ಕನ್ನಡದ ಒಂದಿಂಚು ನೆಲವನ್ನೂಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ; ಶಿವರಾಮ್ ಹೆಬ್ಬಾರ್

By Kannadaprabha News  |  First Published Jan 7, 2023, 7:11 AM IST
  • ಕನ್ನಡದ ಒಂದಿಂಚು ನೆಲವನ್ನೂಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಶಿವರಾಮ್ ಹೆಬ್ಬಾರ್
  •  ರಾಷ್ಟ್ರ, ನಾಡು ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ
  •  86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಹಾವೇರಿ (ಜ.7) : ಸಾಮರಸ್ಯದ ಬೀಡು, ಏಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ರಾಷ್ಟ್ರ, ನಾಡ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಧ್ವಜಾರೋಹಣ ಮಾಡುವುದರ ಮೂಲಕ ಚಾಲನೆ ನೀಡಲಾಯಿತು.

ಕನಕ-ಶರೀಫ-ಸರ್ವಜ್ಞ ಪ್ರಧಾನ ವೇದಿಕೆ ಮುಂಭಾಗದಲ್ಲಿ ಚುಮುಚುಮು ಚಳಿ, ಮಂಜು ಮುಸುಕಿದ ವಾತಾವರಣದಲ್ಲಿ ಮುಂಜಾನೆ 7 ಗಂಟೆಗೆ ಧ್ವಜಾರೋಹಣ ನೆರವೇರಿಸಲಾಯಿತು. ರಾಷ್ಟ್ರಧ್ವಜವನ್ನು ಕಾರ್ಮಿಕ ಇಲಾಖೆ ಹಾಗೂ ಹಾವೇರಿ ಜಿಲ್ಲಾ ಉಸ್ತವಾರಿ ಸಚಿವ ಶಿವರಾಮ ಹೆಬ್ಬಾರ್‌, ಸಾಹಿತ್ಯ ಪರಿಷತ್ತಿನ ಧ್ವಜವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಮಹೇಶ ಜೋಶಿ, ಜಿಲ್ಲಾ ಸಾಹಿತ್ಯ ಪರಿಷತ್‌ ಅಧ್ಯಕ್ಷ ಲಿಂಗಯ್ಯ ಹಿರೇಮಠ ಅವರು ನಾಡ ಧ್ವಜಾರೋಹಣ ನೆರವೇರಿಸಿದರು.

Tap to resize

Latest Videos

undefined

ಸಮಗ್ರ ಭಾಷಾ ಅಭಿವೃದ್ಧಿಗೆ ಶೀಘ್ರ ಕಾನೂನು ಸ್ವರೂಪ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಶಿವರಾಮ ಹೆಬ್ಬಾರ್‌(Shivaram hebbar), ನಭೂತೋ ಎನ್ನುವ ರೀತಿಯಲ್ಲಿ ಹಾವೇರಿ ಸಾಹಿತ್ಯ ಸಮ್ಮೇಳನವನ್ನು ಕನ್ನಡಿಗರು ಹಾಗೂ ಸಾಹಿತ್ಯ ಆಸಕ್ತರ ನೆನಪಿನಲ್ಲಿ ಉಳಿಯುವಂತೆ ಆಯೋಜಿಸಲಾಗಿದೆ. ಕನ್ನಡಿಗರ ಬಗ್ಗೆ, ಕನ್ನಡ ಭಾಷೆ ಹಾಗೂ ನಾಡಿನ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸುವವರಿಗೆ ಸರಿಯಾದ ಉತ್ತರ ನೀಡಲಾಗುವುದು. ಅನವಶ್ಯಕವಾಗಿ ಕೆಣಕಿ ಜನರು ತಪ್ಪುಹಾದಿಯಲ್ಲಿ ಹೋಗುವಂತಹ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ. ಅಂಥವರಿಗೆಲ್ಲ ಸ್ಪಷ್ಟಉತ್ತರ ನೀಡುವಂತ ಕೆಲಸ ಸಮ್ಮೇಳನದಲ್ಲಿ ಆಗಬೇಕು. ಕನ್ನಡದ ಒಂದಿಂಚು ನೆಲವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂದು ಮಹಾರಾಷ್ಟ್ರ ಖ್ಯಾತೆಗೆ ತಿರುಗೇಟು ನೀಡಿದರು.

