ಪೌರತ್ವ ಕಾಯ್ದೆ ಪ್ರತಿಭಟನೆ: ವಿಶ್ವೇಶ್ವರಯ್ಯ ವಿವಿ ಪರೀಕ್ಷೆ ಮುಂದೂಡಿಕೆ

Published : Dec 20, 2019, 09:01 AM IST
ಪೌರತ್ವ ಕಾಯ್ದೆ ಪ್ರತಿಭಟನೆ: ವಿಶ್ವೇಶ್ವರಯ್ಯ ವಿವಿ ಪರೀಕ್ಷೆ ಮುಂದೂಡಿಕೆ

ಸಾರಾಂಶ

ಪೌರತ್ವ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ  ಪ್ರತಿಭಟನೆ|ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ|  ಮಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಕರ್ಫ್ಯೂ ಜಾರಿ| ಮುಂಜಾಗ್ರತಾ ಕ್ರಮವಾಗಿ ಪರೀಕ್ಷೆ ಮುಂದೂಡಿದ ವಿವಿ ಆಡಳಿತ ಮಂಡಳಿ|

ಬೆಳಗಾವಿ[ಡಿ.20]: ಪೌರತ್ವ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆ ಯಲ್ಲಿ ಇಂದು ನಡೆಯಬೇಕಿದ್ದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆಯಾಗಿವೆ. 

ಮಂಗಳೂರು ಸೇರಿದಂತೆ ಹಲವು ಕಡೆಗಳಲ್ಲಿ ಕರ್ಫ್ಯೂ ಜಾರಿ ಮಾಡಿದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿವಿ ಆಡಳಿತ ಮಂಡಳಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಆದೇಶ ಹೊರಡಿಸಿದೆ. 

ಪೌರತ್ವ ಕಾಯ್ದೆಯನ್ನು ವಿರೋಧಿಸಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆದಿದೆ. ಮಂಗಳೂರಲ್ಲಿ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಪರಿಣಾಮ ಪೊಲೀಸರ ಗುಂಡಿಗೆ ಇಬ್ಬರು ಬಲಿಯಾಗಿದ್ದಾರೆ. ಇಂದೂ ಕೂಡ ಪ್ರತಿಭಟನೆ ಇರುವ ಹಿನ್ನೆಲೆಯಲ್ಲಿ  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಪರೀಕ್ಷೆಯನ್ನು ಮುಂದೂಡಲಾಗಿದೆ. 
 

PREV
click me!

Recommended Stories

Indian Railways: ಕಡಿಮೆ ದರದಲ್ಲಿ ಎಸಿ ಕೋಚ್‌ಗಳು! ಗರೀಬ್ ರಥ್ ಇಷ್ಟೊಂದು ಜನಪ್ರಿಯವಾಗಲು ಕಾರಣವೇನು? ರೈಲ್ವೆಯ ಮಾಸ್ಟರ್ ಪ್ಲಾನ್ ಇಲ್ಲಿದೆ!
ನಮ್ಮ ಮೆಟ್ರೋ ಗುಲಾಬಿ ಮಾರ್ಗದ ಬಗ್ಗೆ ಹೊರಬಿತ್ತು ಅಚ್ಚರಿಯ ಸುದ್ದಿ