KR ಪೇಟೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಯಾರು?

Published : Sep 22, 2019, 11:45 AM IST
KR ಪೇಟೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಯಾರು?

ಸಾರಾಂಶ

ಈಗಾಗಲೇ ರಾಜ್ಯದ 15 ಕ್ಷೇತ್ರಗಳ ಉಪ ಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇದೀಗ ಎಲ್ಲಾ ಪಕ್ಷಗಳಲ್ಲಿಯೂ ಅಭ್ಯರ್ಥಿ ಆಯ್ಕೆ ಕಸರತ್ತು ನಡೆದಿದೆ. 

ಮಂಡ್ಯ [ಸೆ.22]: ಈಗಾಗಲೇ ರಾಜ್ಯದಲ್ಲಿ 15 ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದೆ. ಹಲವು ಪಕ್ಷಗಳಲ್ಲಿ ಈಗಾಗಲೇ ಅಭ್ಯರ್ಥಿ ಆಯ್ಕೆಗೆ ಕಸರತ್ತು ನಡೆದಿದೆ. ಇದೇ ವೇಳೆ ಮಂಡ್ಯದ ಕೆ.ಆರ್ ಪೇಟೆ ಕ್ಷೇತ್ರಕ್ಕೆ ಅನರ್ಹ ಶಾಸಕರ ಪತ್ನಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆ ಇದೆ.

ಕೆ ಆರ್ ಪೇಟೆ ಕ್ಷೇತ್ರದ ಅನರ್ಹ ಶಾಸಕ ನಾರಾಯಣಗೌಡ ಅವರ ಪತ್ನಿ ದೇವಕಿ ನಾರಾಯಣ ಗೌಡ ಬಿಜೆಪಿಯಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ.

ಸದ್ಯ ಅನರ್ಹ ಶಾಸಕರ ವಿಚಾರವು ಸುಪ್ರೀಂಕೋರ್ಟಲ್ಲಿ ಇದ್ದು, ಈ ಬಗ್ಗೆ ಯಾವುದೇ ಅಂತಿಮ ತೀರ್ಪು ಹೊರ ಬಿದ್ದಿಲ್ಲ. ಒಂದು ವೇಳೆ ಚುನಾವಣೆ ಒಳಗೆ ಪ್ರಕರಣ ಇತ್ಯರ್ಥವಾದಲ್ಲಿ ಬಿಜೆಪಿಯಿಂದ ನಾರಾಯಣ ಗೌಡ ಸ್ಪರ್ಧೆ ಮಾಡಲಿದ್ದು, ತೀರ್ಪು ಬಾರದಿದ್ದಲ್ಲಿ  ದೇವಕಿ ಅವರಿಗೆ ಟಿಕೆಟ್ ಲಭ್ಯವಾಗಲಿದೆ ಎನ್ನಲಾಗುತ್ತಿದೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಚುನಾವಣೆ ಘೋಷಣೆ ಬೆನ್ನಲ್ಲೇ ಈ ಬಗ್ಗೆ ನಾಯಕರು ಒಂದು ಸುತ್ತಿನ ಮಾತುಕತೆ ನಡೆಸಿದ್ದು, ಶಿಘ್ರ ಅಭ್ಯರ್ಥಿ ಅಂತಿಮ ಮಾಡಲಿದ್ದಾರೆ.

ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ಚುನಾವಣೆ ನಡೆಯಲಿದ್ದು, ಅ.24ಕ್ಕೆ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.

PREV
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!