ನೀರಿನ ಸಮಸ್ಯೆ ಇರುವೆಡೆ ತಕ್ಷಣವೇ ಟ್ಯಾಂಕರ್ ಮೂಲಕ ಪೂರೈಸಿ: ಸಚಿವ ಎಚ್.ಕೆ.ಪಾಟೀಲ್‌

By Kannadaprabha News  |  First Published Mar 3, 2024, 8:47 PM IST

ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಅವಲೋಕಿಸಿದ್ದು, ನೀರಿನ ಸಮಸ್ಯೆಯಿರುವ ಪ್ರದೇಶಗಳಲ್ಲಿ ಕುಡಿಯುವ ನೀರಿನ ಟ್ಯಾಂಕರ್ ಪೂರೈಸುವುದು, ಬಂದ್ ಆಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸುವುದು ಸೇರಿ ನೀರಿನ ಪೂರೈಕೆ ಬಗ್ಗೆ ನಿಗಾ ವಹಿಸಿರಿ ಎಂದು ಕಾನೂನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್‌ ಹೇಳಿದರು.


ಗದಗ (ಮಾ.03): ಜಿಲ್ಲೆಯ ಕುಡಿಯುವ ನೀರಿನ ಪರಿಸ್ಥಿತಿ ಅವಲೋಕಿಸಿದ್ದು, ನೀರಿನ ಸಮಸ್ಯೆಯಿರುವ ಪ್ರದೇಶಗಳಲ್ಲಿ ಕುಡಿಯುವ ನೀರಿನ ಟ್ಯಾಂಕರ್ ಪೂರೈಸುವುದು, ಬಂದ್ ಆಗಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸುವುದು ಸೇರಿ ನೀರಿನ ಪೂರೈಕೆ ಬಗ್ಗೆ ನಿಗಾ ವಹಿಸಿರಿ ಎಂದು ಕಾನೂನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್‌ ಹೇಳಿದರು. ಅವರು ಜಿಲ್ಲಾಡಳಿತ ಭವನದಲ್ಲಿ ಕುಡಿಯುವ ನೀರಿನ ಕುರಿತು ಸಭೆ‌ ನಡೆಸಿ, ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ‌ ಮಾತನಾಡಿದರು.

ಜಿಲ್ಲೆಗೆ ಅಗತ್ಯವಿರುವ ನೀರಿನ ಬಗ್ಗೆ ದೀರ್ಘವಾಗಿ ಚರ್ಚೆ ಮಾಡಿದ ಅವರು, ಸಿಂಗಟಾಲೂರು ಬ್ಯಾರೇಜಿನಲ್ಲಿ ಒಟ್ಟು 1 ಟಿಎಂಸಿ ನೀರು ಲಭ್ಯವಿದೆ. ಅದರಲ್ಲಿ 0.5 ಟಿಎಂಸಿ ಡೆಡ್ ಸ್ಟೋರೆಜ್ ಬಿಟ್ಟು, 0.5 ಟಿಎಂಸಿ ನೀರನ್ನು ಉಪಯೋಗಿಸಬಹುದಾಗಿದೆ. 0.02 ಟಿಎಂಸಿ ನೀರು ಪ್ರತಿದಿನ ಅವಶ್ಯವಿದ್ದು, ಕನಿಷ್ಠ 50 ದಿನಗಳ ವರೆಗೆ ನೀರು ಪೂರೈಕೆ ಮಾಡಬಹುದಾಗಿದೆ ಎಂದರು. ಕುಡಿಯುವ ನೀರು ಹೊರತುಪಡಿಸಿ ರೈತರ ಪಂಪ್‌ಸೆಟ್, ನೀರಾವರಿಗೆ ಬಳಸದೇ ಇರುವ ನಿಟ್ಟಿನಲ್ಲಿ ನೀರಾವರಿ ಇಲಾಖೆ, ಪೊಲೀಸ್ ಇಲಾಖೆ ತಂಡ ರಚಿಸಿ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಅವರಿಗೆ ಸೂಚನೆ ನೀಡಲಾಗಿದೆ. ಅಲ್ಲದೇ, ಕುಡಿಯುವ ನೀರಿಗೆ ಹೊರತು ಪಡಿಸಿ ಬೇರೆಡೆ ಪೋಲಾಗದ ಹಾಗೆ ನೋಡಿಕೊಳ್ಳಬೇಕು.

Tap to resize

Latest Videos

undefined

ಗ್ಯಾರಂಟಿ ವಿಚಾರದಲ್ಲಿ ಬಿಜೆಪಿಗೆ ಹೊಟ್ಟೆಯುರಿ: ವಿಪಕ್ಷದ ವಿರುದ್ದ ಕಿಡಿಕಾರಿದ ಸಿಎಂ ಸಿದ್ದು, ಡಿಸಿಎಂ ಡಿಕೆಶಿ

ಗದಗ ಜಿಲ್ಲೆಯಲ್ಲಿ ಈವರೆಗೆ ಟ್ಯಾಂಕರ್ ನೀರು ಪೂರೈಕೆ ಮಾಡುವಷ್ಟರ ಮಟ್ಟಿಗೆ ಪರಿಸ್ಥಿತಿ ಬಂದಿಲ್ಲ. ಗದಗ-ಬೆಟಗೇರಿ ಅವಳಿ ನಗರದಲ್ಲಿ ಕೆಲವು ಪ್ರದೇಶಗಳಲ್ಲಿ ನೀರಿನ ಸಮಸ್ಯೆ ಕಂಡು ಬಂದಿರುವ ಮಾಹಿತಿ ಬಂದಿದ್ದು, ಸಹಾಯವಾಣಿ ತೆರೆದು ನೀರಿನ ಸಮಸ್ಯೆ ಇರುವ ಪ್ರದೇಶಗಳಲ್ಲಿ ತಕ್ಷಣ ಟ್ಯಾಂಕರ್ ನೀರು ಪೂರೈಕೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬೋರ್‌ವೆಲ್ ಅವಶ್ಯವಿದೆ ಎನಿಸಿದರೆ ಕೂಡಲೇ ಅಂತಹ ಸ್ಥಳಗಳಲ್ಲಿ ಕೊಳವೆಬಾವಿ ಕೊರೆಸಲು ಸೂಚನೆ ನೀಡಲಾಗಿದೆ‌ ಎಂದರು. 

