ಇದು ನನ್ನ ಕೊನೆ ಚುನಾವಣೆ, ಮತ್ತೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.
ಮಧುಗಿರಿ : ಇದು ನನ್ನ ಕೊನೆ ಚುನಾವಣೆ, ಮತ್ತೆ ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.
ಭಾನುವಾರ ಸಂಜೆ ತಾಲೂಕಿನ ಕಸಬಾ ಹೋಬಳಿ ತವಕದಹಳ್ಳಿಯಲ್ಲಿ ನಡೆದ ಅಭಿಮಾನೋತ್ಸವ ಕಾರ್ಯಕ್ರಮದಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದರು.
undefined
ಬರುವ ಅಸೆಂಬ್ಲಿ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 200 ಯೂನಿಟ್ ಉಚಿತ ವಿದ್ಯುತ್, ಮನೆಯ ಯಜಮಾನಿಗೆ 2000 ಹಣ ನೀಡುವುದು, ಪ್ರತಿ ತಿಂಗಳು 10 ಕೆಜಿ ಅಕ್ಕಿ ನೀಡುವುದು ನಮ್ಮ ಪ್ರಣಾಳಿಕೆಯಲ್ಲಿ ಸೇರಿದ್ದು ಈ ಕಾರ್ಯವನ್ನು ಕಾರ್ಯಕರ್ತರು ಪ್ರತಿಯೊಬ್ಬರಿಗೂ ಮನವರಿಕೆ ಮಾಡಿಕೊಡುವಂತೆ ಮನವಿ ಮಾಡಿದರು.
ತಾಲೂಕಿನಲ್ಲಿ ಡಿಸಿಸಿ ಬ್ಯಾಂಕ್‌ನಿಂದ 25000 ಕುಟುಂಬಗಳಿಗೆ ಸಾಲ ನೀಡಲಾಗಿದೆ. 2013-18ರ ಅವಧಿಯಲ್ಲಿ ಗುಡಿಸಲು ಮುಕ್ತ ಕ್ಷೇತ್ರ ಮಾಡುವ ಉದ್ದೇಶದಿಂದ 16400 ಮನೆಗಳನ್ನು ನಿರ್ಮಿಸಲಾಗಿದೆ. ಪ್ರತಿ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನ, ಪ್ರತಿಯೊಬ್ಬರಿಗೂ ವೃದ್ಧಾಪ್ಯ ವೇತನ, ಬಿಪಿಎಲ್ ಕಾರ್ಡುಗಳನ್ನು ನೀಡಲಾಗಿದೆ. ನನ್ನ ಐದು ವಷÜರ್‍ಗಳ ಅವಧಿಯಲ್ಲಿ ಜನಪರ ಕೆಲಸ ಮಾಡಲಾಗಿದೆ. ಮುಂದೆ ಶಾಸಕರಾಗಿ ಆಯ್ಕೆಯಾದರೆ ಮಧುಗಿರಿಯನ್ನು ಜಿಲ್ಲಾಕೇಂದ್ರವನ್ನಾಗಿ ಮಾಡುವುದು, ತಾಲೂಕಿನ 54 ಕೆರೆಗಳಿಗೆ ನೀರು ತುಂಬಿಸುವುದು, ತುಮಕೂರು - ರಾಯದುರ್ಗ ರೈಲ್ವೆ ಯೋಜನೆಗೆ ಚಾಲನೆ ನೀಡುವುದು ನನ್ನ ಮೊದಲ ಆದ್ಯತೆ. ಜನತೆ ನನ್ನ ಮೇಲಿನ ಅಪಪ್ರಚಾರಗಳಿಗೆ ಕಿಗೊಡದೇ ಆಸೆ, ಆಮಿಷಗಳಿಗೆ ಬಲಿಯಾಗದೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ನಿಟ್ಟಿನಲ್ಲಿ ನನಗೆ ತಮ್ಮ ಅಮೂಲ್ಯವಾದ ಮತ ನೀಡಿ ತಮ್ಮ ಸೇವೆ ಮಾಡಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದರು.
ಡಿಸಿಸಿ ಬ್ಯಾಂಕ್ ನಿರ್ದಶಕ.ಬಿ.ನಾಗೇಶಬಾಬು ಮಾತನಾಡಿ, ಮತದಾರರು ಯಾವುದೆ ಆಸೆ, ಆಮಿಷಗಳಿಗೆ ಬಲಿಯಾಗದೆ ಮಧುಗಿರಿ ಅಭಿವೃದ್ಧಿ ದೃಷ್ಟಿಯಿಂದ ಕೆ.ಎನ್.ರಾಜಣ್ಣರನ್ನು ಕೈ ಬಲಪಡಿಸಬೇಕಾಗಿದೆ ಎಂದರು.
ಗ್ರಾಮದ ಮುಖಂಡರಾದ ಪಟೇಲ್ ಲಕ್ಷ್ಮೀನರಸೇಗೌಡ, ಸಹಕಾರ ಮಹಾಮಂಡಲದ ಮಾಜಿ ಅಧ್ಯಕ್ಷ ಎನ್.ಗಂಗಣ್ಣ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಎಂ.ಬಿ.ಮರಿಯಣ್ಣ, ಪಿಎಲ್‌ಡಿ ಬ್ಯಾಂಕ್ ನಿರ್ದೇಶಕ ಲಕ್ಷ್ಮೀಕಾಂತ, ವಿಎಸ್‌ಎಸ್‌ಎನ್ ಅಧ್ಯಕ್ಷ ಸಿದ್ದಾಪುರ ವೀರಣ್ಣ, ಗ್ರಾ.ಪಂ ಉಪಾಧ್ಯಕ್ಷೆ ಗೌರಮ್ಮ, ಮಾಜಿ ಅಧ್ಯಕ್ಷೆ ಭವ್ಯಕೇಶವಮೂರ್ತಿ, ಸದಸ್ಯರಾದ. ಬಿ.ಎನ್ ನಾಗಭೂಷಣ, ಅಮರಾವತಿ, ದಾಸೇಗೌಡ, ವೀರೇಶ್, ಮುಖಂಡರಾದ, ರಂಗರಾಜು, ರಘು, ನಾರಾಯಣಪ್ಪ, ಯುವ ಕಾಂಗ್ರೆಸ್ ಉಪಾಧ್ಯಕ್ಷ ಬಂದ್ರೆಹಳ್ಳಿ ನಾಗಾರ್ಜುನ, ರಾಮಕೃಷ್ಣಯ್ಯ, ಟಿ.ಪಿ.ಪಾಪಣ್ಣ, ಗೋವಿಂದರೆಡ್ಡಿ, ಸಿದ್ದರಾಜು, ಟಿ.ಆರ್.ರಾಮಣ್ಣ ಮುಸುರಪ್ಪ, ಗೌರಮ್ಮ, ವೆಂಕಟಾಚಲ ಪ್ಪ, ದೊಡ್ಡಯ್ಯ, ರಂಗಪ್ಪ, ರೇವಣ್ಣ, ರಮೇಶ್, ಕಂಬಣ್ಣ, ರಕೀದ್ ಸಾಬ್ ಮುಖಂಡರು, ಕಾರ್ಯಕರ್ತರು ಅಭಿಮಾನಿಗಳು ಹಾಜರಿದ್ದರು.