನಮ್ಮ ನ್ಯಾಯಯುತ ಬೇಡಿಕೆಯನ್ನು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಅರ್ಧ ಕರ್ನಾಟಕವೇ ಮುಗಿಹೋಗಿದ್ದರು ನೋಡುವುದಕ್ಕೆ ಪ್ರಧಾನಿ ಬರಲಿಲ್ಲವೆಂದು ಇಡೀ ಕರುನಾಡು ಬೇಸರ ವ್ಯಕ್ತಪಡಿಸುತ್ತಿದೆ. ಅಷ್ಟೇ ಅಲ್ಲದೇ ಇಲ್ಲಿಯವರೆಗೂ ನೆರೆ ಪರಿಹಾರಕ್ಕೆ ಒಂದು ಪೈಸೈ ಹಣ ಬಿಡುಗಡೆ ಮಾಡಿಲ್ಲ. ಇದ್ರಿಂದ ಕರ್ನಾಟಕದ ಜನರನ್ನು ಇನ್ನಷ್ಟು ಕೆರಳಿಸಿದೆ. ಇದರ ಮಧ್ಯೆ ಬೆಂಗಳೂರು ದಕ್ಷಿಣ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು  ರಾಜ್ಯದ ನೆರೆ ಪರಿಹಾರಕ್ಕೆ ಕೇಂದ್ರದ ನೆರವಿನ ಅವಶ್ಯಕತೆ ಇಲ್ಲ ಎಂದು ಹೇಳಿಕೆ ನೀಡಿದ್ದರು. 

ಇದು ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಇನ್ನು ಈ ಬಗ್ಗೆ ಸಿಎಂ ಯಡಿಯೂರಪ್ಪ ಅವರು ಸಹ ತೇಜಸ್ವಿ ಸೂರ್ಯಗೆ ದೂರವಾಣಿ ಮೂಕಲ ತರಾಟೆಗೆ ತೆಗೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.   

click me!