ಅಡ್ವಾಣಿಗೆ ರಾಮಲಲ್ಲಾನ ಪೂರ್ಣ ಕೃಪೆಯಾಗಿದೆ: ಪೇಜಾವರ ಶ್ರೀ

By Kannadaprabha News  |  First Published Feb 4, 2024, 4:34 AM IST

ರಾಮ ಜನ್ಮಭೂಮಿ ಆಂದೋಲನದಲ್ಲಿ ನಮ್ಮ ಗುರುಗಳಾದ ಶ್ರೀ ವಿಶ್ವೇಶ ತೀರ್ಥರು, ವಿಶ್ವ ಹಿಂದು ಪರಿಷತ್ತಿನ ನೇತಾರರಾಗಿದ್ದ ಅಶೋಕ್ ಸಿಂಘಲ್, ಮುರಳಿ ಮನೋಹರ ಜೋಶಿ ಮೊದಲಾದವರೊಂದಿಗೆ ಮುಂಚೂಣಿಯಲ್ಲಿದ್ದ ಆಡ್ವಾಣಿ ಅವರು ಈ ಉದ್ದೇಶಕ್ಕಾಗಿ ದೇಶಾದ್ಯಂತ ರಾಮರಥಯಾತ್ರೆ ಮಾಡಿ ಜನರಲ್ಲಿ ಸುಪ್ತವಾಗಿದ್ದ ರಾಮಭಕ್ತಿಯನ್ನು ಜಾಗೃತಗೊಳಿಸಿದ್ದು ಚರಿತ್ರಾರ್ಹ ಎಂದ ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು 


ಉಡುಪಿ(ಫೆ.04): ದೇಶದ ಮೌಲ್ಯಾಧಾರಿತ ರಾಜಕಾರಣದ ಪ್ರತಿನಿಧಿಯಾಗಿ ದಶಕಗಳ ಕಾಲ ಅಮೂಲ್ಯ ಸೇವೆ ಸಲ್ಲಿಸಿದ ಮತ್ತು ಅಯೋಧ್ಯೆ ರಾಮಮಂದಿರ ಆಂದೋಲನದಲ್ಲಿ ಅತ್ಯಂತ ಶ್ರದ್ಧಾಪೂರ್ವಕ ನೇತೃತ್ವ ನೀಡಿದ ಲಾಲಕೃಷ್ಣ ಅಡ್ವಾಣಿಯವರಿಗೆ ದೇಶದ ಪರಮೋಚ್ಚ ಪ್ರಶಸ್ತಿ ಭಾರತ ರತ್ನ ಘೋಷಣೆಯಾಗುವ ಮೂಲಕ ರಾಮಲಲ್ಲಾನ‌ ಪೂರ್ಣ ಕೃಪೆಯಾಗಿದೆ ಎಂದು ಶ್ರೀ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಹೇಳಿದ್ದಾರೆ. 

ರಾಮ ಜನ್ಮಭೂಮಿ ಆಂದೋಲನದಲ್ಲಿ ನಮ್ಮ ಗುರುಗಳಾದ ಶ್ರೀ ವಿಶ್ವೇಶ ತೀರ್ಥರು, ವಿಶ್ವ ಹಿಂದು ಪರಿಷತ್ತಿನ ನೇತಾರರಾಗಿದ್ದ ಅಶೋಕ್ ಸಿಂಘಲ್, ಮುರಳಿ ಮನೋಹರ ಜೋಶಿ ಮೊದಲಾದವರೊಂದಿಗೆ ಮುಂಚೂಣಿಯಲ್ಲಿದ್ದ ಅಡ್ವಾಣಿ ಅವರು ಈ ಉದ್ದೇಶಕ್ಕಾಗಿ ದೇಶಾದ್ಯಂತ ರಾಮರಥಯಾತ್ರೆ ಮಾಡಿ ಜನರಲ್ಲಿ ಸುಪ್ತವಾಗಿದ್ದ ರಾಮಭಕ್ತಿಯನ್ನು ಜಾಗೃತಗೊಳಿಸಿದ್ದು ಚರಿತ್ರಾರ್ಹ ಎಂದಿದ್ದಾರೆ.

Tap to resize

Latest Videos

undefined

Breaking: ಬಿಜೆಪಿಯ ಭೀಷ್ಮ ಎಲ್‌ ಕೆ ಅಡ್ವಾಣಿಗೆ ಭಾರತರತ್ನ ಘೋಷಣೆ

ಭಾರತದ ವಾರ್ತಾ ಮಂತ್ರಿ, ಗೃಹಮಂತ್ರಿ, ಉಪಪ್ರಧಾನಿ ಹೀಗೆ ಹಲವು ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ ಅಡ್ವಾಣಿಯವರು, ಒಂದೊಮ್ಮೆ ತಮ್ಮ ಮೇಲೆ ಹವಾಲಾ ಹಗರಣದ ಆರೋಪ ಬಂದಾಗ ಆರೋಪ ಮುಕ್ತನಾಗುವ ವರೆಗೆ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಘೋಷಿಸಿ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿರುವುದು ಉಲ್ಲೇಖನೀಯ. ಇದು ದೇಶದ ಎಲ್ಲ ಸ್ತರದ ರಾಜಕಾರಣಿಗಳಿಗೂ ಮಾದರಿ ಎಂದು ಶ್ರೀಗಳು ಹೇಳಿದ್ದಾರೆ.

ನ್ಯಾಯಾಲಯದಿಂದ ಜನ್ಮಭೂಮಿ ಪರ ತೀರ್ಪು ಬಂದ ಹೊತ್ತಲ್ಲಿ ಅವರನ್ನು ಅವರ ಮನೆಯಲ್ಲೇ ಭೇಟಿ ಮಾಡಿ ಅಭಿನಂದಿಸಿದ ವೇಳೆ ಅವರು ತೋರಿದ ಗೌರವ, ವಿನಯ, ಇಳಿವಯಸ್ಸಲ್ಲೂ ಬಾಗಿಲವರೆಗೆ ಬಂದು ಬೀಳ್ಕೊಟ್ಟ ಸೌಜನ್ಯ ಮರೆಯಲು ಸಾಧ್ಯವಿಲ್ಲ ಎಂದು ಶ್ರೀಗಳು ಅಡ್ವಾಣಿಯವರನ್ನು ವಿಶೇಷವಾಗಿ ಅಭಿನಂದಿಸಿದ್ದಾರೆ. 

click me!