ಇನ್ಮುಂದೆ  ವೀಕೆಂಡ್ ಕರ್ಫ್ಯೂ ಇಲ್ಲ, ರಾಜ್ಯ ಸರ್ಕಾರ ಆದೇಶ

By Suvarna News  |  First Published Sep 9, 2021, 7:17 PM IST

* ವೀಕೆಂಡ್ ಕರ್ಫ್ಯೂ ರದ್ದು ಮಾಡಿ‌ ರಾಜ್ಯ ಸರ್ಕಾರದ ಆದೇಶ

* ರಾಜ್ಯದ ಗಡಿ ಜಿಲ್ಲೆಗಳಿಗೆ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ಆದೇಶ ವಾಪಾಸ್

* ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಇಳಿಮುಖ ಹಿನ್ನೆಲೆ

* ವೀಕೆಂಡ್ ಕರ್ಫ್ಯೂ ತೆರವು ಮಾಡಿ ಸರ್ಕಾರದ ಆದೇಶ


ಬೆಂಗಳೂರು(ಸೆ. 09)  ರಾಜ್ಯದ ಗಡಿ ಜಿಲ್ಲೆಗಳುಗೆ ಹೇರಿದ್ದ ವೀಕೆಂಡ್ ಕರ್ಫ್ಯೂ ರದ್ದು ಮಾಡಿ‌ ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ರಾಜ್ಯದ ಗಡಿ ಜಿಲ್ಲೆಗಳಿಗೆ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂ ಆದೇಶ ವಾಪಾಸ್ ಪಡೆಯಲಾಗಿದೆ.

ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಇಳಿಮುಖ ಹಿನ್ನೆಲೆ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ. ವೀಕೆಂಡ್ ಕರ್ಫ್ಯೂ ತೆರವು ಮಾಡಲಾಗಿದ್ದು ಜನರು ಎಂದಿನಂತೆ ತಮ್ಮ ದೈನಂದಿನ ಕೆಲಸ ನಿರ್ವಹಿಸಬಹುದು.  ರಾಜ್ಯದ ಸರಾಸರಿ ಪಾಸಿಟಿವಿಟಿ ರೇಟ್ ಶೇ. 0.73ಕ್ಕೆ ಇಳಿದಿದೆ.

Tap to resize

Latest Videos

70 ಕೋಟಿ ಜನರಿಗೆ ಲಸಿಕೆ ನೀಡಿದ ಭಾರತ

ವೀಕೆಂಡ್ ಕರ್ಫ್ಯೂ ಹೇರಿಕೆ‌ ಮಾಡಲಾಗಿದ್ದ ಜಿಲ್ಲೆಗಳಲ್ಲಿ ಶೇ. 2ಕ್ಕಿಂತ ಕಡಿಮೆ ಪಾಸಿಟಿವಿಟಿ ರೇಟ್ ಇದೆ. ಈ‌ ಹಿನ್ನೆಲೆ ವೀಕೆಂಡ್ ಕರ್ಫ್ಯೂ ಆದೇಶ ರದ್ದಾಗಿದೆ. ಸೋಂಕು ಹೆಚ್ಚಳ‌ ಆದ್ರೆ ವೀಕೆಂಡ್ ಕರ್ಫ್ಯೂ ಜಾರಿಗೆ ಆಯಾ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ. ಮಹಾರಾಷ್ಟ್ರ ಮತ್ತು ಕೇರಳದ ಗಡಿ ಜಿಲ್ಲೆಗಳಿಗೆ ರಿಲೀಫ್ ಸಿಕ್ಕಿದೆ. ಕೊಡಗು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ವೀಕೆಂಡ್ ಕರ್ಫ್ಯೂವಿನಿಂದ ಮುಕ್ತವಾಗಿವೆ.

 

click me!