ಜಲ ಮಂಡಳಿ ಗುತ್ತಿಗೆ ಕಾರ್ಮಿಕರಿಗೆ ವೇತನ ಬಿಡುಗಡೆ ಮಾಡಬೇಕು ಹಾಗೂ ಗುತ್ತಿಗೆ ಕಾರ್ಮಿಕರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಜಲ ಮಂಡಳಿ ಗುತ್ತಿಗೆ ಕಾರ್ಮಿಕ ಮೊಬೈಲ್ ಟವರ್ ಏರಿ ಕುಳಿತು ಪ್ರಸಂಗ ನಗರದಲ್ಲಿ ಶುಕ್ರವಾರ ನಡೆದಿದೆ.
ಧಾರವಾಡ (ಫೆ.11) :ಜಲ ಮಂಡಳಿ ಗುತ್ತಿಗೆ ಕಾರ್ಮಿಕರಿಗೆ ವೇತನ ಬಿಡುಗಡೆ ಮಾಡಬೇಕು ಹಾಗೂ ಗುತ್ತಿಗೆ ಕಾರ್ಮಿಕರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಜಲ ಮಂಡಳಿ ಗುತ್ತಿಗೆ ಕಾರ್ಮಿಕ ಮೊಬೈಲ್ ಟವರ್ ಏರಿ ಕುಳಿತು ಪ್ರಸಂಗ ನಗರದಲ್ಲಿ ಶುಕ್ರವಾರ ನಡೆದಿದೆ.
ಜ್ಯುಬಲಿ ವೃತ್ತದ(Jubilee circle) ಬಳಿ ಇರುವ ಮೊಬೈಲ್ ಟವರ್ ಏರಿ ಕುಳಿತ ಕಾರ್ಮಿಕ ಒಂದೆಡೆಯಾದರೆ, ಇನ್ನೊಂದೆಡೆ ಗುತ್ತಿಗೆ ಕಾರ್ಮಿಕರು ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರ ಗಂಭೀರವಾಗಿ ಪರಿಗಣಿಸಿ ನಮ್ಮನ್ನು ಕೆಲಸಕ್ಕೆ ಮರಳಿ ಸೇರಿಸಿಕೊಳ್ಳಬೇಕು. ಇಲ್ಲವೇ ಮುಂದಿನ ದಿನಗಳಲ್ಲಿ ಇನ್ನಷ್ಟುಉಗ್ರ ಹೋರಾಟ ಹಾಗೂ ಅಸಹಕಾರ ಚಳವಳಿ ನಡೆಸುವುದಾಗಿ ಜಲ ಮಂಡಳಿ ಗುತ್ತಿಗೆ ಕಾರ್ಮಿಕರು ಎಚ್ಚರಿಕೆ ನೀಡಿದರು.
ನಂಗೆ ಹೆಂಡ್ತಿ ಬೇಕು : ಪತ್ನಿಗಾಗಿ ಟವರ್ ಏರಿದ ಪತಿ!
ಮೊಬೈಲ್ ಟವರ್ ಏರಿದ ಕಾರ್ಮಿಕ ಕೆಲಕಾಲ ಆತಂಕ ಸೃಷ್ಟಿ ಮಾಡಿದ. ವೇತನ ಬಿಡುಗಡೆ ಮಾಡುವವರಿಗೆ ಇಳಿಯುವುದಿಲ್ಲ ಎಂದು ಟವರ್ನ ಕೊನೆಗೆ ಹತ್ತಿ ಕುಳಿತಿದ್ದ ಕಾರ್ಮಿಕ. ಹಿಂದಿನಿಂದಲೂ ವೇತನ ಸರಿಯಾಗಿ ಸಿಗುತ್ತಿಲ್ಲ. ಕೊಡುವ ವೇತನ ಕಡಿಮೆ ಇನ್ನೊಂದೆಡೆ ಸರಿಯಾದ ಸಮಯಕ್ಕೆ ಬರುವುದಿಲ್ಲ. ಇದರಿಂದ ಕುಟುಂಬ ನಿರ್ವಹಣೆಗೆ ತೊಂದರೆಯಾಗಿದೆ ಎಂದು ಪ್ರತಿಭಟನೆ ನಡೆಸಿದರು.
