ವಿಜಯಪುರ ವೈರ್‌ಲೆಸ್‌ ವಿಭಾಗದ ಕರ್ತವ್ಯನಿರತ ಪಿಎಸ್‌ಐ ಸಾವು!

By Sathish Kumar KHFirst Published Jan 23, 2024, 3:54 PM IST
Highlights

ವಿಜಯಪುರ ಕಂಟ್ರೋಲ್‌ ರೂಮ್‌ ವಿಭಾಗದ ಪೊಲಿಸ್‌ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಶಂಕರಗೌಡ ಸಾರವಾಡ ಅವರು ಕರ್ತವ್ಯದಲ್ಲಿರುವಾಗಲೇ ಸಾವನ್ನಪ್ಪಿದ್ದಾರೆ.

ವಿಜಯಪುರ (ಜ.23): ವಿಜಯಪುರ ಕಂಟ್ರೋಲ್‌ ರೂಮ್‌ ವಿಭಾಗದ ಕರ್ತವ್ಯನಿರತ ಪೊಲಿಸ್‌ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ಶಂಕರಗೌಡ ಸಾರವಾಡ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.

ಹೌದು, ವಿಜಯಪುರ ಜಿಲ್ಲೆಯ ವೈರ್ ಲೆಸ್ ವಿಭಾಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಶಂಕರಗೌಡ (28) ಅವರು ಕರ್ತವ್ಯದಲ್ಲಿರುವಾಗಲೇ ಸಾವನ್ನಪ್ಪಿದ್ದಾರೆ. ನರ ರೋಗದಿಂದ ಬಳಲುತ್ತಿದ್ದ ಪಿಎಸ್ಐ ಶಂಕರಗೌಡ, ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಮೃತರಾಗಿದ್ದಾರೆ. ನರ ರೋಗದಿಂದ ಬಳುತ್ತಿದ್ದ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು ಎಂದು ಪೋಷಕರು ತಿಳಿಸಿದ್ದಾರೆ. ಪಿಎಸ್ಐ ಸಾವಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ‌ ಸೋನೆವಣೆ, ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ.

Mandya 25 ಕೋಟಿ ರೂ.ಗೆ ಆಸೆಪಟ್ಟು 1.10 ಕೋಟಿ ರೂ. ಕಳೆದುಕೊಂಡ ಕ್ರೈಸ್ತ ಶಿಕ್ಷಣ ಸಂಸ್ಥೆ

ರಾಜ್ಯದ ಎಲ್ಲ ಪೊಲೀಸರಿಗೆ ಬೆಳ್ಳಿ ಪದಕ ವಿತರಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: 
ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು. ರಾಜ್ಯದ ಎಲ್ಲಾ ಪೊಲೀಸರ ವೈದ್ಯಕೀಯ ವೆಚ್ಚ 1000 ದಿಂದ 1500 ಕ್ಕೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಪೊಲೀಸ್ ಪ್ರಧಾನ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ನಡೆಸಲಾದ ಸಭೆಯಲ್ಲಿ ಮಾತನಾಡಿದ ಅವರು, ಕರ್ನಾಟಕ ಏಕೀಕರಣದ ಸುವರ್ಣ ಮಹೋತ್ಸವದ ಅಂಗವಾಗಿ ರಾಜ್ಯದ ಎಲ್ಲಾ ಪೊಲೀಸ್ ಸಿಬ್ಬಂದಿಗೆ ಬೆಳ್ಳಿ ಪದಕ ನೀಡಲಾಗುವುದು. ರಾಜ್ಯದ ಎಲ್ಲಾ ಪೊಲೀಸರ ವೈದ್ಯಕೀಯ ವೆಚ್ಚ 1000 ದಿಂದ 1500 ಕ್ಕೆ ಹೆಚ್ಚಿಸಲಾಗುವುದು. CEN ಠಾಣಾಧಿಕಾರಿಗಳ ಹುದ್ದೆಯನ್ನು ACP ಮತ್ತು DCP ಮಟ್ಟಕ್ಕೆ ಉನ್ನತೀಕರಣ ಮಾಡಲಾಗುವುದು. ಬೆಂಗಳೂರು ನಗರದಲ್ಲಿ 8 ಅಡಿಷನಲ್ DCP ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಷ್ಟಿಸಲಾಗುವುದು. ರಾಜ್ಯವನ್ನು ಡ್ರಗ್ ಮುಕ್ತ ಗೊಳಿಸುವ ದಿಕ್ಕಿನಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಮೇಲುಕೋಟೆ ಶಿಕ್ಷಕಿಯನ್ನು ಕೊಲೆಗೈದು ಮಣ್ಣಲ್ಲಿ ಮುಚ್ಚಿ ಹೋದನಾ ಮಂಡ್ಯ ಹೈದ?

ಪೊಲೀಸರಿಗೆ ನಮ್ಮ ಸರ್ಕಾರ ಸಂಪೂರ್ಣ ಫ್ರೀ ಹ್ಯಾಂಡ್ ಕೊಟ್ಟಿದೆ. ಪೊಲೀಸರ ಕೆಲಸದಲ್ಲಿ ಮೂಗು ತೂರಿಸಬಾರದು ಎನ್ನುವುದು ನನ್ನ ಬದ್ಧತೆ. ಆದರೆ, ನಾವು ಫ್ರೀ ಹ್ಯಾಂಡ್ ಕೊಟ್ಟಿದ್ದು ದುರುಪಯೋಗ ಆಗಬಾರದು. ಅದು ಜನರಿಗೆ ಅನುಕೂಲ ಆಗುವಂತಿರಬೇಕು. ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು. ನಮ್ಮದು ಜಾತ್ಯತೀತ ರಾಷ್ಟ್ರವಾಗಿದೆ. ನಾವುಗಳೇ ನಮ್ಮ ಸಂವಿಧಾನದ ಆಶಯಗಳನ್ನು ಬಲಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

click me!