ಮಹಿಳಾ ಕಾಂಗ್ರೆಸ್‌ನಿಂದ ‘ಗೆಲುವಿನ ತಂತ್ರ’ ಚುನಾವಣಾ ಪ್ರಚಾರ

By Kannadaprabha News  |  First Published Mar 24, 2023, 6:29 AM IST

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ ಕಾಂಗ್ರೆಸ್‌ ಸಕ್ರಿಯವಾಗಿ ಪಾಲ್ಗೊಳ್ಳುವ ಉದ್ದೇಶದಿಂದ ಗೆಲುವಿನ ತಂತ್ರ ಹೆಸರಿನಲ್ಲಿ ಮಾ.25 ಮತ್ತು 26 ರಂದು ನಗರದ ಆಲಿವ್‌ ಗಾರ್ಡನ್‌ ಸಭಾಂಗಣದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್‌ ಪದಾಧಿಕಾರಿಗಳ ಚರ್ಚಾ ಸಭೆ ಏರ್ಪಡಿಸಲಾಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾವತಿ ಅಮರನಾಥ್‌ ತಿಳಿಸಿದರು.


  ಮೈಸೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮಹಿಳಾ ಕಾಂಗ್ರೆಸ್‌ ಸಕ್ರಿಯವಾಗಿ ಪಾಲ್ಗೊಳ್ಳುವ ಉದ್ದೇಶದಿಂದ ಗೆಲುವಿನ ತಂತ್ರ ಹೆಸರಿನಲ್ಲಿ ಮಾ.25 ಮತ್ತು 26 ರಂದು ನಗರದ ಆಲಿವ್‌ ಗಾರ್ಡನ್‌ ಸಭಾಂಗಣದಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್‌ ಪದಾಧಿಕಾರಿಗಳ ಚರ್ಚಾ ಸಭೆ ಏರ್ಪಡಿಸಲಾಗಿದೆ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾವತಿ ಅಮರನಾಥ್‌ ತಿಳಿಸಿದರು.

ರಾಷ್ಟ್ರೀಯ ಮಹಿಳಾ ಅಧ್ಯಕ್ಷ ನೆಟ್ಟಾಡಿಸೋಜಾ ಮಾ. 25 ರಂದು ಬೆಳಗ್ಗೆ 10.30ಕ್ಕೆ ಕಾರ್ಯಕ್ರಮ ಉದ್ಘಾಟಿಸುವರು. ಸಭೆಯಲ್ಲಿ ರಾಜ್ಯದ 200ಕ್ಕೂ ಹೆಚ್ಚು ಮಹಿಳಾ ಪದಾಧಿಕಾರಿಗಳು, 36 ಸಂಘಟನಾ ಜಿಲ್ಲಾ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದು, ಪಕ್ಷದ ಹಿರಿಯ ನಾಯಕರು ಆಗಮಿಸಿ ಮಾರ್ಗದರ್ಶನ ನೀಡುವರು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

Latest Videos

undefined

ಈಗಾಗಲೇ ಪಕ್ಷ ಮಾಧ್ಯಮ, ಸಾಮಾಜಿಕ ಜಾಲ ತಾಣಗಳಲ್ಲಿ ಸಮರ್ಪಕವಾಗಿ ಪ್ರಚಾರ ಕಾರ್ಯ ಕೈಗೊಂಡಿದೆ. ಅಧಿಕಾರಕ್ಕೆ ಬಂದ ದಿನದಿಂದ ಯಾವ ಭರವಸೆ ಈಡೇರಿಸಲಾಗುವುದು ಎಂಬುದನ್ನು ಘೋಷಿಸಿಯೂ ಆಗಿದೆ. ಪ್ರತಿ ಕುಟುಂಬಕ್ಕೆ 200 ಯೂನಿಟ್‌ ಉಚಿತ ವಿದ್ಯುತ್‌, ಗೃಹಲಕ್ಷ್ಮೀ ಯೋಜನೆ ಅಡಿ ಮನೆಯ ಯಜಮಾನಿಗೆ . 2 ಸಾವಿರ ಮಾಸಿಕ ನೀಡಿಕೆ, ಅನ್ನಭಾಗ್ಯ ಅಡಿ 10 ಕೆಜಿ ಅಕ್ಕಿ, ಪದವಿ ನಿರುದ್ಯೋಗಿಗಳಿಗೆ ಮೂರು ಸಾವಿರ ಮಾಸಿಕ, ಡಿಪ್ಲೊಮಾ ನಿರುದ್ಯೋಗಿಗಳಿಗೆ ಮಾಸಿಕ . 1500 ಎರಡು ವರ್ಷ ನೀಡಲಾಗುವುದು ಎಂದರು.

