ಆಲಮಟ್ಟಿ ಜಲಾಶಯದಲ್ಲಿ ಸಂಗ್ರಹಗೊಂಡ ನೀರಿನಿಂದ ಅಗತ್ಯವಿರುವ ಕುಡಿಯುವ ನೀರಿಗಾಗಿ ಕಾಲುವೆ ಮೂಲಕ ಕೆರೆಗಳನ್ನು ತುಂಬಿಸಲಾಗುವುದು. ಇದರಿಂದಾಗಿ ಜಾನುವಾರುಗಳಿಗೆ ತುಂಬಾ ಅನುಕೂಲವಾಗುತ್ತದೆ. ಕೆರೆಗಳಲ್ಲಿ ನೀರು ಬರುವದರಿಂದಾಗಿ ಅಂತರ್ಜಲ ಹೆಚ್ಚಾಗಿ ಬಾವಿ, ಕೊಳವೆಬಾವಿಯಲ್ಲಿ ನೀರು ಹೆಚ್ಚು ಬರುತ್ತದೆ. ಜನರಿಗೂ ಅನುಕೂಲವಾಗುತ್ತದೆ: ಸಚಿವ ಶಿವಾನಂದ ಪಾಟೀಲ
ಬಸವನಬಾಗೇವಾಡಿ(ಜು.22): ಮುಂಗಾರು ಮಳೆಯ ಕೈಕೊಟ್ಟ ಹಿನ್ನೆಲೆಯಲ್ಲಿ ಜಿಲ್ಲೆಯ ಜನ-ಜಾನುವಾರುಗಳ ಕುಡಿಯುವ ನೀರಿನ ಉದ್ದೇಶಕ್ಕಾಗಿ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳಿಗೆ 2.50 ಟಿಎಂಸಿ ನೀರನ್ನು ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹಣೆಯಲ್ಲಿ ಬಳಸಿಕೊಳ್ಳಲು ಅನುಮತಿಯನ್ನು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರ ಮೂಲಕ ಸರ್ಕಾರವು ಕ್ರಮಕೈಗೊಂಡಿದೆ. ಈ ಮೂಲಕ ಜಿಲ್ಲೆಯ ಕೆರೆಗಳಿಗೆ ಕಾಲುವೆ ಮೂಲಕ ನೀರು ತುಂಬಿಸಲಾಗುವುದು ಎಂದು ಸಕ್ಕರೆ, ಕೃಷಿ ಉತ್ಪನ್ನ ಮಾರುಕಟ್ಟೆ ಹಾಗೂ ಜವಳಿ ಖಾತೆಯ ಸಚಿವ ಶಿವಾನಂದ ಪಾಟೀಲ ಹೇಳಿದರು.
ಬೆಂಗಳೂರಿನಿಂದ ದೂರವಾಣಿ ಮೂಲಕ ಶುಕ್ರವಾರ ಪತ್ರಿಕೆಯೊಂದಿಗೆ ಮಾತನಾಡಿದ ಅವರು, ಜಿಲ್ಲೆಯ ಕೆಲ ತಾಲೂಕುಗಳಲ್ಲಿ ಮಳೆ ಅಭಾವದಿಂದಾಗಿ ನೀರಿನ ಕೊರತೆ ಆಗಿದೆ. ಇದರಿಂದಾಗಿ ಜನರಿಗೆ, ಜಾನುವಾರುಗಳಿಗೆ ನೀರು ಇಲ್ಲದಂತಾಗಿದೆ. ಕೆಲವೆಡೆ ಟ್ಯಾಂಕರ್ ಮೂಲಕ ನೀರು ಪೂರೈಸಲಾಗುತ್ತಿದೆ. ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ ಇದುವರೆಗೂ ಎಲ್ಲಿಯೂ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡುತ್ತಿಲ್ಲ. ಜಿಲ್ಲೆಯಲ್ಲಿರುವ ಆಲಮಟ್ಟಿ ಜಲಾಶಯಕ್ಕೆ ಮಹಾರಾಷ್ಟ್ರದಲ್ಲಿ ಆಗುತ್ತಿರುವ ಮಳೆಯಿಂದಾಗಿ ಜುಲೈ 31ಕ್ಕೆ ಆಲಮಟ್ಟಿ ಜಲಾಶಯದ ಮಟ್ಟವು 517.41 ಮೀ. ತಲುಪಿ ಒಟ್ಟು ಸಂಗ್ರಹಣ 89.711 ಟಿಎಂಸಿ ಹಾಗೂ ಜೀವ ಜಲ 72.091 ಟಿಎಂಸಿ ಬಳಸಲು ಲಭ್ಯವಾಗುವ ಸಾಧ್ಯತೆ ಇದೆ ಎಂದು ಕೆಬಿಜೆಎನ್‌ಎಲ್ ಅಧೀಕ್ಷಕ ಅಭಿಯಂತರರು ವರದಿ ಸಲ್ಲಿಸಿದ್ದಾರೆ.
undefined
ಬರದ ನಾಡಲ್ಲಿ ಭರವಸೆ ಮೂಡಿಸಿದ ಜಿಟಿಜಿಟಿ ಮಳೆ: ಬಿತ್ತನೆಗೆ ಗ್ರೀನ್ ಸಿಗ್ನಲ್ ಕೊಟ್ಟ ಹವಾಮಾನ ಇಲಾಖೆ
ಆಲಮಟ್ಟಿ ಜಲಾಶಯದಲ್ಲಿ ಸಂಗ್ರಹಗೊಂಡ ನೀರಿನಿಂದ ಅಗತ್ಯವಿರುವ ಕುಡಿಯುವ ನೀರಿಗಾಗಿ ಕಾಲುವೆ ಮೂಲಕ ಕೆರೆಗಳನ್ನು ತುಂಬಿಸಲಾಗುವುದು. ಇದರಿಂದಾಗಿ ಜಾನುವಾರುಗಳಿಗೆ ತುಂಬಾ ಅನುಕೂಲವಾಗುತ್ತದೆ. ಕೆರೆಗಳಲ್ಲಿ ನೀರು ಬರುವದರಿಂದಾಗಿ ಅಂತರ್ಜಲ ಹೆಚ್ಚಾಗಿ ಬಾವಿ, ಕೊಳವೆಬಾವಿಯಲ್ಲಿ ನೀರು ಹೆಚ್ಚು ಬರುತ್ತದೆ. ಜನರಿಗೂ ಅನುಕೂಲವಾಗುತ್ತದೆ. ಬಹುಹಳ್ಳಿ ಕುಡಿಯುವ ಯೋಜನೆಯಡಿಯೂ ಗ್ರಾಮಗಳಿಗೆ ನೀರು ನಿರಂತರ ಪೂರೈಕೆ ಮಾಡಲು ಅನುಕೂಲವಾಗುತ್ತದೆ. ಆಲಮಟ್ಟಿ ಜಲಾಶಯದಿಂದ ಕುಡಿಯುವ ಉದ್ದೇಶಕ್ಕಾಗಿ ನದಿ, ಕಾಲುವೆಗಳಿಗೆ ಬಿಡುಗಡೆ ಮಾಡಿದ ನೀರನ್ನು ಯಾವುದೇ ಕಾರಣಕ್ಕೂ ಕೃಷಿಗೆ ಬಳಸುವಂತಿಲ್ಲ. ಈ ಕುರಿತು ಅಧಿಕಾರಿಗಳು ನಿಗಾವಹಿಸಲಿದ್ದಾರೆ ಎಂದರು