ಯುವ ಪ್ರತಿಭೆಗಳಿಗೆ ಅವಕಾಶ ಸಿಗಲಿ:

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ(Sunil kumar karkal) ಕುಮಾರ ಮಾತನಾಡಿ, ಕನ್ನಡ ಭಾಷೆಯ ಬೆಳವಣಿಗೆ ದೃಷ್ಟಿಯಿಂದ ಸಮ್ಮೇಳನ ಮಹತ್ವ ಪಡೆದಿದೆ. ನಾಡು, ನುಡಿಯ ಬಗ್ಗೆ ಸಾಹಿತ್ಯ ಪರಿಷತ್ತಿನ ನೇತೃತ್ವದಲ್ಲಿ ಉತ್ತಮ ಚರ್ಚೆ ನಡೆಯಲಿವೆ. ಸಮ್ಮೇಳನಕ್ಕೆ ಯಾವುದೇ ಕೊರತೆಯಾಗದಂತೆ ಸರ್ಕಾರ ಹಾಗೂ ಜಿಲ್ಲಾಡಳಿತದಿಂದ ಸಾಕಷ್ಟುಎಚ್ಚರಿಕೆ ವಹಿಸಿ ಉತ್ತಮ ವ್ಯವಸ್ಥೆ ಕಲ್ಪಿಸಲಾಗಿದೆ. ‘ಕನ್ನಡವೇ ಸತ್ಯ, ಕನ್ನಡವೇ ನಿತ್ಯ’ ಎನ್ನುವ ಘೋಷಣೆಯನ್ನು ಅರ್ಥಗರ್ಭಿತವಾಗಿ ಜಾರಿಗೆ ತರಲು ಸರ್ಕಾರ ಪ್ರಯತ್ನ ಮಾಡುತ್ತಿದೆ.

Doddarangegowda: ಎಡಪಂಥ ಬಲಪಂಥ ಗೊತ್ತಿಲ್ಲ, ನನ್ನದು ಮಾನವ ಪಂಥ: ದೊಡ್ಡರಂಗೇಗೌಡ

ಈ ಸಾಹಿತ್ಯ ಸಮ್ಮೇಳನದ ಮೂಲಕ ಯುವ ಪ್ರತಿಭೆಗಳಿಗೆ ಅವಕಾಶ ಕೊಡಬೇಕು, ಯುವ ಸಾಹಿತಿಗಳು ದೊಡ್ಡ ಪ್ರಮಾಣದಲ್ಲಿ ಬೆಳೆಯಬೇಕು. ದೊಡ್ಡ ಚರ್ಚೆ ನಡೆದು ರಾಜ್ಯಕ್ಕೆ ಮಾದರಿಯಾಗುವ ಸಂದೇಶ ಇಲ್ಲಿಂದ ಹೊರಬೀಳಬೇಕು. ಪರಿಷತ್ತು ಈ ನಿಟ್ಟಿನಲ್ಲಿ ಕ್ರಮ ವಹಿಸಿದೆ ಎಂದು ಹೇಳಿದರು. ಶಾಸಕ ನೆಹರು ಓಲೇಕಾರ, ಸಂಸದ ಶಿವಕುಮಾರ ಉದಾಸಿ, ಜಿಲ್ಲಾ​ಧಿಕಾರಿ ರಘುನಂದನ ಮೂರ್ತಿ, ಜಿಪಂ ಸಿಇಒ ಮಹಮ್ಮದ್‌ ರೋಷನ್‌, ಎಸ್ಪಿ ಹನುಮಂತರಾಯ ಇತರರು ಇದ್ದರು.

click me!