ಇನ್ನು, ಬಿಜೆಪಿ ಕೇವಲ ಸುಳ್ಳನ್ನೇ ಹೇಳುತ್ತಿದೆ. ಕಳೆದ ವೇಳೆ ನೀಡಿದ್ದ ಪ್ರಣಾಳಿಕೆಯ ಭರವಸೆಯನ್ನು ಈಡೇರಿಸಿಲ್ಲ. ಆದರೆ ಕಾಂಗ್ರೆಸ್‌ ಈ ಹಿಂದೆ ನುಡಿದಂತೆ ನಡೆದಿದೆ. ಈ ಎಲ್ಲ ವಿಷಯ ಮನವರಿಕೆ ಮಾಡಿಕೊಡಲಾಗುವುದು. ಸಿಲಿಂಡರ್‌ ದರ ಸಾವಿರ ಮೀರಿದ್ದರೂ ಧ್ವನಿ ಎತ್ತದ ಶೋಭಾ ಕರಂದ್ಲಾಜೆ ಉರಿಗೌಡ, ನಂಜೇಗೌಡ ಎಂಬ ಸುಳ್ಳಿನ ಹಿಂದೆ ಬಿದ್ದಿದ್ದು, ಮತದಾರರು ಈ ಬಗ್ಗೆ ಅವರನ್ನು ಪ್ರಶ್ನಿಸಬೇಕು ಎಂದು ಲೇವಡಿಯಾಡಿದರು.

ಮಹಿಳಾ ಕಾಂಗ್ರೆಸ್‌ ನಗರ ಅಧ್ಯಕ್ಷೆ ಪುಷ್ಪಲತಾ ಚಿಕ್ಕಣ್ಣ, ಉಪಾಧ್ಯಕ್ಷೆ ಪುಷ್ಪವಲ್ಲಿ, ಜಿಲ್ಲಾಧ್ಯಕ್ಷೆ ಲತಾ ಸಿದ್ದಶೆಟ್ಟಿಇದ್ದರು.

ಕಾಂಗ್ರೆಸ್‌ ಗೆಲುವಿಗೆ ಶ್ರಮಿಸಿ

 ತುಮಕೂರು :  ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಎಐಸಿಸಿ ವತಿಯಿಂದ ನೇಮಕಗೊಂಡಿರುವ ತುಮಕೂರು ಜಿಲ್ಲೆಯ ಉಸ್ತುವಾರಿ, ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್‌ ಸಮಿತಿಯ ಕಾರ್ಯಾಧ್ಯಕ್ಷ ಹಾಗೂ ಕೇಂದ್ರದ ಮಾಜಿ ಸಚಿವ ಮೊಹಮ್ಮದ್‌ ಆರೀಫ್‌ ನಸೀಮ್‌ಖಾನ್‌ ಅವರ ನೇತೃತ್ವದಲ್ಲಿ ಜಿಲ್ಲಾ ಮುಖಂಡರ ಸಭೆ ನಡೆಸಲಾಯಿತು.

ಜಿಲ್ಲಾ ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮೊಹಮ್ಮದ್‌ ಆರೀಫ್‌ ಖಾನ್‌, ಜಿಲ್ಲೆಯಲ್ಲಿ ಕಾಂಗ್ರೆಸ್‌ ಪಕ್ಷ ಈ ಬಾರಿಯ ಚುನಾವಣೆಯಲ್ಲಿ 7-8 ಸ್ಥಾನಗಳಲ್ಲಿ ಗೆಲ್ಲಲ್ಲು ಅವಕಾಶವಿದೆ. ಜಿಲ್ಲಾ ಮುಖಂಡರು ತಮ್ಮ ನಡುವಿನ ಭಿನ್ನಮತವನ್ನು ಬದಿಗೊತ್ತಿಗೆ ಪಕ್ಷದ ಗೆಲುವಿಗಾಗಿ ದುಡಿಯಬೇಕೆಂದು ಸಲಹೆ ನೀಡಿದರು.

