ಕಳಸಾ-ಬಂಡೂರಿ ಮಹದಾಯಿ ಯೋಜನೆಯ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ರಕ್ತದಲ್ಲಿ ಬರೆದ ಪತ್ರ ಎಲ್ಲಿ? ಎಂದು ಶಾಸಕ ಎಚ್.ಕೆ. ಪಾಟೀಲ ಪ್ರಶ್ನಿಸಿದರು. ನಗರದಲ್ಲಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದರು.
ಗದಗ (ಡಿ.25) : ಕಳಸಾ-ಬಂಡೂರಿ ಮಹದಾಯಿ ಯೋಜನೆಯ ವಿಚಾರವಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ರಕ್ತದಲ್ಲಿ ಬರೆದ ಪತ್ರ ಎಲ್ಲಿ? ಎಂದು ಶಾಸಕ ಎಚ್.ಕೆ. ಪಾಟೀಲ ಪ್ರಶ್ನಿಸಿದರು. ನಗರದಲ್ಲಿ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಹುಬ್ಬಳ್ಳಿಯ ನೆಹರೂ ಮೈದಾನದಲ್ಲಿ ಮಾಜಿ ಸಿಎಂ ಯಡಿಯೂರಪ್ಪನವರು ಕಳಸಾ-ಬಂಡೂರಿ ಮಹದಾಯಿ ಯೋಜನೆಯಿಂದ ಈ ಭಾಗದ ರೈತರ ಹಾಗೂ ಜನತೆಯ ಅಗತ್ಯತೆಯನ್ನು ಪೂರೈಸುವ ಮಹತ್ತರ ಯೋಜನೆಯಾಗಿದ್ದು, ಯೋಜನೆ ಜಾರಿಗೆ ಗೋವಾ ಮುಖ್ಯಮಂತ್ರಿಗಳ ಒಪ್ಪಿಗೆ ಪತ್ರ ಇದೆ. ಅಧಿಕಾರಕ್ಕೆ ಬಂದು 24 ಗಂಟೆಯಲ್ಲಿ ಮಹದಾಯಿ ಯೋಜನೆಯನ್ನು ಜಾರಿ ಮಾಡುತ್ತೇವೆ. ಯೋಜನೆ ಜಾರಿಯಾಗದಿದ್ದರೆ ನಿಮಗೆ ಮುಖ ತೋರಿಸುವುದಿಲ್ಲ, ರಕ್ತದಲ್ಲಿ ಬರೆದು ಕೊಡುತ್ತೇನೆ ಎಂದು ಜನತೆಗೆ ಭರವಸೆ ನೀಡಿದ್ದರು ಎಂದು ಸ್ಮರಿಸಿದರು.
ಎರಡು ವರ್ಷ ಆಡಳಿತ ಮಾಡಿದಿರಿ. ನಂತರ ಬೊಮ್ಮಾಯಿ ಅವರಿಗೆ ಅಧಿಕಾರ ಕೊಟ್ಟು ಹೋದರು. ಯಡಿಯೂರಪ್ಪನವರೇ ಎಲ್ಲಿ ನಿಮ್ಮ ರಕ್ತದಲ್ಲಿ ಬರೆದ ಪತ್ರ? ಎಲ್ಲಿ ನಿಮ್ಮ 24 ಗಂಟೆ? ಸುಳ್ಳು ಭರವಸೆಗಳ ಘೋಷಣೆಗಳನ್ನು ಮಾಡಿ ಜನರಿಗೆ ಮೋಸ ಮಾಡಿದ್ದೀರಿ. ರಾಜ್ಯದ ಅಭಿವೃದ್ಧಿ ಕೆಲಸದಲ್ಲಿ ದ್ರೋಹ ಮಾಡಿ, ಜನರ ಅವಕೃಪೆಗೆ ಪಾತ್ರವಾಗಿದ್ದೀರಿ, ಮುಂದಿನ ಚುನಾವಣೆಯಲ್ಲಿ ಜನತೆ ನಿಮಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
undefined
Hubballi: ಮಹದಾಯಿ ಬಗ್ಗೆ ಮಾತಾಡಲು ಕಾಂಗ್ರೆಸ್‌ನವರಿಗೆ ನೈತಿಕತೆಯಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
