ಕೊಡಗಿನಲ್ಲಿ ಕಾವೇರಿ ನದಿಯಲ್ಲಿ ಹೆಚ್ಚಾದ ಹರಿವು

By Kannadaprabha News  |  First Published Jun 9, 2020, 10:25 AM IST

ಕುಶಾಲನಗರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿಯಲ್ಲಿ ಕಳೆದ ಕೆಲವು ದಿನಗಳಿಂದ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಯಲ್ಲಿ ನೀರು ಹರಿಯಲು ಕಾರಣವಾಗಿದೆ. ಆದರೆ ಕುಶಾಲನಗರ ವ್ಯಾಪ್ತಿಯಲ್ಲಿ ಮಾತ್ರ ಮಳೆ ಪ್ರಮಾಣ ಕ್ಷೀಣಿಸಿದೆ.


ಕುಶಾಲನಗರ(ಜೂ.09): ಕುಶಾಲನಗರ ವ್ಯಾಪ್ತಿಯಲ್ಲಿ ಹರಿಯುತ್ತಿರುವ ಕಾವೇರಿಯಲ್ಲಿ ಕಳೆದ ಕೆಲವು ದಿನಗಳಿಂದ ನೀರಿನ ಹರಿವಿನ ಪ್ರಮಾಣ ಹೆಚ್ಚಳವಾಗಿದೆ. ಜಲಾನಯನ ಪ್ರದೇಶಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನದಿಯಲ್ಲಿ ನೀರು ಹರಿಯಲು ಕಾರಣವಾಗಿದೆ. ಆದರೆ ಕುಶಾಲನಗರ ವ್ಯಾಪ್ತಿಯಲ್ಲಿ ಮಾತ್ರ ಮಳೆ ಪ್ರಮಾಣ ಕ್ಷೀಣಿಸಿದೆ.

ಕಳೆದ ಮೂರು ವಾರಗಳಿಂದ ಕುಶಾಲನಗರ ಪಟ್ಟಣ ವ್ಯಾಪ್ತಿಯ ಕಾವೇರಿ ನದಿಯಲ್ಲಿ ಪ್ರವಾಹ ನಿಯಂತ್ರಣದ ಹಿನ್ನೆಲೆಯಲ್ಲಿ ನಡೆಯುತ್ತಿರುವ ನದಿ ನಿರ್ವಹಣಾ ಕಾಮಗಾರಿ ಇದರಿಂದ ಸ್ಥಗಿತಗೊಂಡಿದೆ.

Latest Videos

undefined

ಮಾಲ್, ದೇವಸ್ಥಾನಗಳು ಓಪನ್: ಮಂಗಳೂರಲ್ಲಿ ಹೀಗಿತ್ತು ಮೊದಲ ದಿನ

ಕುಶಾಲನಗರ ಕೊಪ್ಪ ಕಾವೇರಿ ನದಿ ಸೇತುವೆ ಕೆಳಭಾಗದಲ್ಲಿ ತುಂಬಿದ್ದ ಸಾವಿರಾರು ಲೋಡ್‌ಗಳಷ್ಟುಮಣ್ಣು, ಗಿಡಗಂಟಿ, ಜೆಂಡು ತೆರವುಗೊಳಿಸಿದ ಹಿನ್ನೆಲೆಯಲ್ಲಿ ನೀರು ಸರಾಗವಾಗಿ ಹರಿಯುತ್ತಿದ್ದು ನೋಡುಗರಿಗೆ ಆಕರ್ಷಣೀಯ ಕೇಂದ್ರವಾಗಿ ಪರಿವರ್ತನೆಗೊಂಡಿದೆ.

click me!