ಪಟ್ಟಣದ ನ್ಯಾ ಬೆಲೆ ಅಂಗಡಿಯಲ್ಲಿ ಗುರುವಾರ ಸಾರವರ್ಧಿತ ಅಕ್ಕಿ ಪೂರೈಸಿದ್ದು, ಇದು ಪ್ಲಾಸ್ಟಿಕ್ ಅಕ್ಕಿ ಎಂದು ಫಲಾನುಭವಿಗಳು ಅಕ್ಕಿ ಪಡೆಯಲು ನಿರಾಕರಿಸಿದ ಘಟನೆ ನಡೆದಿದೆ. ಬಳಿಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಾರವರ್ಧಿತ ಅಕ್ಕಿ ಎಂದು ತಿಳಿಸಿ ಗೊಂದಲ ದೂರ ಮಾಡಿದರು.
ಲಕ್ಷ್ಮೇಶ್ವರ (ಜ.21) : ಪಟ್ಟಣದ ನ್ಯಾ ಬೆಲೆ ಅಂಗಡಿಯಲ್ಲಿ ಗುರುವಾರ ಸಾರವರ್ಧಿತ ಅಕ್ಕಿ ಪೂರೈಸಿದ್ದು, ಇದು ಪ್ಲಾಸ್ಟಿಕ್ ಅಕ್ಕಿ ಎಂದು ಫಲಾನುಭವಿಗಳು ಅಕ್ಕಿ ಪಡೆಯಲು ನಿರಾಕರಿಸಿದ ಘಟನೆ ನಡೆದಿದೆ. ಬಳಿಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಾರವರ್ಧಿತ ಅಕ್ಕಿ ಎಂದು ತಿಳಿಸಿ ಗೊಂದಲ ದೂರ ಮಾಡಿದರು. ಸರ್ಕಾರದ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ವಿತರಣೆ ಮಾಡುವ ಪಡಿತರದಲ್ಲಿ ಪ್ಲಾಸ್ಟಿಕ್ ಅಕ್ಕಿ ಬಂದಿದೆ ಎಂಬ ತಪ್ಪು ಮಾಹಿತಿ ಮತ್ತು ಮಾಹಿತಿ ಕೊರತೆಯಿಂದ ಪಡಿತರ ಫಲಾನುಭವಿಗಳು ಆತಂಕಕ್ಕೀಡಾಗಿದ್ದರು.
ಪಡಿತರ ಅಕ್ಕಿಯಲ್ಲಿ ಸೌತೆ ಬೀಜದಂತಹ ಅಕ್ಕಿ ಕಂಡುಬಂದ ಹಿನ್ನೆಲೆ ಇದು ಪ್ಲಾಸ್ಟಿಕ್ ಅಕ್ಕಿಯೇ ಎಂಬ ಗುಮಾನಿ ಹರಡಿ ಪಡಿತರ ಪಡೆಯಲು ಸಾಲುಗಟ್ಟಿನಿಂತ ಫಲಾನುಭವಿಗಳು ಪರಸ್ಪರ ಆತಂಕದಿಂದ ಮಾತನಾಡಿಕೊಳ್ಳುತ್ತ ನ್ಯಾಯಬೆಲೆ ಅಂಗಡಿಯವರಿಗೆ ನಮಗೆ ಈ ಅಕ್ಕಿ ಬೇಡ ಎಂದು ನಿರಾಕರಿಸಿದ ಪ್ರಸಂಗ ನಡೆಯಿತು.
