ಇಂದು ವಿನಯ್‌ ಕುಲಕರ್ಣಿ ಬಿಡುಗಡೆ ಸಾಧ್ಯತೆ

By Kannadaprabha News  |  First Published Aug 21, 2021, 9:30 AM IST

*  ವಿನಯ ಕುಲಕರ್ಣಿಗೆ ಜಾಮೀನು ಮಂಜೂರು ಮಾಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ
*  ಬೆಳಗಾವಿ ಹಿಂಡಲಗಾ ಜೈಲಿನ ಎದುರು ಪೊಲೀಸರು, ಕೆಎಸ್‌ಆರ್‌ಪಿ ತುಕಡಿ ನಿಯೋಜನೆ
*  ಜೈಲು ಅಧಿಕಾರಿಗಳ ಕೈ ಸೇರದ ಆದೇಶ ಪ್ರತಿ 
 


ಬೆಳಗಾವಿ(ಆ.21): ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಪಂ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಕಳೆದ 9 ತಿಂಗಳಿನಿಂದ ಹಿಂಡಲಗಾ ಕಾರಾಗೃಹದಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದ್ದರೂ ಆದೇಶ ಪ್ರತಿ ಜೈಲು ಅಧಿಕಾರಿಗಳ ಕೈ ಸೇರದ ಹಿನ್ನೆಲೆಯಲ್ಲಿ ಶುಕ್ರವಾರವೂ ಬಿಡುಗಡೆಯ ಭಾಗ್ಯ ಸಿಕ್ಕಿಲ್ಲ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಜಾಮೀನು ಆದೇಶ ಪ್ರತಿ ಹಿಂಡಲಗಾ ಜೈಲು ಅಧಿಕಾರಿಗಳಿಗೆ ತಲುಪದ ಹಿನ್ನೆಲೆಯಲ್ಲಿ ಆ.21ರಂದು ವಿನಯ್ ಕುಲಕರ್ಣಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಜಾಮೀನು ಆದೇಶ ಪ್ರತಿ ಜೈಲು ಅಧಿಕಾರಿಗಳಿಗೆ ತಲುಪಿಲ್ಲ. ಅಲ್ಲದೆ ಜಾಮೀನು ನೀಡುವ ವೇಳೆಗೆ ಸ್ಥಳೀಯ ಕೋರ್ಟ್‌ನಲ್ಲಿ ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿದ ಮಾಹಿತಿ ಇದ್ದು, ಶುಕ್ರವಾರ ನ್ಯಾಯಾಲಯಕ್ಕೆ ರಜೆ ಇರುವ ಹಿನ್ನೆಲೆ ಶ್ಯೂರಿಟಿ ನೀಡಲೂ ಆಗಿಲ್ಲ. ಹೀಗಾಗಿ ಶುಕ್ರವಾರ ಮಾಜಿ ಸಚಿವ ವಿನಯ ಕುಲಕರ್ಣಿ ಬಿಡುಗಡೆ ಆಗಿಲ್ಲ.

Tap to resize

Latest Videos

ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿಗೆ ಸಿಕ್ತು ಬಿಡುಗಡೆ ಭಾಗ್ಯ..!

ಅಲ್ಲದೆ, ಜೈಲು ಅಧಿಕಾರಿ ಹಾಗೂ ಸಿಪಿಐ ಸುನೀಲ್‌ ಕುಮಾರ ಚರ್ಚೆ ನಂತರ ಹಿಂಡಲಗಾ ಜೈಲಿನ ಎದುರು ಬೆಳಗಾವಿ ಗ್ರಾಮೀಣ ಪೊಲೀಸರು, ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದೆ. ಬಹುತೇಕ ಶನಿವಾರ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನು ಬಿಡುಗಡೆ ಮಾಡುವ ಸಾಧ್ಯತೆ ಇದೆ.
 

click me!