ಭಾರೀ ಮಳೆ: ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ

By Kannadaprabha News  |  First Published Jun 19, 2020, 12:51 PM IST

ಕೊಡಗು ಜಿಲ್ಲೆಯಲ್ಲಿ ಗುರುವಾರ ವಿವಿಧೆಡೆ ಉತ್ತಮ ಮಳೆಯಾಗಿದೆ. ಮಡಿಕೇರಿ ತಾಲೂಕಿನ ಭಾಗಮಂಡಲ ಹಾಗೂ ತಲಕಾವೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ ಸುರಿದಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟಏರಿಕೆಯಾಗಿದೆ.


ಮಡಿಕೇರಿ(ಜೂ.19): ಕೊಡಗು ಜಿಲ್ಲೆಯಲ್ಲಿ ಗುರುವಾರ ವಿವಿಧೆಡೆ ಉತ್ತಮ ಮಳೆಯಾಗಿದೆ. ಮಡಿಕೇರಿ ತಾಲೂಕಿನ ಭಾಗಮಂಡಲ ಹಾಗೂ ತಲಕಾವೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ ಸುರಿದಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟಏರಿಕೆಯಾಗಿದೆ.

ಜಿಲ್ಲೆಯಲ್ಲಿ ಕಳೆದ 4-5 ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಬುಧವಾರ ರಾತ್ರಿ ಚಾಮುಂಡೇಶ್ವರಿ ಬಡಾವಣೆ ನಿವಾಸಿ ಶ್ಯಾಮ್‌ ಸುಂದರ್‌ ಎಂಬುವರ ಮನೆಯ ಹಿಂದೆ ಗುಡ್ಡ ಕುಸಿಯುತ್ತಿರುವುದರಿಂದ ಅತೀ ಸೂಕ್ಷ್ಮ ಪ್ರದೇಶದಲ್ಲಿರುವ 5 ಕುಟುಂಬಗಳನ್ನು ಗಾಳಿಬೀಡು ಸಮೀಪದ ನವೋದಯ ಶಾಲೆಗೆ ಸ್ಥಳಾಂತರಿಸಲಾಯಿತು.

Latest Videos

undefined

ಭಾರೀ ಮಳೆ: ಮಡಿಕೇರಿಯಲ್ಲಿ 5 ಕುಟುಂಬಗಳ ಸ್ಥಳಾಂತರ

ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ 42.79 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.55 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗೆ 226.94 ಮಿ.ಮೀ ಮಳೆ ಸುರಿದಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 143.19 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲೂಕಿನಲ್ಲಿ 66.90 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ 37.68 ಮಿ.ಮೀ. ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ 23.80 ಮಿ.ಮೀ. ಮಳೆಯಾಗಿದೆ.

ಹಾರಂಗಿ ಜಲಾಶಯದ ನೀರಿನ ಮಟ್ಟ

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ2,859 ಅಡಿ, ನೀರಿನ ಮಟ್ಟ2834.18 ಅಡಿ, ಕಳೆದ ವರ್ಷ ಇದೇ ದಿನ 2805.76 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 15.20 ಮಿ.ಮೀ., ನೀರಿನ ಒಳಹರಿವು 554 ಕ್ಯುಸೆಕ್‌, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 145 ಕ್ಯುಸೆಕ್‌. ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್‌. ಕಳೆದ ವರ್ಷ ಇದೇ ದಿನ ನಾಲೆಗೆ 30 ಕ್ಯುಸೆಕ್‌.

#NewsIn100Seconds ಈ ಕ್ಷಣದ ಪ್ರಮುಖ ಹೆಡ್‌ಲೈನ್ಸ್
"

click me!