ಮೇಕೆದಾಟು ಯೋಜನೆಯಿಂದ ಹಲವು ಜಿಲ್ಲೆಗೆ ನೀರು: ಡಿ.ಕೆ.ಶಿವಕುಮಾರ್‌

By Kannadaprabha News  |  First Published Jun 19, 2023, 10:22 PM IST

ರಾಜ್ಯದ ಮಹತ್ವಕಾಂಕ್ಷಿಯ ಮೇಕೆದಾಟು ಅಣೆಕಟ್ಟು ನಿರ್ಮಾಣ ಬೃಹತ್‌ ನೀರಾವರಿ ಯೋಜನೆ ಅನುಷ್ಠಾನಗೊಂಡರೆ 54 ಟಿಎಂಸಿ ನೀರು ಸಂಗ್ರಹವಾಗಿ ರಾಜ್ಯದ ಹಲವಾರು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. 


ಶಿರಾ (ಜೂ.19): ರಾಜ್ಯದ ಮಹತ್ವಕಾಂಕ್ಷಿಯ ಮೇಕೆದಾಟು ಅಣೆಕಟ್ಟು ನಿರ್ಮಾಣ ಬೃಹತ್‌ ನೀರಾವರಿ ಯೋಜನೆ ಅನುಷ್ಠಾನಗೊಂಡರೆ 54 ಟಿಎಂಸಿ ನೀರು ಸಂಗ್ರಹವಾಗಿ ರಾಜ್ಯದ ಹಲವಾರು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು. ತಾಲೂಕಿನ ಪಟ್ಟನಾಯಕನಹಳ್ಳಿಯ ಸ್ಪಟಿಕಪುರಿ ಮಹಾಸಂಸ್ಥಾನ ಮಠಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶ್ರೀ ಓಂಕಾರೇಶ್ವರ ಸ್ವಾಮಿ ಮತ್ತು ಶ್ರೀ ದತ್ತಾತ್ರೇಯ ಸ್ವಾಮಿ ದರ್ಶನ ಪಡೆದು, ಪೀಠಾಧ್ಯಕ್ಷರಾದ ನಂಜಾವಧೂತ ಸ್ವಾಮೀಜಿಗಳ ಆರ್ಶೀವಾದ ಪಡೆದು ಮಾತನಾಡಿದರು. 

ಮೇಕೆದಾಟು ಯೋಜನೆಗೆ ಈ ಹಿಂದೆ ಕಾಂಗ್ರೆಸ್‌ ಪಕ್ಷ ಹೋರಾಟ ಮಾಡಿದ್ದರ ಪರಿಣಾಮ ಹಿಂದಿನ ಸರ್ಕಾರ ಮೇಕೆದಾಟು ಯೋಜನೆಗೆ 1 ಸಾವಿರ ಕೋಟಿ ರುಪಾಯಿ ಹಣ ಮೀಸಲಿಟ್ಟು, ಮತ್ತೆ ವಾಪಸ್‌ ಪಡೆದಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸಮಗ್ರ ಮಾಹಿತಿ ನೀಡುವಂತೆ ಸೂಚಿಸಿದ್ದು, ಅತಿ ಶೀಘ್ರದಲ್ಲಿ ಕೇಂದ್ರ ನೀರಾವರಿ ಸಚಿವರನ್ನು ಭೇಟಿ ಮಾಡಿ ಯೋಜನೆಯ ಅನುಕೂಲತೆ ಬಗ್ಗೆ ಮನವರಿಕೆ ಮಾಡಿಕೊಡಲಾಗುವುದು ಎಂದರು.

Latest Videos

undefined

ಡಿಕೆಶಿ ಜತೆ ಭಿನ್ನಾಭಿಪ್ರಾಯ ಇದ್ರೂ ವೈಯಕ್ತಿಕ ಸಂಬಂಧ ಚೆನ್ನಾಗಿದೆ: ಸಚಿವ ಎಂ.ಬಿ.ಪಾಟೀಲ್‌

ಸರ್ಕಾರ ಸಾವಿರಾರು ಕೋಟಿ ರುಪಾಯಿ ಹಣ ಅನುದಾನ ನೀಡಿ ಅಪ್ಪರ ಭದ್ರ ನೀರಾವರಿ ಯೋಜನೆ ಅನುಷ್ಠಾನಗೊಳಿಸಿದ್ದರೂ ಹೊಸದುರ್ಗ ಮಾರ್ಗದಲ್ಲಿ 1.5 ಕಿಲೋಮೀಟರ್‌ ಸುರಂಗ ಮಾರ್ಗದಲ್ಲಿ ಪೈಪ್‌ಲೈನ್‌ ಬರಬೇಕಿದ್ದು, ಭೂಮಿ ನೀಡಲು ರೈತರು ಅಡ್ಡಿಪಡಿಸುತ್ತಿರುವ ಕಾರಣ ಕಾಮಗಾರಿ ಸ್ಥಗಿತವಾಗಿದೆ, ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮಧ್ಯ ಕರ್ನಾಟಕದ ಹಲವಾರು ಜಿಲ್ಲೆಗಳಿಗೆ ನೀರು ನೀಡುವಂತಹ ಅಪರಭದ್ರ ನೀರಾವರಿ ಯೋಜನೆ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಶೀಘ್ರದಲ್ಲಿ ಅಡೆತಡೆಗಳನ್ನು ನಿವಾರಿಸಲಾಗುವುದು ಎಂದರು. 

