ಸರ್ಕಾರ ಯಾವುದಿದ್ದರೇನು, ಅನುದಾನ ತರುವೆ: ಸುರೇಶ್‌ಗೌಡ

By Kannadaprabha News  |  First Published May 16, 2023, 4:44 AM IST

ಸಿದ್ಧಗಂಗಾ ಮಠ ಒಳ್ಳೆಯ ಕೆಲಸಗಳಿಗೆ ಸ್ಫೂರ್ತಿ ನೀಡುವಂತಹ ಮಠ. ಹಾಗಾಗಿಯೇ ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದು ನನ್ನ ಶಾಸಕ ಜವಾಬ್ದಾರಿಯನ್ನು ಇಂದಿನಿಂದ ಆರಂಭಿಸುತ್ತಿದ್ದೇನೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶಗೌಡ ತಿಳಿಸಿದರು


  ತುಮಕೂರು :  ಸಿದ್ಧಗಂಗಾ ಮಠ ಒಳ್ಳೆಯ ಕೆಲಸಗಳಿಗೆ ಸ್ಫೂರ್ತಿ ನೀಡುವಂತಹ ಮಠ. ಹಾಗಾಗಿಯೇ ಸಿದ್ಧಗಂಗಾ ಶ್ರೀಗಳ ಆಶೀರ್ವಾದ ಪಡೆದು ನನ್ನ ಶಾಸಕ ಜವಾಬ್ದಾರಿಯನ್ನು ಇಂದಿನಿಂದ ಆರಂಭಿಸುತ್ತಿದ್ದೇನೆ ಎಂದು ತುಮಕೂರು ಗ್ರಾಮಾಂತರ ಶಾಸಕ ಬಿ. ಸುರೇಶಗೌಡ ತಿಳಿಸಿದರು.

ಅವರು ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಹಿರಿಯ ಶ್ರೀಗಳಾದ ಲಿಂ. ಡಾ. ಶಿವಕುಮಾರ ಸ್ವಾಮೀಜಿಯವರ ಗದ್ದುಗೆಗೆ ಪೂಜೆ ಸಲ್ಲಿಸಿ ಮಠಾಧ್ಯಕ್ಷರಾದ ಸಿದ್ಧಲಿಂಗ ಸ್ವಾಮೀಜಿಯವರ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದÜರು.

Tap to resize

Latest Videos

ಈ ಹಿಂದೆ 2008ರಲ್ಲಿನಾಗಿ ಆಯ್ಕೆಯಾದ ಸಂದರ್ಭದಲ್ಲಿಯೂ ಡಾ. ಗಳ ಆಶೀರ್ವಾದ ಪಡೆದು ಕೆಲಸ ಆರಂಭಿಸಿದ್ದೆ. ಈಗಲೂ ಕೂಡ ಅದೇ ಕೆಲಸವನ್ನು ಮುಂದುವರೆಸಿದ್ದೇನೆ. ಸಿದ್ಧಗಂಗಾ ಮಠದ ಆಶೀರ್ವಾದದಿಂದ 2008 ಮತ್ತು 2013 ರಲ್ಲಿ ಶಾಸಕನಾಗಿ ಆಯ್ಕೆಯಾಗಲು ಅವಕಾಶವಾಯಿತು. ಆ ವೇಳೆ ಕ್ಷೇತ್ರದ ಜನರು ಬಹುದಿನದ ಬೇಡಿಕೆಯಾಗಿದ್ದ ಹೆಬ್ಬೂರು-ಗೂಳೂರು ಏತನೀರಾವರಿ ಜಾರಿ, ಶಾಲೆಗಳ ಅಭಿವೃದ್ಧಿ, ರೈತರಿಗೆ ನಿರಂತರ ವಿದ್ಯುತ್‌ ಹೀಗೆ, ಹತ್ತು ಹಲವು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕ್ಷೇತ್ರದಲ್ಲಿ ನಡೆಸಲು ಸಹಕಾರಿಯಾಯಿತು. ಇದಕ್ಕೆಲ್ಲಾ ಸ್ಫೂರ್ತಿ ನೀಡಿದ್ದು ಸಿದ್ಧಗಂಗಾ ಮಠ ಎಂದರು.

