ಕೋಟೆ ನಾಡಲ್ಲಿ 6 ಮಂದಿಗೆ ಕೊರೋನಾ ಪಾಸಿಟಿವ್

By Kannadaprabha News  |  First Published Jul 7, 2020, 8:51 AM IST

ಸೋಮವಾರ ಒಟ್ಟು 101 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 6 ಜನರಲ್ಲಿ ಕೋವಿಡ್‌ ದೃಢಪಟ್ಟಿದೆ. ಚಿತ್ರದುರ್ಗ ತಾಲೂಕಿನಲ್ಲಿ 1, ಚಳ್ಳಕೆರೆ-4 ಹಾಗೂ ಮೊಳಕಾಲ್ಮೂರು ತಾಲೂಕಿನಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ಇರುವುದು ದೃಢಪಟ್ಟಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ


ಚಿತ್ರದುರ್ಗ(ಜು.07): ಜಿಲ್ಲೆಯಲ್ಲಿ ಕೋವಿಡ್‌-19 ವೈರಸ್‌ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 6 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 89ಕ್ಕೆ ಏರಿಕೆಯಾದಂತಾಗಿದೆ.

ಸೋಮವಾರ ಒಟ್ಟು 101 ಜನರ ಗಂಟಲು, ಮೂಗು ದ್ರವ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, 6 ಜನರಲ್ಲಿ ಕೋವಿಡ್‌ ದೃಢಪಟ್ಟಿದೆ. ಚಿತ್ರದುರ್ಗ ತಾಲೂಕಿನಲ್ಲಿ 1, ಚಳ್ಳಕೆರೆ-4 ಹಾಗೂ ಮೊಳಕಾಲ್ಮೂರು ತಾಲೂಕಿನಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ಇರುವುದು ದೃಢಪಟ್ಟಿದೆ. ಚಿತ್ರದುರ್ಗ ತಾಲೂಕಿನಲ್ಲಿ 50 ವರ್ಷದ ಮಹಿಳೆ, ಚಳ್ಳಕೆರೆಯಲ್ಲಿ 63 ವರ್ಷದ ವೃದ್ಧ, 52 ವರ್ಷದ ಮಹಿಳೆ, 65 ವರ್ಷದ ವೃದ್ಧ, 39 ವರ್ಷದ ಪುರುಷ ಹಾಗೂ ಮೊಳಕಾಲ್ಮೂರು ತಾಲೂಕಿನಲ್ಲಿ 27 ವರ್ಷದ ಯುವಕನಿಗೆ ಕೋವಿಡ್‌ ಸೋಂಕು ಇರುವುದು ಪತ್ತೆಯಾಗಿದೆ. ಒಟ್ಟು 89 ದೃಢಪಟ್ಟಪ್ರಕರಣಗಳಲ್ಲಿ ಈಗಾಗಲೇ 54 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಸದ್ಯ 35 ಸಕ್ರಿಯ ಪ್ರಕರಣಗಳು ಜಿಲ್ಲೆಯಲ್ಲಿವೆ.

Tap to resize

Latest Videos

35 ಸಕ್ರಿಯ ಪ್ರಕರಣಗಳ ಪೈಕಿ ಚಿತ್ರದುರ್ಗದ ಕೋವಿಡ್‌ ಆಸ್ಪತ್ರೆಯಲ್ಲಿ 12, ಭರಮಸಾಗರದಲ್ಲಿ-4, ಹಿರಿಯೂರು ತಾಲೂಕು ಧರ್ಮಪುರದ ನಿಗದಿತ ಕೋವಿಡ್‌ ಹೆಲ್ತ್‌ಕೇರ್‌ ಸೆಂಟರ್‌ನಲ್ಲಿ 10, ಚಳ್ಳಕೆರೆ ತಾಲೂಕು ನಾಯಕನಹಟ್ಟಿಯಲ್ಲಿ 1, ಪರಶುರಾಂಪುರ-02, ಮೊಳಕಾಲ್ಮೂರು ತಾಲೂಕು ರಾಂಪುರದಲ್ಲಿ 4 ಹಾಗೂ ಹೊಸದುರ್ಗ ತಾಲೂಕು ಬೆಲಗೂರಿನ ನಿಗದಿತ ಕೋವಿಡ್‌ ಹೆಲ್ತ್‌ ಕೇರ್‌ ಸೆಂಟರ್‌ನಲ್ಲಿ ಇಬ್ಬರು ಸೋಂಕಿತರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊರೋನಾ ಅಟ್ಟಹಾಸ: ರಾಜ್ಯದಲ್ಲಿ ಮತ್ತೊಂದು ಆತಂಕಕಾರಿ ಬೆಳವಣಿಗೆ!

ಸದ್ಯ ಜಿಲ್ಲೆಯಲ್ಲಿ ಒಟ್ಟು 20 ಕಂಟೈನ್ಮೆಂಟ್‌ ವಲಯಗಳಿವೆ. ಸೋಂಕಿತರಿಗೆ ಸಂಬಂಧಿಸಿದಂತೆ ಒಟ್ಟು 1619 ಜನ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕಿತರನ್ನು ಗುರುತಿಸಲಾಗಿದೆ. ಈವರೆಗೆ ಐಎಲ್‌ಐ, ಯುಆರ್‌ಐನ ಒಟ್ಟು 2373 ಜನರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಜಿಲ್ಲೆಯಲ್ಲಿ 382 ಜನ ಹೋಂ ಕ್ವಾರಂಟೈನ್‌ನಲ್ಲಿ ಹಾಗೂ ಮೂವರು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದಾರೆ. ಈವರೆಗೆ 6577 ಜನರ ಮಾದರಿ ಸಂಗ್ರಹಿಸಲಾಗಿದ್ದು, 5306 ಜನರ ವರದಿ ನೆಗೆಟಿವ್‌ ಬಂದಿದೆ, ಉಳಿದ 176 ಮಾದರಿಗಳು ಪರೀಕ್ಷೆಗೆ ಒಳಪಡಿಸುವ ಅಗತ್ಯವಿಲ್ಲದ ಕಾರಣ ತಿರಸ್ಕೃತಗೊಂಡಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಪಾಲಾಕ್ಷ ತಿಳಿಸಿದ್ದಾರೆ.

click me!