ಬೆಂಗಳೂರು: ಯುವ ಮತದಾರರಿಗೆ ಮತ ಚಲಾಯಿಸುವ ಬಗ್ಗೆ ಅರಿವು ಕಾರ್ಯಕ್ರಮ

Published : May 04, 2023, 02:30 AM IST
ಬೆಂಗಳೂರು: ಯುವ ಮತದಾರರಿಗೆ ಮತ ಚಲಾಯಿಸುವ ಬಗ್ಗೆ ಅರಿವು ಕಾರ್ಯಕ್ರಮ

ಸಾರಾಂಶ

ಪ್ರಪ್ರಥಮ ಬಾರಿಗೆ ಮತ ಚಲಾಯಿಸುವ ಯುವ ಮತದಾರರಿಗೆ ಮಾದರಿ ವಿದ್ಯುನ್ಮಾನ ಮತಯಂತ್ರಗಳನ್ನು ಉಪಯೋಗಿಸಿ ಮತದಾನ ಮಾಡುವ ಬಗ್ಗೆ ಪ್ರಾತ್ಯಕ್ಷಿತೆ ನೀಡಲಾಯಿತು. 

ಬೆಂಗಳೂರು(ಮೇ.04):  ದಕ್ಷಿಣ ವಲಯದ ಬಸವನಗುಡಿ ಕ್ಷೇತ್ರದ ಗವಿಪುರಂನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ, ಪ್ರಪ್ರಥಮ ಬಾರಿಗೆ ಮತ ಚಲಾಯಿಸುವ ಯುವ ಮತದಾರರಿಗೆ ಮಾದರಿ ವಿದ್ಯುನ್ಮಾನ ಮತಯಂತ್ರಗಳನ್ನು ಉಪಯೋಗಿಸಿ ಮತದಾನ ಮಾಡುವ ಬಗ್ಗೆ ಪ್ರಾತ್ಯಕ್ಷಿತೆ ನೀಡಲಾಯಿತು.

ಈ ವೇಳೆ ದಕ್ಷಿಣ ವಲಯದ ಉಪ ಆಯುಕ್ತರು, ಶ್ರೀಮತಿ.ಆರ್.ಲಕ್ಷ್ಮೀದೇವಿ ಮಾತನಾಡಿ, ಎಲ್ಲಾ ವಿದ್ಯಾರ್ಥಿಗಳಿಗೂ ಕಡ್ಡಾಯವಾಗಿ ಮತದಾನ ಮಾಡುವ ಬಗ್ಗೆ ಮತದಾನದ ಮಹತ್ವವನ್ನು ತಿಳಿಸಿ ಚುನಾವಣಾ ಅಕ್ರಮಗಳ ಬಗ್ಗೆ C-VIGIL ಅಪ್ಲಿಕೇಷನ್‌ನಲ್ಲಿ ದೂರು ದಾಖಲಿಸಲು ತಿಳಿಸಿದರು.

ಮೇ 10 ರಂದು ನಂದಿ ಗಿರಿಧಾಮಕ್ಕೆ ಪ್ರವೇಶ ನಿಷೇಧ

ಕಾರ್ಯಕ್ರಮದಲ್ಲಿ ತರಬೇತುದಾರರಾದ ವೆಂಕಟೇಶ್.ಪಿ.ಆರ್, ಸಹ ಕಂದಾಯ ಅಧಿಕಾರಿಯಾದ ಮಾಲತಿ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಕಾಲೇಜಿನ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

PREV
Read more Articles on
click me!

Recommended Stories

ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!
ಚಿಕ್ಕಬಳ್ಳಾಪುರದಲ್ಲಿ ಮಾನವ ಹಕ್ಕುಗಳ ದಿನಾಚರಣೆ: ಸಾವಿರಾರು ಜನರಲ್ಲಿ ನಾಯಕತ್ವ ಬಿತ್ತಿದ ನವಶಕ್ತಿ ನಾಟಕ