ಹಿರಿಯ ಶ್ರೀಗಳಿದ್ದ ಸಂದರ್ಭದಲ್ಲಿ ಮಠಕ್ಕೆ ಬಂದರೆ ಕ್ಷೇತ್ರದ ನೀರಾವರಿ ಯೋಜನೆಗಳು, ರೈತರ ಪರವಾಗಿ ನಿಲ್ಲುವಂತೆ, ಗ್ರಾಮೀಣ ಭಾಗದಲ್ಲಿಯೂ ಉತ್ತಮ ಗುಣಮಟ್ಟದ ಶಾಲೆಗಳನ್ನು ತೆರೆದು ಬಡವರಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ಮಾಡಬೇಕೆಂದು ಶ್ರೀಗಳು ಸಲಹೆ ನೀಡುತ್ತಿದ್ದರು. ಅದರಂತೆ ಈ ಬಾರಿಯೂ ಸಹ ಉತ್ತಮವಾಗಿ ಕೆಲಸ ಮಾಡಲು ಮುಂದಾಗಿರುವೆ. ಸರ್ಕಾರ ಯಾವುದಿದ್ದರೇನು, ಅನುದಾನ ತರುವ ತಾಕತ್ತು ನನಗಿದೆ. ಸರ್ಕಾರ ಒಂದು ರೀತಿಯಲ್ಲಿ ಬಾವಿಯಿದ್ದಂತೆ. ಯಾರಿಗೆ ಶಕ್ತಿ ಇದೆಯೋ ಅವರು ಹೆಚ್ಚು ನೀರು ಸೇದಿಕೊಳ್ಳುತ್ತಾರೆ ಎಂದರು.

ಇದೇ ಸಂದರ್ಭದಲ್ಲಿ ಶಾಸಕ ಸುರೇಶ್‌ಗೌಡ ಅವರು ಹಳೇ ಮಠಕ್ಕೆ ತೆರಳಿ ನೂತನ ಉತ್ತರಾಧಿಕಾರಿ ಶಿವ ಸಿದ್ದೇಶ್ವರ ಸ್ವಾಮಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮುಖಂಡರಾದ ಮೈದಾಳ ಗ್ರಾ.ಪಂ.ಅಧ್ಯಕ್ಷ ಮಾಲಾ ಮಂಜುನಾಥ್‌, ಬಿಜೆಪಿ ತಾಲೂಕು ಅಧ್ಯಕ್ಷ ಶಂಕರಣ್ಣ, ಉಮಾಶಂಕರ್‌, ಗೂಳೂರು ಶಿವಕುಮಾರ್‌, ಅರಕೆರೆ ರವೀಶ್‌, ನಾರಾಯಣಪ್ಪ, ಗೂಳೂರು ವಿಜಯಕುಮಾರ್‌, ಗಂಗಾಂಜನೇಯ, ಪಂಚೆ ರಾಮಚಂದ್ರಪ್ಪ, ಊರುಕೆರೆ ಆರ್‌. ವಿಜಯಕುಮಾರ್‌, ಹೊನ್ನೇಶಕುಮಾರ್‌, ಹೆತ್ತೇನಹಳ್ಳಿ ವೆಂಕಟೇಶ್‌ ಮತ್ತಿತರರು ಉಪಸ್ಥಿತರಿದ್ದರು.

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಆದರೆ ರಾಷ್ಟ್ರಮಟ್ಟದಲ್ಲಿ ಇಂದಿಗೂ ಬಿಜೆಪಿ ಪ್ರಬಲವಾಗಿದೆ. ಕರ್ನಾಟಕದ ವಿಚಾರದಲ್ಲಿ ಪಕ್ಷ ಸದೃಢವಾಗಿದ್ದರೂ ಕೆಲ ವಿಷಯಗಳಲ್ಲಿ ಆದ ಹೊಂದಾಣಿಕೆ ಕೊರೆತೆಯಿಂದ ಕಡಿಮೆ ಸ್ಥಾನಗಳು ಬಂದಿವೆ. ಮುಂದಿನ ಬಾರಿ ಸರಿ ಹೋಗಲಿದೆ. ಕಾಂಗ್ರೆಸ್‌ನವರು ನಮ್ಮ ಪಕ್ಷದ ಬಗ್ಗೆ ಮಾಡಿದ ಅಪಪ್ರಚಾರದಿಂದ ಕಡಿಮೆ ಸೀಟು ಬಂದಿವೆ. ಗ್ಯಾಸ್‌ ಬೆಲೆ ಹೆಚ್ಚಳ, ಪಡಿತರ ಅಕ್ಕಿ ಇನ್ನಿತರ ವಿಚಾರಗಳ ಬಗ್ಗೆ ಹೆಚ್ಚು ಅಪಪ್ರಚಾರ ನಡೆಯಿತು. ಮುಂದಿನ ದಿನಗಳಲ್ಲಿ ಅದನ್ನು ಸರಿಪಡಿಸಿಕೊಂಡು ಹೋಗುವ ವಿಶ್ವಾಸವಿದೆ.

ಸುರೇಶ್‌ಗೌಡ

click me!