ಬೇರೆ ಪಕ್ಷದಿಂದ ಬಿಜೆಪಿಗೆ ಬರುವವರಿಗೆ ಸ್ವಾಗತ : ಸಚಿವ ಮಾಧುಸ್ವಾಮಿ

Suvarna News   | Asianet News
Published : Jul 04, 2021, 02:20 PM IST
ಬೇರೆ ಪಕ್ಷದಿಂದ ಬಿಜೆಪಿಗೆ ಬರುವವರಿಗೆ ಸ್ವಾಗತ : ಸಚಿವ ಮಾಧುಸ್ವಾಮಿ

ಸಾರಾಂಶ

ಬಿಜೆಪಿಗೆ ಯಾರಾದರೂ ಬರುವುದಿದ್ದರೆ ಬರಲಿ ಬೇರೆ ಪಕ್ಷದಿಂದ ಬಿಜೆಪಿಗೆ ಬರುವುದಾದರೆ ಸ್ವಾಗತ ಉಡುಪಿಯಲ್ಲಿ ಸಚಿವ ಜೆ ಸಿ ಮಾಧುಸ್ವಾಮಿ ಹೇಳಿಕೆ

ಉಡುಪಿ (ಜು.04) ಬಿಜೆಪಿಗೆ ಯಾರಾದರೂ ಬರುವುದಿದ್ದರೆ ಬರಲಿ.  ಬೇರೆ ಪಕ್ಷದಿಂದ ಬಿಜೆಪಿಗೆ ಬರುವುದಾದರೆ ಸ್ವಾಗತ. ವಿಸ್ತರಣೆ ರಾಜಕೀಯ ಎಲ್ಲಾ ಪಕ್ಷಗಳ ಉದ್ದೇಶ ಆಗಿರುತ್ತದೆ
ಕಾಂಗ್ರೆಸ್ ನಿಂದ ಯಾರಾದರೂ ಬರುವವರಿದ್ದರು ನಾವು ಸ್ವಾಗತಿಸುತ್ತೇವೆ ಎಂದು ಜೆಸಿ ಮಾಧುಸ್ವಾಮಿ ಹೇಳಿದರು.

ಉಡುಪಿಯಲ್ಲಿಂದು ಮಾತನಾಡಿದ ಸಚಿವ ಜೆ.ಸಿ ಮಾಧುಸ್ವಾಮಿ ಬೇರೆ ಪಕ್ಷದಿಂದ ಬಿಜೆಪಿಗೆ ಬರುವವರಿಗೆ ಸ್ವಾಗತ ಎಂದರು. ಅಲ್ಲದೇ  ಲಸಿಕೆ ಭೋಗಸ್ ಎಂದಿರುವ ಡಿ.ಕೆ ಶಿವಕುಮಾರ್ ಆರೋಪಕ್ಕೆ ತಿರುಗೇಟು ನೀಡಿದರು. ವ್ಯಾಕ್ಸಿನ್ ವಿಚಾರದಲ್ಲಿ ಮೋದಿಯನ್ನ ಟೀಕೆ ಮಾಡಿದರೆ ನಿಮಗೆ ಒಳ್ಳೇದಾಗಲ್ಲ. ದೇಶದಲ್ಲಿ 80 ಕೋಟಿ ಜನಕ್ಕೆ ಉಚಿತ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದರು.

ರಾಜಕೀಯದಲ್ಲಿ ನನಗೆ ಆಸಕ್ತಿ ಇಲ್ಲ, ನಮ್ಮ ಅಭಿಪ್ರಾಯ ಯಾರೂ ಕೇಳ್ತಿಲ್ಲ: ಸಚಿವ ಮಾಧುಸ್ವಾಮಿ ..