ಕೋಮುವಾದಿ ಬಿಜೆಪಿ ಮತ್ತು ಜಾತ್ಯತೀತ ಪಕ್ಷಗಳಾಗಿರುವ ಜೆಡಿಎಸ್‌ ಮತ್ತು ಕಾಂಗ್ರೆಸ್‌ ನಡುವೆ ಪ್ರಬಲ ಪೈಪೋಟಿ ಇದೆ. ಒಂದು ವೇಳೆ ಕಾಂಗ್ರೆಸ್‌ ಪಕ್ಷವನ್ನು ವಿರೋಧಿಸುವ ಜಾತ್ಯತೀತ ಮನಸ್ಸುಗಳು ಜೆಡಿಎಸ್‌ಗೆ ಮತ ಹಾಕಿದರೂ, ಅದು ಪರೋಕ್ಷವಾಗಿ ಬಿಜೆಪಿಗೆ ಮತ ಹಾಕಿದಂತೆ, ಹಾಗಾಗಿ ಸಾಧ್ಯವಾದಷ್ಟುದಲಿತ, ಅಲ್ಪಸಂಖ್ಯಾತ, ಹಿಂದುಳಿದ ಸಮುದಾಯಗಳ ಮತಗಳು ಜೆಡಿಎಸ್‌ ಪಕ್ಷಕ್ಕೆ ಬೀಳದಂತೆ ಎಚ್ಚರಿಕೆ ವಹಿಸಿ, ಕಾಂಗ್ರೆಸ್‌ ಪಕ್ಷ ನೀಡಿರುವ 2000 ನಗದು, 200 ಯೂನಿಟ್‌ ವಿದ್ಯುತ್‌ ಉಚಿತ ಹಾಗೂ 10 ಕೆ.ಜಿ.ಅಕ್ಕಿ ಖಚಿತ ಗ್ಯಾರಂಟಿ ಕಾರ್ಡು ಮನೆ ಮನೆಗೆ ತಲುಪಿಸಿ, ಬಡವರ ಮತಗಳು ಕಾಂಗ್ರೆಸ್‌ ಪಕ್ಷಕ್ಕೆ ಬೀಳುವಂತೆ ಮಾಡಿದರೆ ಮಾತ್ರ ಕಾಂಗ್ರೆಸ್‌ ಗೆಲ್ಲಲ್ಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲಾ ಮುಖಂಡರು ಒಗ್ಗಟ್ಟಿನಿಂದ ಹೋರಾಟ ನಡೆಸುವಂತೆ ಮೊಹಮ್ಮದ್‌ ಆರೀಫ್‌ ಖಾನ್‌ ಸೂಚನೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಚಂದ್ರಶೇಖರಗೌಡ ವಹಿಸಿದ್ದರು. ವೇದಿಕೆಯಲ್ಲಿ ಮಾಜಿ ಶಾಸಕ ಹಾಗೂ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಕೆ.ಎನ್‌.ರಾಜಣ್ಣ, ಮಾಜಿ ಶಾಸಕರಾದ ಕೆ.ಷಡಕ್ಷರಿ,ಟಿ.ಬಿ.ಜಯಚಂದ್ರ, ಎಸ್‌.ಷಪಿ ಅಹಮದ್‌, ಲಕ್ಕಪ್ಪ, ಕೆ.ಎಸ್‌.ಕಿರಣ್‌ ಕುಮಾರ್‌, ಆರ್‌.ನಾರಾಯಣ್‌, ಯುವ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಶಶಿಹುಲಿಕುಂಟೆ ಮಠ್‌, ಎಸ್ಸಿ ಘಟಕದ ಜಿಲ್ಲಾಧ್ಯಕ್ಷ ಬಿ.ಜಿ.ಲಿಂಗರಾಜು, ಮರಿಚನ್ನಮ್ಮ, ತುಮಕೂರು ಮೇಯರ್‌ ಪ್ರಭಾವತಿ ಸುಧೀಶ್ವರ್‌, ಸುಜಾತ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

click me!