BJP ಸಂಸದರೋರ್ವರ ಕಾರು ಚಾಲಕನಿಂದ ಕಿರುಕುಳ : ಮಹಿಳೆ ಆತ್ಮಹತ್ಯೆ

Suvarna News   | Asianet News
Published : Dec 24, 2019, 09:56 AM IST
BJP ಸಂಸದರೋರ್ವರ ಕಾರು ಚಾಲಕನಿಂದ ಕಿರುಕುಳ : ಮಹಿಳೆ ಆತ್ಮಹತ್ಯೆ

ಸಾರಾಂಶ

ಬಿಜೆಪಿ ಸಂಸದರೋರ್ವರ ಕಾರು ಚಾಲಕನ ಕಿರುಕುಳದಿಂದ ಬೇಸತ್ತು ಮಹಿಳೆಯೋರ್ವರು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. 

ಚಿತ್ರದುರ್ಗ (ಡಿ.24): ಮೈದುನನ ಕಿರುಕುಳದಿಂದ ಅತ್ತಿಗೆ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. 

ಚಿತ್ರದುರ್ಗ ಜಿಲ್ಲೆಯ ಸಿದ್ಧಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಡೆತ್ ನೋಟ್ ಬರೆದಿತ್ತು ಜ್ಯೋತಿ [40 ] ಆತ್ಮಹತ್ಯೆಗೆ ಶರಣಾಗಿದ್ದಾರೆ. 

ದಾವಣಗೆರೆ ಬಿಜೆಪಿ ಸಂಸದ ಜಿಎಂ ಸಿದ್ದೇಶ್ವರ್ ಕಾರು ಚಾಲಕನ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ಚಾಲಕ ಪ್ರಭುಲಿಂಗ ಕಿರಕುಳದಿಂದ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. 

ಮಹಿಳೆಯ ಮನೆಗೆ ವಿದ್ಯುತ್ ಹಾಗೂ ನೀರಿನ ಸರಬರಾಜು ಕಡಿತ ಮಾಡಿ ಕಿರುಕುಳ ನೀಡಿದ್ದರಿಂದ ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. 

ಸುಪಾರಿ ಕೊಟ್ಟು ಪತ್ನಿಯನ್ನು ಕೊಲೆ ಮಾಡಿಸಿದ್ದ ಪತಿ ಸೆರೆ...

ಸಂಸದನ ಕಾರು ಚಾಲಕ, ಹೆಚ್ಚು ಪವರ್ ಇದೆ ಎಂದು ಈ ಕೃತ್ಯ ಎಸಗಿದ್ದಾನೆ. ಈ ನಿಟ್ಟಿನಲ್ಲಿ ಪ್ರಭುಲಿಂಗ ಅವರನ್ನು ತಕ್ಷಣವೇ ಬಂಧಿಸಬೇಕು ಎಂದು ಮೃತ ಮಹಿಳೆಯ ಸಂಬಂಧಿಕರು ಆಗ್ರಹಿಸಿದ್ದಾರೆ. 

ಈ ಸಂಬಂಧ ಚಿತ್ರದುರ್ಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!