ವಿಐಎಸ್‌ಎಲ್‌ ಕೋವಿಡ್‌ ಆಸ್ಪತ್ರೆಯಾಗಿ ರೂಪಾಂತರ

By Kannadaprabha NewsFirst Published Jul 7, 2020, 7:57 AM IST
Highlights

ವಿಐಎಸ್‌ಎಲ್‌ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ಪ್ರಕರಣಗಳಿಗೆ ಪ್ರತ್ಯೇಕವಾಗಿ ಸುಮಾರು 50 ಹಾಸಿಗೆ ಕಾಯ್ದಿರಿಸಲಾಗಿದೆ. ಈ ಸಂಬಂಧ ಕಳೆದ 3 ದಿನಗಳಿಂದ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ.  ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಭದ್ರಾವತಿ(ಜು.07): ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಡಳಿತ ನಗರದ ನ್ಯೂಟೌನ್‌ ವಿಐಎಸ್‌ಎಲ್‌ ಆಸ್ಪತ್ರೆಯನ್ನು ಇದೀಗ ಹೆಚ್ಚುವರಿಯಾಗಿ ಕೋವಿಡ್‌-19 ಆಸ್ಪತ್ರೆಯನ್ನಾಗಿ ಸಿದ್ದಗೊಳಿಸುತ್ತಿದೆ.

ವಿಐಎಸ್‌ಎಲ್‌ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತ ಪ್ರಕರಣಗಳಿಗೆ ಪ್ರತ್ಯೇಕವಾಗಿ ಸುಮಾರು 50 ಹಾಸಿಗೆ ಕಾಯ್ದಿರಿಸಲಾಗಿದೆ. ಈ ಸಂಬಂಧ ಕಳೆದ 3 ದಿನಗಳಿಂದ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳಲಾಗುತ್ತಿದೆ. ಸುಮಾರು 5 ವರ್ಷಗಳಿಂದ ಮುಚ್ಚಲ್ಪಟ್ಟಿರುವ ಎಂಪಿಎಂ ಆಸ್ಪತ್ರೆಯಿಂದ 50 ಹಾಸಿಗೆಗಳಿಗೆ ಅಗತ್ಯವಿರುವ ಸಾಮಗ್ರಿಗಳನ್ನು ವಿಐಎಸ್‌ಎಲ್‌ ಆಸ್ಪತ್ರೆಗೆ ತರಲಾಗಿದೆ. 

ಆಸ್ಪತ್ರೆ ಆವರಣದಲ್ಲಿ ಪ್ರತ್ಯೇಕವಾಗಿ ಬ್ಯಾರಿಗೇಡ್‌ಗಳನ್ನು ಅಳವಡಿಸಲಾಗಿದೆ. ಹಾಗೂ ತುರ್ತು ಸೇವೆಗೆ ಅಂಬ್ಯುಲೆನ್ಸ್‌ಗಳನ್ನು ಮೀಸಲಿಡಲಾಗಿದೆ. ನಿರ್ವಹಣೆ, ವೈದ್ಯರು ಹಾಗೂ ಸಿಬ್ಬಂದಿಗಳನ್ನು ನಿಯೋಜಿಸುವುದು ಸೇರಿ ಇತ್ಯಾದಿ ವಿಷಯಗಳ ಕುರಿತು ಜಿಲ್ಲಾಡಳಿತ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಹಳೇನಗರದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗಳನ್ನು ನೇಮಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿದೆ.

ಶಿವಮೊಗ್ಗದಲ್ಲಿ ಕೊರೋನಾ ಅಟ್ಟಹಾಸ; 24 ಮಂದಿಗೆ ಸೋಂಕು

ಶಿವಮೊಗ್ಗ ಜಿಲ್ಲೆಯಾದ್ಯಂತ ಕೊರೋನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಜುಲೈ 6ರ ಅಂತ್ಯದ ವೇಳೆಗೆ  285 ಕೊರೋನಾ ಕೇಸ್‌ಗಳು ಶಿವಮೊಗ್ಗದಲ್ಲಿ ದಾಖಲಾಗಿವೆ. ಈ ಪೈಕಿ 125 ಸೋಂಕಿತರು ಬಿಡುಗಡೆಯಾಗಿದ್ದಾರೆ. 156 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
 

click me!