* ವಾರಾಂತ್ಯ ನಿರ್ಬಂಧ ತೆರವುಗೊಳಿಸಿದ ಜಿಲ್ಲಾಡಳಿತ
* ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖ
* ದೇವಸ್ಥಾನಗಳಲ್ಲಿ ಕೋವಿಡ್ ಲಸಿಕಾ ಕೇಂದ್ರ ತೆರೆಯಬೇಕು
ಮಂಗಳೂರು(ಸೆ.19): ,ದೇವಸ್ಥಾನಗಳಿಗೆ ವಿಧಿಸಿದ್ದ ವಾರಾಂತ್ಯ ನಿರ್ಬಂಧಗಳನ್ನು ದ.ಕ. ಜಿಲ್ಲಾಡಳಿತ ತೆರವುಗೊಳಿಸಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖವಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.
ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುವ ಆಡಳಿತ ಮಂಡಳಿ, ಅರ್ಚಕರು, ಸಿಬ್ಬಂದಿ ಸೇರಿ ಎಲ್ಲರೂ ಪ್ರತಿ 15 ದಿನಗಳಿಗೊಮ್ಮೆ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಿ ನೆಗೆಟಿವ್ ವರದಿ ಪಡೆದುಕೊಳ್ಳಬೇಕು.
ಧರ್ಮಸ್ಥಳ, ಕುಕ್ಕೆಯಲ್ಲಿ ಭಕ್ತರಿಗೆ ವಾರಾಂತ್ಯ ನಿರ್ಬಂಧ
ಭಕ್ತರು ಎರಡು ಡೋಸ್ ಲಸಿಕೆ ಪಡೆದಿದ್ದರೂ ಕಡ್ಡಾಯವಾಗಿ 72 ಗಂಟೆಗಿಂತ ಮುಂಚೆಯ ನೆಗೆಟಿವ್ ವರದಿ ತರಬೇಕು ಎಂದು ಷರತ್ತು ವಿಧಿಸಲಾಗಿದೆ. ಅಲ್ಲದೆ ದೇವಸ್ಥಾನಗಳಲ್ಲಿ ಕೋವಿಡ್ ಲಸಿಕಾ ಕೇಂದ್ರ ತೆರೆಯಬೇಕು ಎಂದೂ ಸೂಚಿಸಲಾಗಿದೆ.