ಮಹದಾಯಿ ಯೋಜನೆಯ ವಿಚಾರವಾಗಿ ವಿಧಾನಸಭೆ, ಪರಿಷತ್ತಿನಲ್ಲಿ ಎಷ್ಟೇ ಮಾತಾನಾಡಿದರೂ ಪ್ರಯೋಜನವಾಗಿಲ್ಲ. ಅವರ ವಿಳಂಬ ದ್ರೋಹಕ್ಕೆ ಜನವರಿ 2ರಂದು ಹುಬ್ಬಳ್ಳಿ ನಗರದಲ್ಲಿ ಬೃಹತ್ ಪ್ರತಿಭಟನೆ ಮಾಡಿ, ಬೃಹತ್ ರಾರಯಲಿ ಮಾಡುವ ಮೂಲಕ ಬಿಜೆಪಿಯ ಛಳಿ ಬಿಡಿಸಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದರು. ವಿಳಂಬ ದ್ರೋಹಕ್ಕೆ ಜನಾಕ್ರೋಶ ಇದೆ ಎಂದು ಬಿಜೆಪಿಗೆ ತೋರಿಸುತ್ತೇವೆ. ರಾರಯಲಿ ಮೂಲಕ ಪಕ್ಷದ ನಾಯಕರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇವೆ ಎಂದರು.
ಅಸಹನೀಯ ಸ್ಥಿತಿಯಲ್ಲಿ ಜನತೆ:
ಬಿಜೆಪಿಯವರು ಧರ್ಮದ ಹೆಸರಲ್ಲಿ ಜನರನ್ನು ಅಸಹನೀಯ ಸ್ಥಿತಿಗೆ ತಂದಿದ್ದಾರೆ. ಬಡವರ ಬದಕನ್ನು ಬೀದಿಗೆ ತಂದರು. ಬರೀ ಸುಳ್ಳು ಭರವಸೆಗಳನ್ನು ನೀಡುತ್ತ ಜನರಿಗೆ ಮೋಸ ಮಾಡಿದರು. ನರೇಗಾ ಮುಖಾಂತರ ಸ್ಮಶಾನ, ಪಂಚಾಯ್ತಿ, ದನದಕೊಟ್ಟಿಗೆ, ಸಮುದಾಯ ಭವನ ನಿರ್ಮಾಣದಂತಹ 21 ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದೆವು. ಆದರೆ, ಬಿಜೆಪಿ ಅವನ್ನೆಲ್ಲ ನಿಲ್ಲಿಸಿದೆ. ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು. ಈ ಬಾರಿ ಗದಗ 4 ಕ್ಷೇತ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಬೇಕು ಎಂದು ಕಾರ್ಯಕರ್ತರಿಗೆ, ನಾಯಕರಿಗೆ ಕರೆ ನೀಡಿದರು.
Mahadayi water dispute: ಮಹದಾಯಿ ಹೋರಾಟಗಾರರಿಗೆ ತಪ್ಪದ ಕೋರ್ಟ್ ಅಲೆದಾಟ
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ, ವಿಪ ಸದಸ್ಯ ಸಲೀಂ ಅಹ್ಮದ, ಮಾಜಿ ಶಾಸಕ ಜಿ.ಎಸ್. ಪಾಟೀಲ, ಮಾಜಿ ಶಾಸಕ ಬಿ.ಆರ್. ಯಾವಗಲ್, ಜಿಪಂ ಮಾಜಿ ಅಧ್ಯಕ್ಷ ವಾಸಣ್ಣ ಕುರಡಗಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ಕಾಂಗ್ರೆಸ್ ವಿವಿಧ ಘಟಕದ ಪದಾಧಿಕಾರಿಗಳು, ಅಭಿಮಾನಿಗಳು ಇದ್ದರು.