ನಮ್ಮದು ಯತ್ನಾಳ್ ಬಣವಲ್ಲ. ಒಂದೇ ಬಣ. ಅದು ಬಿಜೆಪಿ ಬಣ. ನಾವು ಹೋರಾಟ ಮಾಡಿದ ಬಳಿಕ ಎಲ್ಲರೂ ಬಂದರು. ಜೆಪಿಸಿ ಸಮಿತಿ ಅಧ್ಯಕ್ಷರು ಕೂಡ ಬಂದರು. ಮಾಧ್ಯಮಗಳಲ್ಲಿ ಪ್ರತ್ಯೇಕ ಬಣ ಎಂದು ಬಿಂಬಿಸಲಾಗುತ್ತಿದೆ. ಆದರೆ, ನಮ್ಮದು ಪ್ರತ್ಯೇಕ ಬಣವಲ್ಲ. ಮುಂದಿನ ದಿನಗಳಲ್ಲಿ ನಾವು ಬಿಜೆಪಿ ಕಚೇರಿಗಳಲ್ಲೂ ಸಭೆ ಮಾಡುತ್ತೇವೆ ಎಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ
ಹೊಸಪೇಟೆ(ಡಿ.29): ಬಿಜೆಪಿ ಭಿನ್ನ ನಾಯಕರು 2ನೇ ಹಂತದ ವಕ್ಫ್ ಹೋರಾಟವನ್ನು ಜನವರಿಯಿಂದ ಆರಂಭಿಸಲು ನಿರ್ಧರಿಸಿದ್ದಾರೆ. ಬಳ್ಳಾರಿ ಜಿಲ್ಲೆಯ ಕಂಪ್ಲಿಯಲ್ಲಿ ಜ.4ರಂದು ಸಮಾವೇಶ ಹಾಗೂ ಜ.6ರಂದು ಪ್ರತಿಭಟನೆ ನಡೆಸಲು ತೀರ್ಮಾನಿಸಿದ್ದಾರೆ. ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಭಿನ್ನರ ತಂಡದ ಸದಸ್ಯ, ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ ಕುಮಾರ್ ಬಂಗಾರಪ್ಪ ಈ ವಿಷಯ ತಿಳಿಸಿದರು.
ಕಂಪ್ಲಿಯಲ್ಲಿ ಜನವರಿ 4ರಂದು ವಕ್ಫ್ ಹೋರಾಟ ಸಮಾವೇಶ ನಡೆಸಲಾಗುವುದು. ಹೈಕಮಾಂಡ್ ನಮಗೆ ಯಾವುದೇ ರೀತಿ ಕಡಿವಾಣ ಹಾಕಿಲ್ಲ. ಹಾಕಿದ್ದರೆ ನಾವು ಮಾಧ್ಯಮದ ಎದುರು ಬಂದು ಎರಡನೇ ಹಂತದ ಹೋರಾಟಕ್ಕಾಗಿ ಹೇಳಿಕೆ ನೀಡುತ್ತಿರಲಿಲ್ಲ ಎಂದು ಕುಮಾರ್ ಬಂಗಾರಪ್ಪ ಹೇಳಿದರು.
