ಶಿರಾವನ್ನು ಮಾದರಿ ನಗರವನ್ನಾಗಿಸುವೆ: ಶಾಸಕ ರಾಜೇಶ್‌ ಗೌಡ

By Kannadaprabha News  |  First Published Mar 11, 2023, 4:56 AM IST

ಶಿರಾ ನಗರವನ್ನು ರಾಜ್ಯದಲ್ಲಿಯೇ ಮಾದರಿ ನಗರವನ್ನಾಗಿ ಮಾಡುವುದಾಗಿ ಉಪಚುನಾವಣೆಯಲ್ಲಿ ಕೊಟ್ಟಮಾತಿನಂತೆ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ಸುಮಾರು 25.50 ಕೋಟಿ ರು. ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ ಹೇಳಿದರು.


ಶಿರಾ : ಶಿರಾ ನಗರವನ್ನು ರಾಜ್ಯದಲ್ಲಿಯೇ ಮಾದರಿ ನಗರವನ್ನಾಗಿ ಮಾಡುವುದಾಗಿ ಉಪಚುನಾವಣೆಯಲ್ಲಿ ಕೊಟ್ಟಮಾತಿನಂತೆ ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ಸುಮಾರು 25.50 ಕೋಟಿ ರು. ಗಳ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ ಹೇಳಿದರು.

ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ಸುಮಾರು 17.50 ಕೋಟಿ ರು. ವೆಚ್ಚದಲ್ಲಿ ನಗರದ ಎಲ್ಲಾ 31 ವಾರ್ಡುಗಳಲ್ಲೂ ರಸ್ತೆ ಮತ್ತು ಒಳಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಅಮೃತ ನಗರೋತ್ಥಾನ ಯೋಜನೆಯಡಿಯಲ್ಲಿ ಅನುದಾನ ಮಂಜೂರಾತಿಗೆ ಗಳಲ್ಲಿ ಮನವಿ ಮಾಡಲಾಗಿತ್ತು. ಮುಖ್ಯಮಂತ್ರಿಗಳು ಶಿರಾ ಹಾಗೂ ತಿಪಟೂರು ತಾಲೂಕುಗಳಿಗೆ ಸುಮಾರು 25.50 ಕೋಟಿ ರು. ಗಳ ಅನುದಾನ ಮಂಜೂರು ಮಾಡಿದ್ದಾರೆ. ಈ ಅನುದಾನದಲ್ಲಿ ಸುಮಾರು 17.50 ಕೋಟಿ ರು.ಗಳನ್ನು ರಸ್ತೆ ಹಾಗೂ ಚರಂಡಿ ಕಾಮಗಾರಿಗೆ, ಸುಮಾರು 3.50 ಕೋಟಿ ರು.ಗಳನ್ನು ನಗರದ ಖಾಸಗಿ ಅಭಿವೃದ್ಧಿಪಡಿಸಲು ವಿನಿಯೋಗಿಸಲಾಗುವುದು. ಉಳಿದ ಅನುದಾನವನ್ನು ನಗರದ ಮೂಲಭೂತ ಸೌಲಭ್ಯಗಳಿಗೆ ಉಪಯೋಗಿಸಲಾಗುವುದು ಎಂದ ಅವರು ಶಿರಾ ನಗರದ ಜನರು ಕೇವಲ ಗ್ರಾಮೀಣ ಭಾಗದಲ್ಲಿ ಅಭಿವೃದ್ಧಿ ಕಾರ್ಯ ಆಗುತ್ತಿವೆ, ನಗರ ಭಾಗದಲ್ಲಿ ಅಭಿವೃದ್ಧಿ ಆಗುತ್ತಿಲ್ಲ ಎಂಬ ಆರೋಪ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇಂದು ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲೂ ಸಹ ಜನರ ಮೂಲಭೂತ ಅಗತ್ಯಗಳನ್ನು ಪೂರೈಸಲು ಬದ್ಧನಿದ್ದೇನೆ ಎಂದರು.

