ಬಸ್‌ಗಳಲ್ಲಿ ಪ್ರಯಾಣಿಕರಿಗೆ ನೀಡುವ ಟಿಕೆಟ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮುಂದಾಗಿದೆ.
ಹುಬ್ಬಳ್ಳಿ (ಏ.17) : ಬಸ್‌ಗಳಲ್ಲಿ ಪ್ರಯಾಣಿಕರಿಗೆ ನೀಡುವ ಟಿಕೆಟ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮತದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮುಂದಾಗಿದೆ.
ಕರ್ನಾಟಕ ವಿಧಾನಸಭೆಗೆ ಚುನಾವಣೆ(Karnataka assembly election) ನಡೆಯುತ್ತಿದ್ದು, ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಕಾರ್ಯೋನ್ಮುಖವಾಗಿವೆ. ಅದೇ ರೀತಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಸಹ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಬಸ್‌ನಲ್ಲಿ ಪ್ರಯಾಣಿಕರಿಗೆ ನೀಡುವ ಟಿಕೆಟ್‌ಗಳಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಮತದಾನ ಜಾಗೃತಿ ಸಂದೇಶ ಸಾರುವ ಸಂದೇಶಗಳನ್ನು ಸಾರಲಾಗುತ್ತಿದೆ.
ಉಡುಪಿ: ಶತಾಯುಷಿ ಮತದಾರರ ಮನೆ ಬಾಗಿಲಿಗೆ ತೆರಳಿ ಮತದಾನಕ್ಕೆ ಆಹ್ವಾನಿಸಿದ ಅಧಿಕಾರಿ
ಬಸ್‌ಗಳಲ್ಲಿ ಪ್ರಯಾಣಿಕರಿಗೆ ನೀಡುವ ಟಿಕೆಟ್‌ನ ಕೆಳಭಾಗದಲ್ಲಿ ‘2023ರ ಮೇ 10ರಂದು ತಪ್ಪದೇ ಮತದಾನ ಮಾಡಿರಿ’ ಎಂಬುದಾಗಿ ಮುದ್ರಿಸಲಾಗುತ್ತಿದೆ. ಸಂಸ್ಥೆಯ ಟ್ವೀಟರ್, ಇನ್‌ಸ್ಟಾಟಾಗ್ರಾಂ ಹಾಗೂ ಫೇಸ್‌ಬುಕ್ ಪೇಜ್‌ನಲ್ಲಿ ಮತದಾನ ನಮ್ಮೆಲ್ಲರ ಹಕ್ಕು ಮತ್ತು ಕರ್ತವ್ಯ. ‘ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಲು ಮೇ 10ರಂದು ತಪ್ಪದೇ ಮತದಾನ ಮಾಡಿರಿ’ ಮೇ 10ರಂದು ನಮ್ಮ ನಡಿಗೆ-ಮತಗಟ್ಟೆಯ ಕಡೆಗೆ ಸೇರಿದಂತೆ ಮುಂತಾದ ಸಂದೇಶವಿರುವ ಪೋಸ್ಟ್‌ಗಳನ್ನು ಹಾಕಲಾಗುತ್ತಿದೆ. ಈ ಮೂಲಕ ಸಾರ್ವಜನಿಕರಲ್ಲಿ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ. ಸಂಸ್ಥೆಯ ಈ ಕ್ರಮಕ್ಕೆ ಸಾರ್ವಜನಿಕ ವಲಯದಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಸಂಸ್ಥೆಯ ಬಸ್‌ಗಳಲ್ಲಿ ನಿತ್ಯ ಲಕ್ಷಾಂತರ ಜನರು ಪ್ರಯಾಣ ಮಾಡುತ್ತಾರೆ. ಸಾವಿರಾರು ಮಂದಿ ಸಂಸ್ಥೆಯ ಟ್ವೀಟರ್, ಇನ್‌ಸ್ಟಾಗ್ರಾಂ ಹಾಗೂ ಫೇಸ್‌ಬುಕ್ ಫಾಲೋವರ್ಸ್ ಇದ್ದಾರೆ. ಅವರಲ್ಲಿ ಬಹಳಷ್ಟುಮಂದಿ 18 ವರ್ಷಕ್ಕಿಂತ ಹೆಚ್ಚಿನ ವಯಸ್ಸಿನವರಾಗಿದ್ದು ಮತದಾನದ ಹಕ್ಕು ಹೊಂದಿದ್ದಾರೆ. ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಏಕಕಾಲಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರನ್ನು ತಲುಪಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ವಾಕರಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ಎಸ್. ತಿಳಿಸಿದ್ದಾರೆ.
ಕೊಡಗಿನಲ್ಲಿ ಚಿತ್ರ ಬಿಡಿಸಿ ಮತದಾನ ಜಾಗೃತಿ ಮೂಡಿಸಿದ ವಿದ್ಯಾರ್ಥಿಗಳು, ವಯಸ್ಕರು
ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಿದ್ದು, ಏಪ್ರಿಲ್ 13ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ನಾಮಪತ್ರ ಹಿಂಪಡೆಯಲು ಏಪ್ರಿಲ್ 24 ಕಡೆಯ ದಿನಾಂಕ.