ಬಜೆಟ್‌ನಲ್ಲಿ ಕಾರ್ಮಿಕರ ಬೇಡಿಕೆಗೆ ಆದ್ಯತೆ ನೀಡಿ
ಹೊಸಪೇಟೆ : ರಾಜ್ಯದ ವಿವಿಧ ಕೈಗಾರಿಕೆಗಳಲ್ಲಿ ದುಡಿಯುತ್ತಿರುವ ಸಂಘಟಿತ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಕೆಗೆ ರಾಜ್ಯ ಬಜೆಟ್‌ನಲ್ಲಿ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿ, ಸಿಐಟಿಯು ಪದಾಧಿಕಾರಿಗಳು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಕಟ್ಟಡ ನಿರ್ಮಾಣ ಆಟೋ,ಟ್ಯಾಕ್ಸಿ, ಮನೆಗೆಲಸ, ಹಮಾಲಿ,ಬೀದಿ ಬದಿ ಹಾಗೂ ಉದ್ಯೋಗ ಖಾತ್ರಿಯಲ್ಲಿ ಹೆಚ್ಚಿನ ಜನರು ತೊಡಗಿಸಿಕೊಂಡಿದ್ದಾರೆ. ಗ್ರಾಪಂ ಮತ್ತು ನಗರ ಸ್ಥಳೀಯ ಸಂಸ್ಥೆಗಳು ಮತ್ತಿತರೆ ಇಲಾಖೆಗಳಲ್ಲಿ ಗುತ್ತಿಗೆ,ಹೊರಗುತ್ತಿಗೆ ಮತ್ತು ಅಂಗನವಾಡಿ, ಬಿಸಿಯೂಟ,ಆಶಾ ಕಾರ್ಯಕರ್ತೆಯರ ಅಭಿವೃದ್ಧಿಗೆ ಪೂರಕ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ರೈತರಿಂದ ಮತ್ತೆ 146 ಮೊಬೈಲ್ ಟವರ್‌ಗಳು ಧ್ವಂಸ!
ಕಾರ್ಮಿಕರಿಗೆ ಕನಿಷ್ಟವೇತನವನ್ನು .31 ಸಾವಿರ ನಿಗದಿಗೊಳಿಸಬೇಕು.29 ಕಾನೂನುಗಳನ್ನು 4 ಸಂಹಿತೆಗಳನ್ನು ರಾಜ್ಯ ಸರ್ಕಾರ ಜಾರಿಗೊಳಿಸಬಾರದು. ವಿದ್ಯುಚ್ಛಕ್ತಿ ಖಾಸಗೀಕರಣ ಕೈಬಿಡಬೇಕು. ವಿದ್ಯುತ್ ತಿದ್ದುಪಡಿ ಮಸೂದೆ 2020ನ್ನು ತಿರಸ್ಕರಿಸಬೇಕು. ಆಟೋ ಟ್ಯಾಕ್ಸಿ ಮುಂತಾದ ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಕಲ್ಯಾಣ ಮಂಡಳಿ ರಚಿಸಿ, ಹಮಾಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿಗ ಳು, ಟೈಲರ್ಸ್, ಮೆಕ್ಯಾನಿಕ್, ಮನೆಗೆಲಸ ಮಹಿಳೆಯರು ಸೇರಿ ವಿವಿಧ ವಿಭಾಗಗಳಿಗೆ ಈಗಾಗಲೇ ಕಾರ್ಮಿಕ ಇಲಾಖೆ ರೂಪಿಸಿರುವ ಅಸಂಘಟಿತ ಕಾರ್ಮಿಕರ ಭವಿಷ್ಯ ನಿಧಿ ಕರಡು ಅಧಿವೇಶನದಲ್ಲಿ ಅಂಗೀಕರಿಸಬೇಕು. ಅದಕ್ಕೆ ಅಗತ್ಯವಿರುವ ಸಸ್ ಸಂಗ್ರಹಕ್ಕೆ ಸರ್ಕಾರ ಮುಂದಾಗಬೇಕು. ಮಹಿಳೆಯರನ್ನು ರಾತ್ರಿ ಪಾಳಿಯಲ್ಲಿ ಮತ್ತು ಅಪಾಯಕಾರಿ ಕೆಲಸಗಳಲ್ಲೂ ದುಡಿಸಿಕೊಳ್ಳುವುದನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿದರು.