ಬೆಂಗಳೂರು ನಗರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದವರ ವಿರುದ್ಧ ಯಾವ ಕ್ರಮ ಜರುಗಿಸಲಾಗುತ್ತಿದೆ
ಬೆಂಗಳೂರು (ಅ.07): ಬೆಂಗಳೂರು ನಗರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸದವರ ವಿರುದ್ಧ ಯಾವ ಕ್ರಮ ಜರುಗಿಸಲಾಗುತ್ತಿದೆ ಎಂಬ ಬಗ್ಗೆ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಕೋವಿಡ್-19 ಮಾರ್ಗಸೂಚಿಗಳನ್ನು ಸರ್ಕಾರ ಕಟ್ಟುನಿಟ್ಟಾಗಿ ಜಾರಿ ಮಾಡುತ್ತಿಲ್ಲ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಈ ಸೂಚನೆ ನೀಡಿತು.
ಅರ್ಜಿದಾರರ ಪರ ವಕೀಲರು, ಕೋವಿಡ್-19 ಮಾರ್ಗಸೂಚಿಗಳನ್ನು ರಾಜ್ಯ ಸರ್ಕಾರ ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುತ್ತಿಲ್ಲ. ಇದರಿಂದ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಲು ಕಾರಣವಾಗುತ್ತಿದೆ ಎಂದು ನ್ಯಾಯಪೀಠದ ಗಮನಕ್ಕೆ ತಂದರು.