undefined
ಇನ್ನು ಜಾರಕಿಹೊಳಿ ವೈಲೆಂಟ್, ನಾನು ಸೈಲೆಂಟ್: ಯತ್ನಾಳ್
ಎರಡನೇ ಹಂತದ ವಕ್ಫ್ ಹೋರಾಟಕ್ಕಾಗಿ ಬಸನಗೌಡ ಪಾಟೀಲ್ ಯತ್ನಾಳ್, ಪ್ರತಾಪ್ ಸಿಂಹ, ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ ಸೇರಿದಂತೆ ಅನೇಕ ನಾಯಕರು ಪ್ರವಾಸ ಮಾಡುತ್ತಿದ್ದೇವೆ. ಪ್ರಧಾನಿ ಮೋದಿ ಅವರು ವಕ್ಫ್ ಕಾನೂನು ತಿದ್ದುಪಡಿಗೆ ಮುಂದಾಗಿದ್ದಾರೆ. ಇದಕ್ಕಾಗಿ ಜಂಟಿ ಸದನ ಸಮಿತಿ ರಚನೆ ಮಾಡಿದ್ದು, ಇದರ ಅಧ್ಯಕ್ಷರು ಕೂಡ ನಮ್ಮ ಕಾರ್ಯಕ್ಕೆ ಬೆನ್ನು ತಟ್ಟಿದ್ದಾರೆ ಎಂದರು.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿ, ವಕ್ಫ್ ಅಕ್ರಮ ಆಸ್ತಿ ವಿರುದ್ಧ ಎರಡನೇ ಹಂತದ ಹೋರಾಟ ಮಾಡುತ್ತೇವೆ. ಕಂಪ್ಲಿಯಲ್ಲಿ ಜನವರಿ 4ರಂದು ಸಮಾವೇಶ ಮಾಡುತ್ತೇವೆ. 6ರಂದು ಪ್ರತಿಭಟನೆ ನಡೆಸುತ್ತೇವೆ ಎಂದರು.
ವಕ್ಫ್ ವಿಚಾರದಲ್ಲಿ ಹಿಂದೂ-ಮುಸ್ಲಿಂ ಸಮುದಾಯದವರಿಗೆ ಅನ್ಯಾಯವಾಗಿದೆ. ವಕ್ಫ್ ಕಾಯ್ದೆ ಸಂಪೂರ್ಣವಾಗಿ ತೊಲಗಬೇಕು ಎಂದು ನಾವು ಪಕ್ಷಾತೀತವಾಗಿ ಹೋರಾಟ ಮಾಡುತ್ತೇವೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಬರಲಿ, ಮಾಜಿ ಸಚಿವ ಆನಂದ್ ಸಿಂಗ್ ಕೂಡ ಬರಬಹುದು, ಕಾಂಗ್ರೆಸ್ ನಾಯಕರು ಕೂಡ ಬರಲಿ ಎಂದರು.
ಪಕ್ಷ ವಿರೋಧಿ ಕೆಲಸ ಮಾಡುತ್ತಿರುವ ವಿಜಯೇಂದ್ರಗೆ ನೋಟಿಸ್ ನೀಡಿ: ರಮೇಶ್ ಜಾರಕಿಹೊಳಿ
‘ನಮ್ಮದು ಯತ್ನಾಳ್ ಬಣವಲ್ಲ. ಒಂದೇ ಬಣ. ಅದು ಬಿಜೆಪಿ ಬಣ. ನಾವು ಹೋರಾಟ ಮಾಡಿದ ಬಳಿಕ ಎಲ್ಲರೂ ಬಂದರು. ಜೆಪಿಸಿ ಸಮಿತಿ ಅಧ್ಯಕ್ಷರು ಕೂಡ ಬಂದರು. ಮಾಧ್ಯಮಗಳಲ್ಲಿ ಪ್ರತ್ಯೇಕ ಬಣ ಎಂದು ಬಿಂಬಿಸಲಾಗುತ್ತಿದೆ. ಆದರೆ, ನಮ್ಮದು ಪ್ರತ್ಯೇಕ ಬಣವಲ್ಲ. ಮುಂದಿನ ದಿನಗಳಲ್ಲಿ ನಾವು ಬಿಜೆಪಿ ಕಚೇರಿಗಳಲ್ಲೂ ಸಭೆ ಮಾಡುತ್ತೇವೆ ಎಂದರು.
ನಮ್ಮದು ಯತ್ನಾಳ್ ಬಣವಲ್ಲ, ಬಿಜೆಪಿ ಬಣ
ನಮ್ಮದು ಯತ್ನಾಳ್ ಬಣವಲ್ಲ. ಒಂದೇ ಬಣ. ಅದು ಬಿಜೆಪಿ ಬಣ. ಮುಂದಿನ ದಿನಗಳಲ್ಲಿ ನಾವು ಬಿಜೆಪಿ ಕಚೇರಿಗಳಲ್ಲೂ ಸಭೆ ಮಾಡುತ್ತೇವೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.