ಶುದ್ಧ ಕುಡಿಯುವ ನೀರಿನ ಕೆಲವು ಘಟಕಗಳು ಬಂದ್ ಆಗಿರುವ ಕುರಿತು ಮಾಹಿತಿ ಬಂದಿದ್ದು, ಪ್ರತಿ ತಾಲೂಕಿನ ಇಬ್ಬರು ಅಧಿಕಾರಿಗಳಂತೆ ಎಲ್ಲ ತಾಲೂಕುಗಳಲ್ಲಿನ ಒಟ್ಟು ಎಷ್ಟು ಶುದ್ಧ ಕುಡಿಯುವ ನೀರಿನ ಘಟಕಗಳು ಬಂದ್ ಆಗಿವೆ ಎಂಬುದರ ಕುರಿತು ಹತ್ತು ದಿನದೊಳಗಾಗಿ ವರದಿ ತರಿಸಿಕೊಂಡು, ದುರಸ್ತಿಗೊಳಿಸಿ, ನೀರಿನ ಸಮಸ್ಯೆ ಪರಿಹರಿಸುವ ಮೂಲಕ ಸಾರ್ವಜನಿಕರ ಬಳಕೆಗೆ ಕಲ್ಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು. ಜಿಲ್ಲೆಯಲ್ಲಿ 2023ರ ಅಕ್ಟೋಬರ್ ತಿಂಗಳಿನಲ್ಲಿ 6.83 ಮೀಟರ್ ಅಂತರ್ಜಲ ಮಟ್ಟವಿತ್ತು. ಫೆಬ್ರವರಿ ಅಂತ್ಯದಲ್ಲಿ 13.08 ಮೀಟರ್ ಕೆಳಗಿಳಿದಿದೆ. 

ತಾಲೂಕುವಾರು ನೋಡುವುದಾದರೆ ಮುಂಡರಗಿ 6.90, ಗದಗ 9.53, ನರಗುಂದ 11.83, ರೋಣ 13.25, ಗಜೇಂದ್ರಗಡ 21.0, ಲಕ್ಷ್ಮೇಶ್ವರ 16.73, ಶಿರಹಟ್ಟಿ 12.8 ಮೀಟರ್‌ನಷ್ಟು ಕೆಳಗಿದೆ. ಆದ್ದರಿಂದ ಸಾರ್ವಜನಿಕರು ನೀರನ್ನು ಬಹಳ ಜಾಗೃತಿಯಿಂದ ಬಳಸಬೇಕು ಎಂದು ಮನವಿ ಮಾಡಿದರು. ಬರಗಾಲದಿಂದಾಗಿ ಮೇವು ಸಿಗದೆ ರೈತರು ಸಂಕಷ್ಟ ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮೇವು ಬ್ಯಾಂಕ್ ಸ್ಥಾಪನೆಗೆ ಮುಂದಾಗಿದೆ. ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ 5 ಗ್ರಾಪಂ ವ್ಯಾಪ್ತಿಯಲ್ಲಿ ಮೇವು ಬ್ಯಾಂಕ್ ತೆರೆಯಲಾಗುತ್ತಿದ್ದು, 4-5 ಟ್ರಕ್ ಲೋಡ್ ಮೇವು ಶೇಖರಣೆ ಮಾಡಲು ಸೂಚಿಸಲಾಗಿದೆ ಎಂದರು.

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಅಗತ್ಯ ಬಿದ್ದರೆ ಮಾತ್ರ ಎನ್‌ಐಎ ತನಿಖೆಗೆ: ಸಿಎಂ ಸಿದ್ದರಾಮಯ್ಯ

ಕ್ರಿಟಿಕಲ್ ಕೇರ್ ಬ್ಲಾಕ್ ಮಂಜೂರು ಜಿಮ್ಸ್ ಆವರಣದಲ್ಲಿ ಕ್ರಿಟಿಕಲ್ ಕೇರ್ ಬ್ಲಾಕ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದ್ದು, 21.25 ಕೋಟಿ ಮೊತ್ತದ ಅನುದಾನದಲ್ಲಿ ಅದಕ್ಕೆ ಬೇಕಾಗಿರುವ ಮೋಟರೈಸ್ಡ್ ಐಸಿಯು ಬೆಡ್, ಎಮರ್ಜೆನ್ಸಿ ಬ್ಲಾಕ್, ಡಯಾಲಿಸಿಸ್ ರೂಮ್, ಆಪರೇಷನ್ ಥಿಯೇಟರ್, 24 ಬೆಡೆಡ್ ವಾರ್ಡ್ ತೆರೆಯಲು ಮಂಜೂರಾತಿ ದೊರೆತಿದ್ದು, ಕೂಡಲೇ ಟೆಂಡರ್ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಚಿವ ಎಚ್.ಕೆ. ಪಾಟೀಲ ಅವರು ವಿವರಿಸಿದರು.

click me!