ಬೆಂಗಳೂರು ನಗರದಲ್ಲಿ ನಿತ್ಯ 3500ಕ್ಕೂ ಅಧಿಕ ಪ್ರಕರಣ ಪತ್ತೆ| 1.87 ಲಕ್ಷ ದಾಟಿದ ಪ್ರಕರಣ| ಮಹಾರಾಷ್ಟ್ರದ ಪುಣೆ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 2 ಲಕ್ಷಕ್ಕೂ ಅಧಿಕ ಸೋಂಕಿತರು ಪತ್ತೆಯಾಗುವ ಮೂಲಕ ದೇಶದ ಅತಿ ಹೆಚ್ಚು ಸೋಂಕಿತರು ಪತ್ತೆಯಾದ ಮೊದಲ ಮತ್ತು ಎರಡನೇ ಸ್ಥಾನದಲ್ಲಿವೆ|
ಬೆಂಗಳೂರು(ಸೆ.19): ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ 3,623 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1,87,705ಕ್ಕೆ ಏರಿಕೆಯಾಗಿದೆ. ಇದೇ ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾದರೆ ಒಂದು ವಾರದೊಳಗೆ ನಗರದಲ್ಲಿ ಸೋಂಕಿತರ 2 ಲಕ್ಷ ದಾಟಲಿದೆ.
ಸತತವಾಗಿ ಮೂರೂವರೆ ಸಾವಿರಕ್ಕೂ ಅಧಿಕ ಕೊರೋನಾ ಸೋಂಕಿತರು ಪತ್ತೆಯಾಗುತ್ತಿದ್ದು, ಇದೇ ಪ್ರಮಾಣದಲ್ಲಿ ಮುಂದುವರೆದರೆ ಮುಂದಿನ ಒಂದು ವಾರದಲ್ಲಿ ಬೆಂಗಳೂರಿನ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 2 ಲಕ್ಷ ದಾಟಲಿದೆ. ಈ ಮೂಲಕ ಬೆಂಗಳೂರು ಎರಡು ಲಕ್ಷ ಕೊರೋನಾ ಸೋಂಕಿತರು ಪತ್ತೆಯಾದ ದೇಶದ ಮೂರನೇ ನಗರವಾಗಲಿದೆ.
undefined
ಈಗಾಗಲೇ ಮಹಾರಾಷ್ಟ್ರದ ಪುಣೆ, ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 2 ಲಕ್ಷಕ್ಕೂ ಅಧಿಕ ಸೋಂಕಿತರು ಪತ್ತೆಯಾಗುವ ಮೂಲಕ ದೇಶದ ಅತಿ ಹೆಚ್ಚು ಸೋಂಕಿತರು ಪತ್ತೆಯಾದ ಮೊದಲ ಮತ್ತು ಎರಡನೇ ಸ್ಥಾನದಲ್ಲಿವೆ. ಶುಕ್ರವಾರ ಬೆಂಗಳೂರಿನಲ್ಲಿ ಪತ್ತೆಯಾದ 3,623 ಸೋಂಕಿತರ ಪೈಕಿ 2,265 ಪುರುಷರು, 1,356 ಮಹಿಳೆಯರು, ಇಬ್ಬರು ಲೈಂಗಿಕ ಅಲ್ಪಸಂಖ್ಯಾತರಾಗಿದ್ದಾರೆ. 2,725 ಕೊರೋನಾ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 1,43.198ಕ್ಕೆ ತಲುಪಿದೆ. ಇನ್ನೂ ನಗರದಲ್ಲಿ 41,914 ಸಕ್ರಿಯ ಪ್ರಕರಣಗಳಿವೆ. 271 ಕೊರೋನಾ ಸೋಂಕಿತರು ವಿವಿಧ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನು ಶುಕ್ರವಾರ 37 ಕೊರೋನಾ ಸೋಂಕಿತರು ಮೃತಪಟ್ಟವರದಿಯಾಗಿದೆ. ಈ ಮೂಲಕ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2,592ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.