ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರ -74ರ ವ್ಯಾಪ್ತಿಯ ಧಾರವಾಡದ ಮತಗಟ್ಟೆ ಸಂಖ್ಯೆ 105ರ ಮತಗಟ್ಟೆ ಮಟ್ಟದ ಅಧಿಕಾರಿ ಸಚಿನ್ ನಾಯ್ಕ ಅವರು ಮತಗಟ್ಟೆ ಮಟ್ಟದ ಅಧಿಕಾರಿಯ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸದೇ ಕರ್ತವ್ಯ ಲೋಪವೆಸಗಿರುವುದರಿಂದ ಇಂದು ಸೇವೆಯಿಂದ ಅಮಾನತು ಮಾಡಿ, ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ.
ವರದಿ: ಪರಮೇಶ್ವರ ಅಂಗಡಿ, ಏಷ್ಯಾನೆಟ್ ಸುವರ್ಣ ನ್ಯೂಸ್, ಧಾರವಾಡ
ಧಾರವಾಡ (ಡಿ.07): ಹುಬ್ಬಳ್ಳಿ ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರ -74ರ ವ್ಯಾಪ್ತಿಯ ಧಾರವಾಡದ ಮತಗಟ್ಟೆ ಸಂಖ್ಯೆ 105ರ ಮತಗಟ್ಟೆ ಮಟ್ಟದ ಅಧಿಕಾರಿ ಸಚಿನ್ ನಾಯ್ಕ ಅವರು ಮತಗಟ್ಟೆ ಮಟ್ಟದ ಅಧಿಕಾರಿಯ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸದೇ ಕರ್ತವ್ಯ ಲೋಪವೆಸಗಿರುವುದರಿಂದ ಇಂದು ಸೇವೆಯಿಂದ ಅಮಾನತು ಮಾಡಿ, ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶಿಸಿದ್ದಾರೆ.
undefined
ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಶಹರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯದ ದ್ವಿತೀಯ ದರ್ಜೆ ಸಹಾಯಕ ಸಚಿನ್ ನಾಯ್ಕ ಅವರು ಮತಗಟ್ಟೆ ಮಟ್ಟದ ಅಧಿಕಾರಿಯ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸದೇ ಕರ್ತವ್ಯ ಲೋಪವೆಸಗಿರುವುದರಿಂದ ಅವರನ್ನು ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ಇಲಾಖಾ ವಿಚಾರಣೆ ಬಾಕಿ ಇರಿಸಿ, ಸರ್ಕಾರಿ ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ಮುಸ್ಲಿಂ ಮತಗಳ ಡಿಲೀಟ್: ದೀಪಕ್ ಚಿಂಚೋರೆ ಆರೋಪ
ಸಚಿನ್ ನಾಯ್ಕ ಅವರು ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಠರಣೆ, ಮನೆ ಮನೆ ಸಮೀಕ್ಷೆ ಕಾರ್ಯದಲ್ಲಿ ಬೇಜವಾಬ್ದಾರಿತನ ತೋರಿದ್ದು, ಮತದಾರರ ಪಟ್ಟಿಯ ನೋಂದಣಿಯ ವಿಶೇಷ ಅಭಿಯಾನದಡಿಯಲ್ಲಿ ಕರ್ತವ್ಯಕ್ಕೆ ಹಾಜರಾಗದೇ ಗೈರು ಹಾಜರಾಗಿ ದೂರವಾಣಿಯಲ್ಲಿ ಸುಳ್ಳು ಸಬೂಬುಗಳನ್ನು ಹೇಳಿದ್ದು, ಮತಗಟ್ಟೆ ಮಟ್ಟದ ಅಧಿಕಾರಿಯ ಕೆಲಸ ನಿರ್ವಹಿಸದೇ ಬೇಜವಾಬ್ದಾರಿಯಿಂದ ವರ್ತಿಸಿ ಕರ್ತವ್ಯಲೋಪ ಎಸಗಿದ್ದು ಮೇಲ್ನೋಟಕ್ಕೆ ಕಂಡುಬಂದಿರುವುದರಿಂದ ಇವರ ಮೇಲೆ ಪ್ರಜಾ ಪ್ರತಿನಿಧಿ ಕಾಯ್ದೆ 1950ರನ್ವಯ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.
ಯೋಗೇಶ್ ಗೌಡ ಹತ್ಯೆ ಪ್ರಕರಣ: ಧಾರವಾಡ ಜಿಲ್ಲೆಗೆ ಬರಲು ವಿನಯ್‌ಗೆ 3 ಗಂಟೆ ಅವಕಾಶ
ಸಂಬಂಧಿಸಿದ ಸಕ್ಷಮ ಪ್ರಾಧಿಕಾರದಿಂದ ಇಲಾಖಾ ವಿಚಾರಣೆ ಬಾಕಿ ಇರಿಸಿ, ಸರಕಾರಿ ಸೇವೆಯಿಂದ ತಕ್ಷಣಕ್ಕೆ ಜಾರಿಗೆ ಬರುವಂತೆ ಅಮಾನತು ಮಾಡಲಾಗಿದೆ. ಸದರಿ ನೌಕರರು ಅಮಾನತ್ತು ಅವಧಿಯಲ್ಲಿ ಕಾರ್ಯಾಲಯದ ಮುಖ್ಯಸ್ಥರ ಅನುಮತಿಯಿಲ್ಲದೇ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಮತ್ತು ಸದರಿ ನೌಕರನು ಅಮಾನತಿನ ಅವಧಿಯಲ್ಲಿ ಕರ್ನಾಟಕ ನಾಗರೀಕ ನಿಯಮಾವಳಗಳು. 1958ರ ನಿಯಮ 98ರ ಪ್ರಕಾರ ಜೀವನಾಂಶ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಆದೇಶದಲ್ಲಿ ತಿಳಿಸಿದ್ದಾರೆ.