ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭರತ್‌ನಗರ ಎರಡನೇ ಹಂತದ ನಿವಾಸಿ ವನಿತಾ (25) ಮೃತರು.
ಬೆಂಗಳೂರು(ಫೆ.15): ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಭರತ್‌ನಗರ ಎರಡನೇ ಹಂತದ ನಿವಾಸಿ ವನಿತಾ (25) ಮೃತರು.
ಆರೋಪಿ ಪತಿ ಕಿರಣ್ ಹಾಗೂ ಈತನ ಪೋಷಕರು ತಲೆಮರೆಸಿಕೊಂಡಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೂಲತಃ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ವನಿತಾ ಅವರನ್ನು ಆರೋಪಿ ಕಿರಣ್ ಒಂದು ವರ್ಷದ ಹಿಂದೆ ವಿವಾಹವಾಗಿದ್ದರು.
undefined
ಪ್ರೇಮಿಗಳ ದಿನದಂದೇ ಹಾರಂಗಿಗೆ ಹಾರಿದ ಪ್ರೇಮಿಗಳು...!
ಆರೋಪಿ ಕಿರಣ್ ಅನ್‌ಲೈನ್‌ನಲ್ಲಿ ಕೆಲ ವಸ್ತುಗಳನ್ನು ಮಾರಾಟ ಮಾಡುವ ಕೆಲಸ ಮಾಡಿಕೊಂಡಿದ್ದ. ಆರೋಪಿ ಮಹಿಳೆಗೆ ತೊಂದರೆ ನೀಡುತ್ತಿದ್ದ. ಅಲ್ಲದೆ, ಇತರೆ ಮಹಿಳೆಯರ ಜತೆ ಆರೋಪಿ ಸಂಪರ್ಕ ಇಟ್ಟುಕೊಂಡಿದ್ದ ಎನ್ನಲಾಗಿದೆ. ಈ ಎಲ್ಲ ವಿಚಾರಗಳಿಗೆ ದಂಪತಿ ನಡುವೆ ನಿತ್ಯ ಜಗಳ ನಡೆಯುತ್ತಿತ್ತು.
ಗುರುವಾರ ರಾತ್ರಿ ವನಿತಾ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಮೃತಳ ಪೋಷಕರು ವರದಕ್ಷಿಣೆ ಕಿರುಕುಳ ಎಂದು ಆರೋಪಿಸಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಬ್ಯಾಡರಹಳ್ಳಿ ಪೊಲೀಸರು ಮಾಹಿತಿ ನೀಡಿದರು.