ಹಾಸನ: ಮನೆ ಮುಂದೆ ಜಾನುವಾರು ಕಟ್ಟುವಾಗ ಕಾಡಾನೆ ದಾಳಿ! ಸೊಂಡಿಲಿನಿಂದ ಎತ್ತಿ ಬಿಸಾಡಿದ ಸಲಗ, ರೈತ ಗಂಭೀರ ಗಾಯ!

Published : Jul 09, 2026, 02:48 PM IST
Hassan wildlife attack

ಸಾರಾಂಶ

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ, ಮನೆಯ ಮುಂದೆ ಜಾನುವಾರು ಕಟ್ಟುತ್ತಿದ್ದ ಸಿದ್ದಶೆಟ್ಟಿ ಎಂಬ ರೈತನ ಮೇಲೆ ಒಂಟಿ ಸಲಗ ಏಕಾಏಕಿ ದಾಳಿ ನಡೆಸಿದೆ. ಆನೆಯು ಸೊಂಡಿಲಿನಿಂದ ಎತ್ತಿ ಬಿಸಾಡಿದ್ದರಿಂದ ತೀವ್ರವಾಗಿ ಗಾಯಗೊಂಡ ರೈತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾಸನ (ಜು.9): ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ದಾಳಿ ಹೆಚ್ಚುತ್ತಿದ್ದು ರೈತರು, ಕಾರ್ಮಿಕರು ಕೃಷಿ ಕೆಲಸಕ್ಕೆ ಹೋಗದ ಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ತಡರಾತ್ರಿ ವಿದ್ಯುತ್ ದುರಸ್ತಿ ಕಾರ್ಯ ಮುಗಿಸಿ ವಾಪಸ್ ಆಗುತ್ತಿದ್ದ ಚೆಸ್ಕಾಂ ಸಿಬ್ಬಂದಿ ವಾಹನದ ಮೇಲೆ ಕಾಡಾನೆ ದಾಳಿಗೆ ಯತ್ನಿಸಿದ ಬೆನ್ನಲ್ಲೇ ಇದೀಗ ಜಾನುವಾರುಗಳನ್ನು ಕಟ್ಟುತ್ತಿದ್ದ ವೇಳೆ ರೈತನ ಮೇಲೆ ದಾಳಿ ನಡೆಸಿದ ಘಟನೆ ಬೇಲೂರು ತಾಲೂಕಿನ ಕಣಗುಪ್ಪೆ ಗ್ರಾಮದಲ್ಲಿ ನಡೆದಿದೆ.

ಜಾನುವಾರು ಕಟ್ಟುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ!

ರೈತ ಸಿದ್ದಶೆಟ್ಟಿ ಎಂಬುವವರು ಮನೆಯ ಮುಂದಿನ ಜಾನುವಾರುಗಳನ್ನು ಕಟ್ಟುತ್ತಿದ್ದರು. ಈ ವೇಳೆ ಏಕಾಏಕಿ ದಾಳಿ ನಡೆಸಿದ ಒಂಟಿ ಸಲಗ, ರೈತ ಸಿದ್ಧಶೆಟ್ಟಿ(65) ತಪ್ಪಿಸಿಕೊಳ್ಳಲು ಅವಕಾಶ ಕೊಡದೆ ಸೊಂಡಿಲಿನಿಂದ ಎತ್ತಿ ಬಿಸಾಡಿದೆ. ಆನೆಯ ಅನಿರೀಕ್ಷಿತ ದಾಳಿಯಿಂದಾಗಿ ತೀವ್ರ ಗಾಯಗೊಂಡಿರುವ ರೈತ ಸಿದ್ಧಶೆಟ್ಟಿ ಅವರಿಗೆ ಬೇಲೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು ಪರಿಶೀಲನೆ ನಡೆಸಿ, ಗಾಯಾಳುವಿನ ಆರೋಗ್ಯ ವಿಚಾರಿಸಿದ್ದಾರೆ.

ಮಳೆಗಾಲದಲ್ಲಿ ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಿದೆ. ಅಧಿಕಾರಿಗಳು ನಾಗರಿಕರು ಓಡಾಡಲು ಸುರಕ್ಷಿತ ಕ್ರಮ ಕೈಗೊಳ್ಳುವಂತೆ ನಾಗರಿರು ಆಗ್ರಹಿಸಿದ್ದಾರೆ.

PREV
Read more Articles on
click me!

Recommended Stories

ಎತ್ತಿಗೆ ಜ್ವರ ಬಂದ್ರೆ ಎಮ್ಮೆಗೆ ಬರೆ ಹಾಕಿದ್ರಂತೆ; Rapido ಬುಕ್‌ ಮಾಡಿದ್ದು ಆ ವ್ಯಕ್ತಿ! ದಂಡ ತೆತ್ತಿದ್ದು ಮಾತ್ರ ಡ್ರೈವರ್‌
ಬೆಂಗಳೂರು ಮೂಲಸೌಕರ್ಯಕ್ಕೆ ₹1.5 ಲಕ್ಷ ಕೋಟಿ: ಮೆಟ್ರೋ ಜಾಲ 500 ಕಿ.ಮೀ.ಗೆ ವಿಸ್ತರಣೆ ಗುರಿ, ಎಐ ವಿವಿ ಸ್ಥಾಪನೆ!