ಕರಾವಳಿ ಸೇರಿ ಕೊಡಗಿನಲ್ಲಿ ಮತ್ತೆ ಮಳೆ ಅಬ್ಬರ ಹೆಚ್ಚಾಗಿದ್ದು, ಕಾವೇರಿ ನದಿಯಲ್ಲಿ ನೀರಿನ ಪ್ರವಾಹವೂ ಹೆಚ್ಚಾಗಿದೆ. ಹಾರಂಗಿ ಜಲಾಶಯದಿಂದ 15000 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದೆ. ನದಿಯಲ್ಲಿ ನೀರಿನ ಪ್ರವಾಹ ಹೆಚ್ಚಾಗಿದ್ದು, ತಗ್ಗು ಪ್ರದೇಶಗಳಲ್ಲಿ ಮತ್ತೊಮ್ಮೆ ಪ್ರವಾಹ ಭೀತಿ ಎದುರಾಗಿದೆ.
ಮಡಿಕೇರಿ(ಸೆ.05): ಕೊಡಗು ಜಿಲ್ಲೆಯಾದ್ಯಂತ ಹೆಚ್ಚು ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿದೆ. ಕರಾವಳಿ ಸೇರಿದಂತೆ, ಕೊಡಗಿನಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಪ್ರಮಾಣ ಹೆಚ್ಚಾಗಿದ್ದು, ಮತ್ತೆ ಪ್ರವಾಹ ಭೀತಿ ಎದುರಾಗಿದೆ.
ದಿನಾಂಕ:04-09-2019 ರ ರಾತ್ರಿಯಿಂದ ಹಾರಂಗಿ ಜಲಾಶಯದಿಂದ 15000 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದೆ. ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾದಲ್ಲಿ ಇನ್ನೂ ಹೆಚ್ಚು ನೀರನ್ನು ಜಲಾಶಯದಿಂದ ಹೊರ ಬಿಡುವ ಸಾಧ್ಯತೆ ಇರಲಿದೆ.
ಕೊಡಗಿನಲ್ಲಿ ಭಾರೀ ಮಳೆ ಮುನ್ಸೂಚನೆ: ರೆಡ್ ಅಲರ್ಟ್ ಘೋಷಣೆ, ಶಾಲಾ-ಕಾಲೇಜು ಬಂದ್
ಅಲ್ಲದೆ ಕಾವೇರಿ ಜಲಾನಯನ ಪ್ರದೇಶಗಳಲ್ಲೂ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಕಾವೇರಿ ಹೊಳೆಯಲ್ಲೂ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಕುಶಾಲನಗರ ಸೇರಿದಂತೆ ಕಾವೇರಿ ನದಿ ತಟದಲ್ಲಿರುವ ಜನರು ಜಾಗರೂಕತೆಯಿಂದ ಇರಲು ಜಿಲ್ಲಾಡಳಿತ ಸೂಚಿಸಿದೆ.
ದಕ್ಷಿಣ ಕನ್ನಡದಲ್ಲಿ ಮತ್ತೆ ಮಳೆ ಅಬ್ಬರ : ಉಕ್ಕಿ ಹರಿಯುತ್ತಿರುವ ನದಿಗಳು