ಅಕಾಲಿಕ ಮಳೆ : ಅಂಗಡಿ ಮುಂಗಟ್ಟುಗಳಿಗೆ ನುಗ್ಗಿದ ನೀರು

Published : Jan 29, 2019, 11:24 AM IST
ಅಕಾಲಿಕ ಮಳೆ : ಅಂಗಡಿ ಮುಂಗಟ್ಟುಗಳಿಗೆ ನುಗ್ಗಿದ ನೀರು

ಸಾರಾಂಶ

ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮನಾ ಇಲಾಖೆ ಸೂಚಿಸಿದಂತೆ ಕೊಪ್ಪಳದಲ್ಲಿ ಅಕಾಲಿಕವಾಗಿ ಸುರಿದ ಮಳೆಗೆ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. 

ಕುಷ್ಟಗಿ: ಕೊಪ್ಪಳ ಜಿಲ್ಲೆ ಕುಷ್ಟಗಿ ಪಟ್ಟಣದಲ್ಲಿ ಭಾನುವಾರ ರಾತ್ರಿ ಸುಮಾರು ಒಂದು ಗಂಟೆಗಳ ಕಾಲ ಬಿದ್ದ ಅಕಾಲಿಕ ಮಳೆಯಿಂದ ಚರಂಡಿಗಳು ಭರ್ತಿಯಾಗಿ ಅಂಗಡಿಗಳಿಗೆ ನೀರು ನುಗ್ಗಿದ ಘಟನೆ ನಡೆದಿದೆ. 

ಇಲ್ಲಿಯ ಮಾರುತಿ ವೃತ್ತದ ಬಳಿ ಇರುವ ದೇಸಾಯಿ ಕಾಂಪ್ಲೆಕ್ಸ್ ಕೆಳ ಮಹಡಿಯ ಕೆಲವು ಅಂಗಡಿಗಳಿಗೆ ಚರಂಡಿ ನೀರು ನುಗ್ಗಿದ್ದರಿಂದ ಅಂಗಡಿಗಳಲ್ಲಿನ ಸಾಮಗ್ರಿಗಳು ಹಾಳಾಗಿವೆ. 

ಅಂಗಡಿಗಳಿಗೆ ನುಗ್ಗಿದ್ದ ಮಳೆ ನೀರಿನ ಮಾಹಿತಿ ತಿಳಿದು ಅಗ್ನಿಶಾಮಕ ದಳದ ಸಿಬ್ಬಂದಿ ಯಂತ್ರದ ಸಹಾಯದಿಂದ ನೀರು ಮೇಲೆತ್ತಿದ ಬಳಿಕ ಬೆಲೆ ಬಾಳುವ ವಸ್ತುಗಳನ್ನು ರಕ್ಷಿಸಿದ್ದಾರೆ. 

PREV
click me!

Recommended Stories

ತಾಳಿ ಕಟ್ಟುವ ಶುಭ ವೇಳೆ 'ಇವನು ನನ್ನ ಗಂಡ' ಎಂದ ಯುವತಿ; ಮಾಜಿ ಪ್ರೇಯಸಿ ರಾಕ್, ಮದುವೆ ಮನೇಲಿದ್ದವರು ಶಾಕ್!
ರೈತ, ಆಟೋ ಚಾಲಕರ ಹೆಣ್ಮಕ್ಕಳಿಗೆ ಗವಿಮಠದಿಂದ ಫ್ರೀ ಕಾಲೇಜು, ಹಾಸ್ಟೆಲ್‌