ವಿಶ್ವಕರ್ಮ ಕೌಶಲ್ಯ ಅಭಿವೃದ್ಧಿ ಯೋಜನೆ: ಸಾಲಕ್ಕೆ ಶೇ.5 ಬಡ್ಡಿ

By Kannadaprabha News  |  First Published Jan 30, 2024, 9:03 AM IST

ಪ್ರಧಾನಮಂತ್ರಿಯವರ ಯೋಜನೆಗಳಲ್ಲಿ ಒಂದಾದ ವಿಶ್ವಕರ್ಮ ಕೌಶಲ್ಯಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಸಾಲ ಪಡೆಯುವವರಿಗೆ ಶೇ. 5ರ ಬಡ್ಡಿ ದರ ವಿಧಿಸಲಾಗುವುದು ಎಂದು ಮದಲೂರು ಕೆನರಾ ಬ್ಯಾಂಕಿನ ವ್ಯವಸ್ಥಾಪಕ ರಘು ತಿಳಿಸಿದರು.


ಶಿರಾ: ಪ್ರಧಾನಮಂತ್ರಿಯವರ ಯೋಜನೆಗಳಲ್ಲಿ ಒಂದಾದ ವಿಶ್ವಕರ್ಮ ಕೌಶಲ್ಯಾಭಿವೃದ್ಧಿ ಯೋಜನೆಯ ಅಡಿಯಲ್ಲಿ ಸಾಲ ಪಡೆಯುವವರಿಗೆ ಶೇ. 5ರ ಬಡ್ಡಿ ದರ ವಿಧಿಸಲಾಗುವುದು ಎಂದು ಮದಲೂರು ಕೆನರಾ ಬ್ಯಾಂಕಿನ ವ್ಯವಸ್ಥಾಪಕ ರಘು ತಿಳಿಸಿದರು.

ಕೆನರಾ ಬ್ಯಾಂಕ್ ಹಾಗೂ ಆರ್ಥಿಕ ಸಾಕ್ಷರತಾ ಸಲಹಾ ಕೇಂದ್ರಗಳು ಕೊಟ್ಟ ಗ್ರಾಮ ಪಂಚಾಯತಿ ಆವರಣದಲ್ಲಿ ಏರ್ಪಡಿಸಿದ್ದ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ವಿಶ್ವಕರ್ಮ ಕೌಶಲ್ಯ ಅಭಿವೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸಿದವರು ಇದರ ಸದುಪಯೋಗಪಡಿಸಿಕೊಳ್ಳಿ ಎಂದರು.

Latest Videos

undefined

ಕೊಟ್ಟ ಗ್ರಾಪಂ ಪಿಡಿಒ ಜಗನ್ನಾಥ್ ಮಾತನಾಡಿ, ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಐದರಿಂದ ಏಳು ದಿನಗಳ ಕಾಲ ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ನೀಡುವುದರ ಜೊತೆಗೆ ಪ್ರತಿದಿನ 500 ರೂಪಾಯಿ ಭತ್ಯೆ ನೀಡಲಾಗುವುದು ಎಂದರು.

ಶಿರಾ ಆರ್ಥಿಕ ಸಾಕ್ಷರತಾ ಸಲಹೆಗಾರರಾದ ಮಂಜುನಾಥ ಮಾತನಾಡಿ, ಇತ್ತೀಚಿಗೆ ಸೈಬರ್ ಅಪರಾಧಗಳು ಹೆಚ್ಚಾಗುತ್ತಿದ್ದು ಜನರ ಖಾತೆಯಲ್ಲಿನ ಹಣವು ಕಳ್ಳರ ಪಾಲಾಗುತ್ತಿದ್ದು ಜನರು ಇದರ ಬಗ್ಗೆ ತುಂಬಾ ಜಾಗರೂಕರಾಗಿರಬೇಕೆಂದು ಕರೆ ನೀಡಿದರು

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯೆ ಶಶಿಕಲಾ, ಕೆನರಾ ಬ್ಯಾಂಕ್ ಫೀಲ್ಡ್ ಆಫೀಸರ್ ಕಾವ್ಯಾ ಸೇರಿದಂತೆ ಮಹಿಳೆಯರು ಸ್ವಸಹಾಯ ಸಂಘದ ಸದಸ್ಯರು ರೈತರು ಭಾಗವಹಿಸಿದ್ದರು.

ವಿಶ್ವಕರ್ಮ ನೋಂದಣಿ ಯೋಜನೆ 

ಧಾರವಾಡ(ಜ.13):  ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಹಾಗೂ ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ರಾಜೀವ ಚಂದ್ರಶೇಖರ ಅವರ ಕನಸಿನ ಕೂಸಾದ ‘ಪಿಎಂ ವಿಶ್ವಕರ್ಮ ಯೋಜನೆ’ಯ ನೋಂದಣಿಯಲ್ಲಿ ಸಚಿವ ರಾಜೀವ್‌ ಅವರ ತವರು ರಾಜ್ಯ ಕರ್ನಾಟಕ, ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಕರಕುಶಲಕರ್ಮಿಗಳನ್ನು ಗುರುತಿಸಿ ಕೌಶಲ್ಯ ಉನ್ನತೀಕರಣಗೊಳಿಸುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು ಆರಂಭಿಸಲಾಗಿದೆ.