Tap to resize

Latest Videos

ನಗರಸಭೆ ಅಧ್ಯಕ್ಷ ಬಿ.ಅಂಜಿನಪ್ಪ ಮಾತನಾಡಿ, ನಗರೋತ್ಥಾನ ನಾಲ್ಕನೇ ಹಂತದಲ್ಲಿ ಸುಮಾರು 25.50 ಕೋಟಿ ಹಣ ಬಿಡುಗಡೆಯಾಗಿದ್ದು ನಗರದ ಎಲ್ಲಾ 31 ವಾರ್ಡುಗಳಿಗೂ ಸಹ ವಿವಿಧ ರಸ್ತೆ ಹಾಗೂ ಚರಂಡಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಅಂಬುಜ ನಟರಾಜ್‌, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್‌.ಎಲ್‌.ರಂಗನಾಥ್‌, ನಗರಸಭೆ ಸದಸ್ಯರಾದ ಶಂಕರಪ್ಪ, ಗಿರಿಜ ವಿಜಯ್‌ಕುಮಾರ್‌, ಪೂಜಾ ಪೆದ್ದರಾಜು, ತೇಜು.ಎಲ್‌. ಬಾನುಪ್ರಕಾಶ್‌, ಉಮಾ ವಿಜಯರಾಜ್‌, ಅಜಯ್‌ಕುಮಾರ್‌, ಸ್ವಾತಿ ಮಂಜೇಶ್‌, ಮುಖಂಡರಾದ ವಿಜಯ್‌ಕುಮಾರ್‌, ರೂಪೇಶ್‌ ಕೃಷ್ಣಯ್ಯ, ಹನುಮಂತನಾಯ್ಕ, ಲೋಕೇಶ್‌ ಸೇರಿದಂತೆ ಹಲವರು ಹಾಜರಿದ್ದರು.

ಖಾಸಗಿ ಬಸ್‌ ನಿಲ್ದಾಣ ಅಭಿವೃದ್ಧಿಗೆæ 3.50 ಕೋಟಿ

ಶಿರಾ ನಗರವನ್ನು ಸ್ವಚ್ಛ, ಸುಂದರ ನಗರವನ್ನಾಗಿಸಲು ಬೇಕಾದ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ನಗರದ ಅಂಬೇಡ್ಕರ್‌ ಸರ್ಕಲ್‌ ಹಾಗೂ ದರ್ಗಾ ಸರ್ಕಲ್‌ನಲ್ಲಿ ಕಾರಂಜಿಗಳನ್ನು ನಿರ್ಮಾಣ ಮಾಡಲಾಗಿದೆ. ನಗರದ ಜನರ ಬಹು ದಿನಗಳ ಬೇಡಿಕೆಯಾದ ಖಾಸಗಿ ಬಸ್‌ ನಿಲ್ದಾಣ ಅಭಿವೃದ್ಧಿಪಡಿಸಲು ಸುಮಾರು 3.50 ಕೋಟಿ ರು. ವಿನಿಯೋಗಿಸಲಾಗುವುದು. ಈಗಾಗಲೇ ಟೆಂಡರ್‌ ಪ್ರಕ್ರಿಯೆ ನಡೆಯುತ್ತಿದ್ದು ಶೀಘ್ರ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಒಟ್ಟಾರೆ ನಗರದ ಸುಂದರೀಕರಣ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ ಹೇಳಿದರು.

10ಶಿರಾ3: ಶಿರಾ ನಗರದ 7ನೇ ವಾರ್ಡ್‌ನಲ್ಲಿ ರಸ್ತೆ ಕಾಮಗಾರಿಗೆ ಶಾಸಕ ಡಾ.ಸಿ.ಎಂ.ರಾಜೇಶ್‌ ಗೌಡ ಭೂಮಿ ಪೂಜೆ ನೆರವೇರಿಸಿದರು. ನಗರಸಭೆ ಅಧ್ಯಕ್ಷ ಬಿ.ಅಂಜಿನಪ್ಪ, ಉಪಾಧ್ಯಕ್ಷೆ ಅಂಬುಜ ನಟರಾಜ್‌, ಸ್ಥಾಯಿ ಸಮಿತಿ ಅಧ್ಯಕ್ಷ ಎಸ್‌.ಎಲ್‌.ರಂಗನಾಥ್‌, ನಗರಸಭೆ ಸದಸ್ಯರಾದ ಶಂಕರಪ್ಪ, ಗಿರಿಜ ವಿಜಯ್‌ಕುಮಾರ್‌ ಸೇರಿದಂತೆ ಹಲವರು ಹಾಜರಿದ್ದರು.

click me!