ರಾಜ್ಯ ಸರ್ಕಾರ 2000 ಕೋಟಿ ರುಪಾಯಿ ತೆಗೆದಿಟ್ಟಿದೆ.  ಡಿಕೆಶಿ ಪಾಪದ ಮಾತಿನಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ. ಟೀಕೆ ಮಾಡುವುದನ್ನು ಮಾಡಿ ಅದು ನಿಮ್ಮ ಡ್ಯೂಟಿ
ವಿರೋಧ ಪಕ್ಷದಲ್ಲಿ ನನಗಿಂತ ಚೆನ್ನಾಗಿ ಕೆಲಸ ಮಾಡಿದವರು ಯಾರು ಇಲ್ಲ. ನೈಸರ್ಗಿಕ ಆಪತ್ತಿನ ಕಾಲದಲ್ಲಿ ಎಲ್ಲವನ್ನು ಟೀಕೆ ಮಾಡಬಾರದು. ವ್ಯಾಕ್ಸಿನ್ ಉತ್ಪಾದನೆ ಮಾಡಲು ಕಂಪನಿಯವರಿಗೂ ಕಾಲಾವಕಾಶ ಬೇಕು. ಮುಂದಿನ ಮೂರು ತಿಂಗಳಲ್ಲಿ ರಾಜ್ಯದಲ್ಲಿ ಲಸಿಕೆ ಅಭಿಯಾನ ಮುಗಿಯುತ್ತದೆ. ಇದು ಡಿಕೆಶಿ ಅವರ ಬದುಕಿನ ಪ್ರಶ್ನೆ ಹೀಗಾಗಿ ವಿರೋಧ ಮಾಡುತ್ತಾರೆ ಎಂದರು.  

ಜಾರಕಿಹೊಳಿ ವಿಚಾರ ಪ್ರಸ್ತಾಪ :  ಜಾರಕಿಹೊಳಿ  ಮಹತ್ವದ ರಾಜಕೀಯ ನಿರ್ಧಾರ ವಿಚಾರದ ಬಗ್ಗೆ ಮಾತನಾಡಿದ ಮಾಧುಸ್ವಾಮಿ ಜಾರಕಿಹೊಳಿ ಅವರಿಗೆ ಸರಕಾರ ಮತ್ತು ಪಕ್ಷದ ಕಡೆಯಿಂದ ಏನು ತೊಂದರೆ ಮಾಡಿಲ್ಲ.  ಆಕಸ್ಮಿಕವಾದ ಘಟನೆಗೆ ಅವರು ಬಲಿಯಾಗಿದ್ದಾರೆ ಅಷ್ಟೇ.  ನಾವೆಲ್ಲ ಅವರ ಬಗ್ಗೆ ಅನುಕಂಪ ಇಟ್ಟುಕೊಂಡಿದ್ದೇವೆ. ಇದೊಂದು ಕಾನೂನಾತ್ಮಕ ಮತ್ತು ನೈತಿಕ ವಿಚಾರ.  ನೈತಿಕವಾಗಿ ಹೊಣೆ ಹೊತ್ತು ಅವರು ರಾಜೀನಾಮೆ ನೀಡಿದ್ದಾರೆ ಎಂದರು.

ರಮೇಶ್ ಜಾರಕಿಹೊಳಿಗೆ ಕಾನೂನಾತ್ಮಕ ವಾಗಿಯೂ ಯಾವುದೇ ಸಮಸ್ಯೆ ಇದೆ ಅನಿಸಲ್ಲ. ಸಮ್ಮತಿ ಯಿಂದ ನಡೆದ ದೈಹಿಕ ಸಂಪರ್ಕ ಅಪರಾಧ ಅಲ್ಲ. ಹೀಗೆಂದು ಸುಪ್ರೀಂಕೋರ್ಟ್ ಹೇಳಿದೆ.  ಆ ಹೆಣ್ಣುಮಗಳ ವರ್ತನೆ ನೋಡಿದರೆ ಇಚ್ಛೆಪಟ್ಟು ಹೋಗಿದ್ದಾರೆ ಅನ್ನೋ ಭಾವನೆ ಬರುತ್ತದೆ. ಹಾಗಾಗಿ ಜಾರಕಿಹೊಳಿಗೆ ಶಿಕ್ಷೆ ಆಗಲಾರದು ಅನಿಸುತ್ತದೆ.  ಎಲ್ಲವನ್ನು ಎದುರಿಸಲೇಬೇಕು. ನ್ಯಾಯಾಲಯದಲ್ಲಿ ಪ್ರಕರಣ ಇದ್ದಾಗ ಯಾರನ್ನು ದೂರಲು ಸಾಧ್ಯವಿಲ್ಲ. ಇದರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗಿಲ್ಲ ಎಂದು ಮಾಧುಸ್ವಾಮಿ ಹೇಳಿದರು. 

PREV
click me!

Recommended Stories

ಮೆಟ್ರೋ ಗುಲಾಬಿ ಮಾರ್ಗದ ರೈಲು ಅನಾವರಣ: ಯಾವ್ಯಾವ ಮಾರ್ಗಕ್ಕೆ?
ದಿಲ್ಲಿ, ಮುಂಬಯಿ ರೀತಿ ರಾಜಧಾನಿಗೆ ಎರಡು ಪೊಲೀಸ್‌ ಕಮೀಷನರೇಟ್‌