BIG 3: ಗದಗ ತರಕಾರಿ ಮಾರುಕಟ್ಟೆಯಲ್ಲಿ 'ಕತ್ತಲೆ'ಯಲ್ಲೇ ರೈತರ ವ್ಯಾಪಾರ
ಈ ಸುದ್ದಿ ತಿಳಿದ ಆಹಾರ ನಿರೀಕ್ಷಕ ಜಗದೀಶ ಕುರುಬರ ಹಾಗೂ ಮಂಜುಳಾ ಆಕಳದ ಸ್ಥಳಕ್ಕೆ ಆಗಮಿಸಿ ಮಾಹಿತಿ ನೀಡಿ, ಜನಸಾಮಾನ್ಯರಲ್ಲಿನ ಅಪೌಷ್ಟಿಕತೆ ಹೋಗಲಾಡಿಸಿ ಆರೋಗ್ಯ ವೃದ್ಧಿಸುವ ಉದ್ದೇಶದಿಂದ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಸಾರಯುಕ್ತ ಅಕ್ಕಿ ವಿತರಣೆ ಮಾಡುತ್ತಿದೆ. ಪ್ರತಿ 50 ಕೆಜಿ ಅಕ್ಕಿಯ ಚೀಲದಲ್ಲಿ ಅರ್ಧ ಕೆಜಿಯಷÜು್ಟಪೋಷÜಕಾಂಶ (ವಿಟಾಮಿನ್ ಎ ಮತ್ತು ಡಿ ಐರನ್, ಫೋಲಿಕ್ ಆಸಿಡ್, ಬಿ ಕಾಂಪ್ಲೆಕ್ಸ್, ಜಿಂಕ್ ಹಾಗೂ ಐಯೋಡಿನ್) ಭರಿತ ಸಾರವರ್ಧಿತ ಅಕ್ಕಿ ಬೆರೆಸಿ ವಿತರಣೆ ಮಾಡಲಾಗುತ್ತಿದೆ. ಸಾರವರ್ಧಿತಗೊಳಿಸಿರುವ (ಪೋರ್ಟಿಫೈಡ್) ಅಕ್ಕಿಯಲ್ಲಿ ಕೆಲವೊಂದು ಅಕ್ಕಿಯ ಕಾಳುಗಳು ನೆನೆದು ಉಬ್ಬಿದ ರೀತಿಯಲ್ಲಿರುವುದು ಆತಂಕ ಮೂಡಿಸುತ್ತದೆ. ಆದರೆ, ಇದು ರಕ್ತ ಹೀನತೆ, ಅಪೌಷ್ಟಿಕತೆ ನಿವಾರಣೆ, ಮಧುಮೇಹ, ಬಿಪಿಯಂತಹ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಗರ್ಭಿಣಿಯರಿಗೆ, ಬಾಣಂತಿಯರಿಗೆ, ಚಿಕ್ಕಮಕ್ಕಳಿಗೆ ಈ ಪಡಿತರ ಅಕ್ಕಿ ಪೌಷ್ಟಿಕತೆಯನ್ನು ಹೆಚ್ಚಿಸುತ್ತದೆ. ಜೊತೆಗೆ ದೇಹವನ್ನು ತಂಪಾಗಿಡುತ್ತದೆ. ಆದ್ದರಿಂದ ಯಾರೂ ಆತಂಕಕ್ಕೀಡಾಬಾರದು. ಈ ಬಗ್ಗೆ ನ್ಯಾಯಬೆಲೆ ಅಂಗಡಿಯವರಿಗೆ ಮತ್ತು ಫಲಾನುಭವಿಗಳಿಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಮುದ್ರಣ ಕಾಶಿಯಲ್ಲಿಂದು ಪ್ರಜಾಧ್ವನಿ ಯಾತ್ರೆ: ಕೈ ಶಕ್ತಿ ಪ್ರದರ್ಶನಕ್ಕೆ ಅಂತಿಮ ಸಿದ್ಧತೆ
ಈ ವೇಳೆ ಮಾತನಾಡಿದ ಪಡಿತರ ಫಲಾನುಭವಿಗಳು ಈ ಹಿಂದೆ ಅನ್ನಭಾಗ್ಯ ಅಕ್ಕಿಯಲ್ಲಿ ಪಾಸ್ಟಿಕ್ ಅಕ್ಕಿ ಬರುತ್ತದೆ ಎಂಬ ಸುದ್ದಿ ಈಗಲೂ ಜನರ ಮನಸ್ಸಿನಲ್ಲಿ ಉಳಿದಿದೆ. ಇಂತಹ ಸಂದರ್ಭದಲ್ಲಿ ಅಕ್ಕಿಯಲ್ಲಿ ಪೌಷ್ಟಿಕಾಂಶದ ಅಕ್ಕಿ ಸೇರಿಸಲಾಗಿದೆ ಎಂಬ ಮಾಹಿತಿ ನೀಡದೇ ಇರುವುದು ನಮ್ಮಲ್ಲಿ ಆತಂಕ, ಗಾಬರಿ ಮೂಡಿಸಿದೆ. ಈ ಬಗ್ಗೆ ಇಲಾಖೆಯವರು ಪ್ರತಿ ನ್ಯಾಯಬೆಲೆ ಅಂಗಡಿಯವರಿಗೆ ಮತ್ತು ಪಡಿತರ ಫಲಾನುಭವಿಗಳಿಗೆ ಮಾಹಿತಿ ನೀಡಬೇಕು ಎಂದು ಮಂಜುನಾಥ ಗೊರವರ, ಲಕ್ಷ್ಮವ್ವ ಹಳ್ಳಿಕೇರಿ ಅಭಿಪ್ರಾಯ ವ್ಯಕ್ತಪಡಿಸಿದರು.