ರಾಜ್ಯದ 3 ಜಿಲ್ಲೆಗಳಲ್ಲಿ 2 ದಿನ ಭಾರಿ ಮಳೆ

By Kannadaprabha NewsFirst Published Aug 20, 2020, 7:25 AM IST
Highlights

ರಾಜ್ಯದ ಮೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಬೆಂಗಳೂರು(ಆ.20) :  ರಾಜ್ಯದ ಕರಾವಳಿ ಭಾಗದಲ್ಲಿ ಮುಂಗಾರಿನ ಅಬ್ಬರ ಮುಂದಿನ ಎರಡು ದಿನಗಳ ಕಾಲ (ಆ.21ವರೆಗೆ) ಮುಂದುವರಿಯುವುದರಿಂದ ‘ಯೆಲ್ಲೊ ಅಲರ್ಟ್‌’ ಎಚ್ಚರಿಕೆ ನೀಡಲಾಗಿದೆ.

ಉಡುಪಿ, ದಕ್ಷಿಣ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ನೀಡಲಾಗಿದೆ. ಮೋಡ ಕವಿದ ಹಾಗೂ ಚಳಿಯ ವಾತಾವರಣ ಮುಂದುವರಿಯಲಿದೆ. ತಾಪಮಾನ ಗರಿಷ್ಠ ಶೇ.27ರಿಂದ ಕನಿಷ್ಠ 20 ಡಿಗ್ರಿ ಸೆಲ್ಸಿಯಸ್‌ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ: ಜನಜೀವನ ಸಂಪೂರ್ಣ ಅಸ್ತವ್ಯಸ್ತ.

ಮಳೆ ಬಿದ್ದ ಪ್ರಮಾಣ: ಆ.19ರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಹಿಂದಿನ 24 ಗಂಟೆಯಲ್ಲಿ ಆಗುಂಬೆ 12 ಸೆಂ.ಮೀ, ದಕ್ಷಿಣ ಕನ್ನಡದ ಉಪ್ಪಿನಂಗಡಿ ಮತ್ತು ಮಾಣಿ 7, ದಕ್ಷಿಣ ಕನ್ನಡದ ಮೂಡಬಿದಿರೆ, ಉಡುಪಿ ಜಿಲ್ಲೆಯ ಕಾರ್ಕಳ, ಕೊಲ್ಲೂರು, ಸಿದ್ದಾಪುರ 6, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ, ಸುಳ್ಯ, ಬೆಳ್ತಂಗಡಿ, ಪುತ್ತೂರು ಹಾಗೂ ಉತ್ತರ ಕನ್ನಡದ ಕದ್ರಾದಲ್ಲಿ ತಲಾ 5 ಸೆಂ.ಮೀ. ಮಳೆ ಬಿದ್ದಿದೆ.

"

click me!