ಪಟ್ಟನಾಯಕನಹಳ್ಳಿ ಮಠದಲ್ಲಿ ಪೂಜೆ ಸಲ್ಲಿಸಿದ ಡಿಕೆಶಿ: ಪಟ್ಟನಾಯಕನಹಳ್ಳಿಯ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಭೇಟಿ ನೀಡಿ ಪೂಜೆ ಸಲ್ಲಿಸಿದರು. ನಂತರ ಮಾತನಾಡಿದ ಅವರು, ರಾಜ್ಯದಲ್ಲಿ ಉತ್ತಮ ಮಳೆ ಬೆಳೆಯಾಗಲಿ ಎಂದು ಪಟ್ಟನಾಯಕನಹಳ್ಳಿಯ ಕ್ಷೇತ್ರ ಪಾಲಕ ಶ್ರೀ ಓಂಕಾರೇಶ್ವರ ಸ್ವಾಮಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದೇನೆ. 

ಪಟ್ಟನಾಯಕನಹಳ್ಳಿಯ ಶ್ರೀಮಠಕ್ಕೆ ಚುನಾವಣೆಯ ನಂತರ ಭೇಟಿ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದೇನೆ. ಶ್ರೀ ನಂಜಾವಧೂತ ಸ್ವಾಮೀಜಿಯವರ ಆರ್ಶೀವಾದ ಪಡೆದಿದ್ದೇನೆ ಎಂದರು. ಶಿರಾ ಕ್ಷೇತ್ರದ ಶಾಸಕರಾದ ಟಿ.ಬಿ.ಜಯಚಂದ್ರ ಅವರಿಗೆ ಮಂತ್ರಿ ಸ್ಥಾನ ನೀಡುವಂತೆ ಕಾಂಗ್ರೆಸ್‌ ಕಾರ್ಯಕರ್ತರು ಮತ್ತು ಅಭಿಮಾನಿಗಳು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರನ್ನು ಪಟ್ಟನಾಯಕನಹಳ್ಳಿ ಮಠದಲ್ಲಿ ಒತ್ತಾಯಿಸಿದರು. ಹಿರಿಯ ರಾಜಕಾರಣಿಯಾಗಿರುವ ಟಿ.ಬಿ.ಜಯಚಂದ್ರ ಅವರ ಅನುಭವ ರಾಜ್ಯದ ಅಭಿವೃದ್ಧಿಗೆ ಅತ್ಯವಶ್ಯವಾಗಿದೆ. 

ಜೂ.20ರಂದು ಕೇಂದ್ರ ಸರ್ಕಾರದ ವಿರುದ್ಧ ಅಕ್ಕಿ ಕದನ: ಡಿ.ಕೆ.ಶಿವಕುಮಾರ್‌

ಜೊತೆಗೆ ಕುಂಚಿಟಿಗ ಜನಾಂಗದಿಂದ ಆಯ್ಕೆಯಾಗಿರುವ ಏಕೈಕ ಸದಸ್ಯರಾಗಿದ್ದು ಅವರಿಗೆ ಸಂಪುಟದಲ್ಲಿ ಅವಕಾಶ ನೀಡುವಂತೆ ಮನವಿ ಮಾಡಿದರು. ಕುಂಚಿಟಿಗರ ಸಂಘದ ಕಾರ್ಯದರ್ಶಿ ಗುಳಿಗೇನಹಳ್ಳಿ ನಾಗರಾಜ್‌, ನಿರ್ದೇಶಕರಾದ ಶಶಿಧರ್‌ ಗೌಡ, ಸುಧಾಕರ್‌ ಗೌಡ, ಡಿ.ಸಿ.ಅಶೋಕ್‌, ಮುಖಂಡರಾದ ಮನುಪಾಟೀಲ್‌, ಸಂಕಾಪುರ ಚಿದಾನಂದ್‌, ಗುರುಮೂರ್ತಿ ಗೌಡ ಕುಂಚಿಟಿಗ ಸಮುದಾಯದ ಏಕೈಕ ಶಾಸಕರಾದ ಟಿ.ಬಿ.ಜಯಚಂದ್ರ ಅವರನ್ನು ಮಂತ್ರಿ ಮಾಡುವಂತೆ ಮನವಿ ಪತ್ರ ನೀಡಿದರು.

click me!