2023ರ ಸೆಪ್ಟೆಂಬರ್‌ 17ರಂದು ಪ್ರಧಾನಿ ಮೋದಿ ಅವರು ಈ ಯೋಜನೆಗೆ ದೇಶಾದ್ಯಂತ ಚಾಲನೆ ನೀಡಿದ್ದರು. ರಾಜ್ಯದಲ್ಲಿ ಹುಬ್ಬಳ್ಳಿಯಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ರಾಜೀವ ಚಂದ್ರಶೇಖರ ಯೋಜನೆಗೆ ಹಸಿರು ನಿಶಾನೆ ತೋರಿದ್ದರು. ಜ.11ರ ವರೆಗೆ ಬರೀ ನಾಲ್ಕು ತಿಂಗಳಲ್ಲಿ ಕರ್ನಾಟಕದಲ್ಲಿ ಬರೋಬ್ಬರಿ 19,18,888 ಕರಕುಶಲಕರ್ಮಿಗಳು ಈ ಯೋಜನೆಗೆ ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಕೇಂದ್ರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ಸಚಿವಾಲಯದ ಅಂಕಿ-ಅಂಶಗಳ ಪ್ರಕಾರ, ಇಡೀ ದೇಶದಲ್ಲಿ 62,24,161 ಜನರು ನೋಂದಣಿ ಮಾಡಿಕೊಂಡಿದ್ದು, 2ನೇ ಸ್ಥಾನದಲ್ಲಿ ಆಂಧ್ರಪ್ರದೇಶ (6,42,162), 3ನೇ ಸ್ಥಾನದಲ್ಲಿ ಪಶ್ಚಿಮ ಬಂಗಾಳ (5,61,795) ಇದೆ.
ಕಮ್ಮಾರರು, ಅಕ್ಕಸಾಲಿಗರು, ಕುಂಬಾರರು, ಬಡಗಿಗಳು, ಶಿಲ್ಪಿಗಳು, ಬೋಟ್‌ ಮೇಕರ್‌, ದರ್ಜಿಗಳು ಸೇರಿದಂತೆ ಒಟ್ಟು 18 ಕರಕುಶಲ ಚಟುವಟಿಕೆಗಳಲ್ಲಿ ಯಾರು ತೊಡಗಿಕೊಂಡಿರುತ್ತಾರೆಯೋ ಅಂತಹ ಅರ್ಹರಿಗೆ ಮಾತ್ರ ಈ ಯೋಜನೆ ಅಡಿ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ದೇಶದಲ್ಲಿ ಈ ಯೋಜನೆಗೆ ನೋಂದಣಿ ಮಾಡಿದವರ 62.24 ಲಕ್ಷ ಜನರ ಪೈಕಿ ಅತೀ ಹೆಚ್ಚು 32,24,504 ಜನರು ದರ್ಜಿಗಳಿದ್ದಾರೆ. 11,68,827 ಮೇಸ್ತ್ರಿಗಳು, 4,33,275 ಕಾರ್ಪೆಂಟರ್‌ಗಳಿದ್ದಾರೆ.

ಪ್ರಧಾನಿ ಮೋದಿ ತಬ್ಬಿಕೊಂಡು ಭಾವುಕರಾದ ಮೀನು ಬಲೆ ನೇಯ್ಗೆಕಾರ, ವಿಡಿಯೋ ವೈರಲ್!

ರಾಜ್ಯದಲ್ಲಿ ಬೆಳಗಾವಿ ಫಸ್ಟ್‌: 

ಕರ್ನಾಟಕದ ಪೈಕಿ ಬೆಳಗಾವಿ ಮೊದಲ ಸ್ಥಾನದಲ್ಲಿದ್ದು, ಬರೋಬ್ಬರಿ 1,94,381 ಕುಶಲಕರ್ಮಿಗಳು ತಮ್ಮ ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ನಂತರದಲ್ಲಿ ತುಮಕೂರು 1,61,287, ಬೀದರ್‌ 1,38,635 ಜನರು ತಮ್ಮ ಹೆಸರನ್ನು ನೋಂದಣಿ ಮಾಡಿಕೊಂಡಿದ್ದಾರೆ. ಇನ್ನು, ಕೊನೆ ಸ್ಥಾನವನ್ನು ಕೊಡಗು ಪಡೆದಿದ್ದು, 2410 ಕುಶಲಕರ್ಮಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ 89,376 ಜನರು ನೋಂದಣಿ ಮಾಡಿದ್ದು, 8ನೇ ಸ್ಥಾನದಲ್ಲಿದೆ ಎಂದು ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಶಿವಪುತ್ರಪ್ಪ ಹೊಸಮನಿ ಈ ಕುರಿತು ‘ಕನ್ನಡಪ್ರಭ’ಕ್ಕೆ ಮಾಹಿತಿ ನೀಡಿದರು.

click me!